Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಳ್ವಾಸ್ ಕಾನೂನು ಕಾಲೇಜಿನಲ್ಲಿ ವಿಶೇಷ ಉಪನ್ಯಾಸ
    alvas nudisiri

    ಆಳ್ವಾಸ್ ಕಾನೂನು ಕಾಲೇಜಿನಲ್ಲಿ ವಿಶೇಷ ಉಪನ್ಯಾಸ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ: ಆಳ್ವಾಸ್ ಕಾನೂನು ಕಾಲೇಜಿನ ವತಿಯಿಂದ ‘ಸೈಬರ್ ಕ್ರೈಮ್, ಡ್ರಗ್ ಟ್ರಾಫಿಕಿಂಗ್ ಹಾಗೂ ಸೋಶಿಯಲ್ ಆ್ಯಂಡ್ ಲೀಗಲ್ ಇಂಪ್ಲಿಕೇಶನ್ಸ್’ ವಿಷಯದ ಕುರಿತು ವಿಶೇಷ ಉಪನ್ಯಾಸವನ್ನು ಸೋಮವಾರದಂದು ವಿದ್ಯಾಗಿರಿ ಕ್ಯಾಂಪಸ್‌ನಲ್ಲಿ ಜರುಗಿತು.

    Click Here

    Call us

    Click Here

    ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ, ಐಪಿಎಸ್ ಮಾತನಾಡಿ, “ಸೈಬರ್ ಅಪರಾಧಗಳು ಇಂದು ಅತ್ಯಂತ ಸಂಕೀರ್ಣ ಹಾಗೂ ಕಾನೂನು ಜಾರಿಗೆ ಅತಿ ದೊಡ್ಡ ಸವಾಲಾಗಿ ಪರಿಣಮಿಸಿವೆ. ವಂಚಕರು ಈಗ ಅಸಲಿಯಂತೆ ಕಾಣುವ, ನಕಲಿ ಹೂಡಿಕೆ ವೆಬ್‌ಸೈಟ್ ಲಿಂಕ್‌ಗಳನ್ನು ಸೃಷ್ಟಿಸುತ್ತಿದ್ದಾರೆ.

    ಜನರು ಅವುಗಳ ಮೇಲೆ ಕ್ಲಿಕ್ ಮಾಡಿದಾಗ ನಕಲಿ ಅಪ್ಲಿಕೇಶನ್ ಡೌನ್‌ಲೋಡ್ ಆಗಿ, ಜನರು  ಅದನ್ನು ನಿಜವೆಂದು ನಂಬಿ ನಿರಂತರವಾಗಿ ಹಣ ಹೂಡುತ್ತಾರೆ. ಈ ಹಣ ವಂಚಕರ ‘ಮ್ಯೂಲ್ ಅಕೌಂಟ್’ (ಬೇರೊಬ್ಬರ ಹೆಸರಿನಲ್ಲಿ ತೆರೆಯಲಾದ  ಆದರೆ ಸೈಬರ್ ವಂಚಕರಿಂದ ನಿಯಂತ್ರಿಸಲ್ಪಡುವ ಬ್ಯಾಂಕ್ ಖಾತೆ) ಗಳಿಗೆ ವರ್ಗಾಯಿಸಲಾಗುತ್ತದೆ. ಈ ಖಾತೆಗಳು ಹಲವು ರಾಜ್ಯಗಳಲ್ಲಿ ಹರಡಿರುವುದರಿಂದ ಹಣದ  ವರ್ಗಾವಣೆಯನ್ನು ಪತ್ತೆಹಚ್ಚುವುದು ಕಷ್ಟವಾಗುತ್ತದೆ. ನಂತರ ಈ ಹಣವನ್ನು ನಗದಾಗಿ  ಬದಲಾಯಿಸಿ ಬಿಟ್‌ಕಾಯಿನ್‌ಗೆ ಪರಿವರ್ತಿಸಿ ವಿದೇಶಗಳಿಗೆ ಕಳುಹಿಸುತ್ತಾರೆ ಎಂದು ತಿಳಿಸಿದರು.

    ಸರ್ಕಾರದ ಗೃಹ ವ್ಯವಹಾರಗಳ ಸಚಿವಾಲಯ ಸೈಬರ್ ಅಪರಾಧಗಳ ವಿರುದ್ಧ ಸಕ್ರಿಯವಾಗಿ ಕೆಲಸ ಮಾಡುತ್ತಿದೆ. ದೇಶದೊಳಗೆ ಕಾರ್ಯನಿರ್ವಹಿಸುವ ವಂಚಕರನ್ನು ಬಂಧಿಸಿ, ಹಣವನ್ನು ವಾಪಸು ಪಡೆಯಲು ಪ್ರಯತ್ನಿಸಲಾಗುತ್ತದೆ. ಈ ನೆಲೆಯಲ್ಲಿ ಗ್ರಾಹಕರಿಗೆ ‘1930’ ಸೈಬರ್ ಕ್ರೈಮ್ ಹೆಲ್ಪ್ಲೈನ್ ನಂಬರ್  ಸಹಕಾರಿಯಾಗಿದೆ. ವಂಚನೆಗೊಳಗಾದವರು ಶೀಘ್ರವಾಗಿ ಈ ಹೆಲ್ಪ್ಲೈನ್‌ಗೆ ಮಾಹಿತಿ ನೀಡಿದರೆ, ಖಾತೆಗಳನ್ನು ಸ್ಥಗಿತಗೊಳಿಸಿ ಮತ್ತು ಹಣ ವಾಪಸು ಪಡೆಯಲು ಸಾಧ್ಯ  ಎಂದರು.

