ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಪಟ್ಟಣಪಂಚಾಯತ್ ಸುವರ್ಣ ಮಹೋತ್ಸವ ಸಂಭ್ರಮದ ಹೊಸ್ತಿಲಲ್ಲಿದೆ, ಪುರಸಭೆಯಿಂದ ಪಟ್ಟಣಪಂಚಾಯತ್ ನಡೆದು ಬಂದ ಹಾದಿ ಅತ್ಯದ್ಭುತ, ಈ ಹಿನ್ನಲ್ಲೆಯಲ್ಲಿ ಇದೀಗ ಸಂಭ್ರಮಾಚರಣೆಗೆ ಸ್ವಚ್ಛತಾ ಅಭಿಯಾನ ಮುನ್ನುಡಿ ಬರೆದಿದೆ ಎಂದು ಸಾಲಿಗ್ರಾಮ ಪಟ್ಟಣಪಂಚಾಯತ್ ಅಧ್ಯಕ್ಷೆ ಸುಕನ್ಯಾ ಜೆ. ಶೆಟ್ಟಿ ನುಡಿದರು.
ಅವರು ಭಾನುವಾರ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾಮಂಡಲ ಇವರ ನೇತೃತ್ವದಲ್ಲಿ ಹಂದಟ್ಟು ಮಹಿಳಾ ಬಳಗ, ಮಣೂರು ಫ್ರೆಂಡ್ಸ್, ಜೆಸಿಐ ಕೋಟ ಸಿನಿಯರ್ ಲಿಜನ್, ಗೆಳೆಯರ ಬಳಗ ಕಾರ್ಕಡ, ಆಶ್ರಿತ ಕಾಲೇಜು ಕೋಟ ಸಹಯೋಗದೊಂದಿಗೆ ಸಾಲಿಗ್ರಾಮ ಪಟ್ಟಣಪಂಚಾಯತ್ ಸಂಯೋಜನೆಯೊಂದಿಗೆ 275ನೇ ಪರಿಸರಸ್ನೇಹಿ ಅಭಿಯಾನದ ಪ್ರಯುಕ್ತ ಸುವರ್ಣ ಮಹೋತ್ಸವ ಸಮರ್ಪಿತ ಸಾಲಿಗ್ರಾಮ ರಾಷ್ಟ್ರೀಯ ಹೆದ್ದಾರಿ ಎರಡು ದಿಕ್ಕುಗಳನ್ನು ಪ್ಲಾಸ್ಟಿಕ್ ಮುಕ್ತ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ಪಂಚವರ್ಣ ಸಂಘಟನೆ ಸಾಲಿಗ್ರಾಮ ಪಟ್ಟಣಪಂಚಾಯತ್ ಕೃತಜ್ಞತೆಗಳನ್ನು ಸಲ್ಲಿಸಿದ್ದು ಅಕ್ಟೋಬರ್ 25ರಂದು ನಡೆಯಲಿರುವ ಕಾರ್ಯಕ್ರಮಸಲ್ಲಿ ಭಾಗಿಯಾಗಲು ಕರೆ ನೀಡಿದರು.
ಪಟ್ಟಣಪಂಚಾಯತ್ ಸ್ಥಾಯೀ ಸಮಿತಿಯ ಅನುಸೂಯ ಹೇರ್ಳೆ, ಆರೋಗ್ಯ ನಿರೀಕ್ಷಕಿ ಮಮತಾ, ಪೌರಕಾರ್ಮಿಕರು, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಕೆ. ಮನೋಹರ್ ಪೂಜಾರಿ, ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಹಂದಟ್ಟು ಮಹಿಳಾ ಬಳಗದ ಪುಷ್ಭ ಹಂದಟ್ಟು, ಜೆಸಿಐ ಸಿನಿಯರ್ ಲಿಜನ್ ಅಧ್ಯಕ್ಷ ಕೇಶವ ಆಚಾರ್ ಕೋಟ, ಪಂಚವರ್ಣದ ಉಪಾಧ್ಯಕ್ಷ ದಿನೇಶ್ ಆಚಾರ್, ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್, ಆಶ್ರಿತ ಕಾಲೇಜಿನ ವಿದ್ಯಾರ್ಥಿಗಳು ಇದ್ದರು. ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು.















