ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಬಸ್ ನಿಲ್ದಾಣದಿಂದ ಶಾಸ್ತ್ರಿ ಸರ್ಕಲ್ ಕಡೆಗೆ ಸರ್ವಿಸ್ ರಸ್ತೆ ಬದಿ ಅ. 3 ರಂದು ಸಂಜೆ ನಡೆದುಕೊಂಡು ಹೋಗುತ್ತಿದ್ದ ಜ್ಯೋತಿ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರವನ್ನು ಬೈಕ್‌ನಲ್ಲಿ ಬಂದು ಕಳ್ಳತನಗೈದು ಪರಾರಿಯಾಗಿದ್ದ ಇಬ್ಬರನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.
ಸೊರಬ ತಾಲೂಕಿನ ಆನವಟ್ಟಿ ಗ್ರಾಮದ ಸಂಜಯ ಎಲ್. (33) ಹಾಗೂ ದಾವಣಗೆರೆ ಜಿಲ್ಲೆಯ ವಿನೋಬಾ ನಗರ ನಿವಾಸಿ ವಸಂತ ಕುಮಾರ್ (30) ಬಂಧಿತರು.3 ಲಕ್ಷ ರೂ. ಮೌಲ್ಯದ ಸರ, ಕಾರು, ಬೈಕನ್ನು ವಶಕ್ಕೆ ಪಡೆದಿದ್ದಾರೆ.
ಅ.03ರ ಸಂಜೆ 04:35ರ ವೇಳೆ ಕುಂದಾಪುರ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಿಂದ ಶಾಸ್ತ್ರಿ ಪಾರ್ಕ್ ಕಡೆಗೆ ಸರ್ವಿಸ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಬಿ.ಎಸ್.ಎನ್.ಎಲ್ ಕಛೇರಿ ಬಳಿ ಹಿಂದಿನಿಂದ ಮೋಟಾರ್ ಸೈಕಲ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಅವರ ಕುತ್ತಿಗೆಯಲ್ಲಿದ್ದ ಕರಿಮಣಿ ಸರವನ್ನು ಸುಲಿಗೆ ಮಾಡಿಕೊಂಡು ಹೋಗಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ತನಿಖಾಧಿಕಾರಿಯಾದ ಪ್ರಭಾರ ಪೊಲೀಸ್ ನಿರೀಕ್ಷಕ ಜಯರಾಮ ಡಿ. ಗೌಡ ಅವರು ತನಿಖೆಯನ್ನು ಕೈಗೊಂಡು, ವಿವಿಧ ಆಯಾಮಗಳಲ್ಲಿ ಮಾಹಿತಿಗಳನ್ನು ಕಲೆ ಹಾಕಿದ್ದರು.
ಕಾರ್ಯಾಚರಣೆಯಲ್ಲಿ ಕುಂದಾಪುರ ಪೊಲೀಸ್ ವೃತ್ತ ನಿರೀಕ್ಷಕರಾದ ಜಯರಾಮ ಡಿ. ಗೌಡರವರ ನೇತೃತ್ವದಲ್ಲಿ ಕುಂದಾಪುರ ಠಾಣಾ ಪಿ.ಎಸ್.ಐ ನಂಜಾನಾಯ್ಕ್ ಎನ್, ಹಾಗೂ ಪಿ.ಎಸ್.ಐ ಪುಷ್ಪಾ, ಮತ್ತು ಕುಂದಾಪುರ ಸಂಚಾರ ಠಾಣಾ ಪಿ.ಎಸ್.ಐ ನೂತನ್ ಹಾಗೂ ಸಿಬ್ಬಂದಿಗಳಾದ ಎ.ಎಸ್.ಐ ಮೋನ ಪೂಜಾರಿ ಹಾಗೂ ಪೊಲೀಸ್ ಹೆಡ್ ಕಾನ್ಟೇಬಲ್‌ಗಳಾದ ಮೋಹನ್, ಸಂತೋಷ, ಪ್ರಿನ್ಸ್, ಮಂಜುನಾಥ ಹಾಗೂ ಪೊಲೀಸ್ ಕಾನ್ಟೇಬಲ್ ಗಳಾದ ಘನಶ್ಯಾಮ, ಲೋಹಿತ್, ಮೌನೇಶ್, ಕಿಶನ್, ರಾಜು ಭೋವಿ, ಮಹಾಬಲ, ರಾಘವೇಂದ್ರ ಗೌತಮ್, ನಾಗಶ್ರೀ ಹಾಗೂ ಕುಂದಾಪುರ ವೃತ್ತ ಕಚೇರಿಯ ಅಣ್ಣಪ್ಪರವರು ಪಾಲ್ಗೊಂಡಿರುತ್ತಾರೆ.