    ಮಾದಕ ವಸ್ತುಗಳ ಮೂಲಕ ಯುವ ಜನರನ್ನು ತಪ್ಪು ದಾರಿಗೆ ಎಳೆಯುವ ಹಾಗೂ ಕೋಮು ಸೌಹಾರ್ದತೆಯನ್ನು ಕೆಡಿಸುವ ಕೆಲಸವಾಗುತ್ತಿದೆ. ವಿದ್ಯಾರ್ಥಿಗಳು ಮನರಂಜನೆ ಅಥವಾ ಸ್ನೇಹಿತರ ಪ್ರಭಾವದಿಂದಲೂ ಡ್ರಗ್ಸ್ ವ್ಯಸನದ ಬಲೆಗೆ ಬೀಳಬಹುದು. ಜಾಗೃತೆ ವಹಿಸಿ.  ಬಹುಪಾಲು ಅತ್ಯಾಚಾರ ಮತ್ತು ಮಹಿಳೆಯರ ಮೇಲಿನ ಕಿರುಕುಳವು ಪರಿಚಿತರ ಅಥವಾ ಕುಟುಂಬದವರಿಂದಲೇ ನಡೆಯುತ್ತದೆ. ಇಂತಹ ಸಂದರ್ಭದಲ್ಲಿ ಧ್ಯೆರ್ಯದಿಂದ ಪೊಲೀಸರಿಗೆ ಮಾಹಿತಿ  ನೀಡುವುದು ಅತ್ಯಗತ್ಯ ಎಂದು ಸಲಹೆ ನೀಡಿದರು.

    ಅಳ್ವಾಸ್ ಸ್ವಾಯತ್ತ ಕಾಲೇಜಿನ ಪ್ರಾಚಾರ್ಯ ಡಾ. ಕುರಿಯನ್ ಮಾತನಾಡಿ, “ಇಂದು ಪೊಲೀಸ್ ಇಲಾಖೆಯು ಜನರಿಗೆ ಸಹಾಯವಾಗಲು ವಿವಿಧ ಆ್ಯಪಗಳು ಮತ್ತು ಸ್ಕ್ಯಾನಿಂಗ್ ಸಾಧನಗಳನ್ನು ಅಭಿವೃದ್ಧಿಪಡಿಸಿದೆ. ಆದರೆ ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿಯನ್ನು ಅರಿತು ಸಮಸ್ಯೆಗಳನ್ನು ವರದಿ ಮಾಡಿದಾಗ ಮಾತ್ರ ನಿಜವಾದ ಬದಲಾವಣೆ ಸಾಧ್ಯ ಎಂದು ತಿಳಿಸಿದರು.

    ಕಾರ್ಯಕ್ರಮದಲ್ಲಿ ಆಳ್ವಾಸ್  ಶಿಕ್ಷಣ ಪ್ರತಿಷ್ಟಾನದ ಟ್ರಸ್ಟಿ ವಿವೇಕ್ ಆಳ್ವ,  ಆಳ್ವಾಸ್ ಕಾನೂನು ಕಾಲೇಜಿನ ಪ್ರಾಚಾರ್ಯ ಮಹಾಂತೇಶ್ ಜಿ.ಎಸ್., ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ ಇದ್ದರು.

    Click here

    Click here

    Click here

    Call us

    Call us

    ನಿಶಾಂತ್ ಅತಿಥಿಯನ್ನು ಪರಿಚಯಿಸಿದರು. ಸಾಧನಾ ಜಿ.ಎಸ್. ನಿರೂಪಿಸಿ, ನಿಷಿ ವಂದಿಸಿದರು. 

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಆಳ್ವಾಸ್ ಕಾನೂನು ಕಾಲೇಜು: ಎನ್‌ಎಸ್‌ಎಸ್ ಮತ್ತು ರೆಡ್‌ಕ್ರಾಸ್ ಘಟಕದ ಉದ್ಘಾಟನಾ ಕಾರ್ಯಕ್ರಮ

    09/11/2025

    ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವಿಕ್ಟರಿ – 2025  

    08/11/2025

    KUPMA ಒಕ್ಕೂಟದ ಉಡುಪಿ ಜಿಲ್ಲಾ ಪದಾಧಿಕಾರಿಗಳ ಆಯ್ಕೆ

    08/11/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಆಳ್ವಾಸ್ ಕಾನೂನು ಕಾಲೇಜು: ಎನ್‌ಎಸ್‌ಎಸ್ ಮತ್ತು ರೆಡ್‌ಕ್ರಾಸ್ ಘಟಕದ ಉದ್ಘಾಟನಾ ಕಾರ್ಯಕ್ರಮ
    • ಇಸ್ರೇಲ್‌ನ ಜನತೆಯ ಮನಗೆದ್ದ ಬೆಂಗಳೂರಿನ ಯಕ್ಷದೇಗುಲ ಯಕ್ಷಗಾನ ವೈಭವ
    • ತ್ರಾಸಿ ಬಳಿ ನಿಂತಿದ್ದ ಲಾರಿಯಲ್ಲಿ ಚಾಲಕನ ಮೃತದೇಹ ಪತ್ತೆ
    • ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆಯ್ದ 21 ಶಾಲೆಗಳ ವಿದ್ಯಾರ್ಥಿಗಳಿಗೆ ಸ್ಕೂಲ್ ಕಿಟ್ ವಿತರಣೆ
    • ಗುಜ್ಜಾಡಿ: ನಾಯಿಗಳಿಗೆ ಹಾಗೂ ಬೆಕ್ಕುಗಳಿಗೆ ಉಚಿತ ರೇಬಿಸ್ ನಿರೋಧಕ ಲಸಿಕಾ ಶಿಬಿರ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d