Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೊಡೇರಿ: ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು, ಓರ್ವ ಪ್ರಾಣಾಪಾಯದಿಂದ ಪಾರು
    ಅಪಘಾತ-ಅಪರಾಧ ಸುದ್ದಿ

    ಕೊಡೇರಿ: ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು, ಓರ್ವ ಪ್ರಾಣಾಪಾಯದಿಂದ ಪಾರು

    Updated:14/10/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಸಮುದ್ರದಲ್ಲಿ ಈಜಲು ತೆರಳಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಕಿರಿಮಂಜೇಶ್ವರ ಗ್ರಾಮದ ಕೊಡೇರಿ ಹೊಸಹಿತ್ಲುವಿನಲ್ಲಿ ನಡೆದಿದೆ. ಹೊಸಹಿತ್ಲು ಮಕ್ಕಿತಾರು ನಿವಾಸಿಗಳಾದ ಉದಯ ದೇವಾಡಿಗ ಎಂಬುವವರ ಪುತ್ರ ಆಶಿಶ್‌ ದೇವಾಡಿಗ (15), ಮಾರುತಿ ಪೂಜಾರಿ ಅವರ ಪುತ್ರ ಸೂರಜ್‌ ಪೂಜಾರಿ (16), ಸುಧಾಕರ ದೇವಾಡಿಗ ಅವರ ಪುತ್ರ ಸಂಕೇತ್‌ ದೇವಾಡಿಗ (18) ಮೃತ ದುರ್ದೈವಿಗಳು. ಆಶಿಶ್‌ ದೇವಾಡಿಗನ ಸಹೋದರ ಕೌಶಿಕ್‌ ದೇವಾಡಿಗ (18) ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    Click Here

    Call us

    Click Here

    ನಾಲ್ವರು ವಿದ್ಯಾರ್ಥಿಗಳು ಸಂಜೆಯ ವೇಳೆಗೆ ಈಜಲು ತೆರಳಿದ್ದು, ಈ ವೇಳೆ ಸಮುದ್ರ ಅಲೆಗಳ ಹೊಡೆತಕ್ಕೆ ಸಿಲುಕಿ ದಿಕ್ಕಾಪಾಲಾಗಿದ್ದಾರೆ. ಮೂವರು ನೀರಿನಲ್ಲಿ ಕೊಚ್ಚಿಹೋಗಿದ್ದರೇ, ಓರ್ವ ಹರಸಾಹಸಪಟ್ಟು ದಡಕ್ಕೆ ಸೇರಿಕೊಂಡಿದ್ದಾನೆ. ಮೃತಪಟ್ಟ ವಿದ್ಯಾರ್ಥಿಗಳಾದ ಆಶಿಶ್‌ ದೇವಾಡಿಗ ಕಿರಿಮಂಜೇಶ್ವರ ಹೈಸ್ಕೂಲಿನಲ್ಲಿ 9ನೇ ತರಗತಿ, ಸೂರಜ್‌ ಪೂಜಾರಿ 10 ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರೇ, ಸಂಕೇತ್‌ ದೇವಾಡಿಗ ಬೈಂದೂರು ಪಿಯು ಕಾಲೇಜಿನಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಯಾಗಿದ್ದರು. ನಾಲ್ವರು ಸ್ನೇಹಿತರು ಒಟ್ಟಾಗಿ ಸಮುದ್ರ ತೀರಕ್ಕೆ ತೆರಳಿದ್ದಾರೆ. ಈ ವೇಳೆ ಈ ದುರ್ಘಟನೆ ನಡೆದಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ವಿದ್ಯಾರ್ಥಿಗಳ ಪತ್ತೆಗೆ ಮುಂದಾಗಿದ್ದಾರೆ. ಮುಳುಗುತಜ್ಞರು ಹಾಗೂ ಸ್ಥಳೀಯರು ಬಾಲಕರನ್ನು ಪತ್ತೆಮಾಡಿ ದಡಕ್ಕೆ ತಂದಿದ್ದಾರೆ. ಅಷ್ಟರಲ್ಲೇ ಅವರು ಮೃತಪಟ್ಟಿರುವುದು ತಿಳಿದುಬಂದಿದೆ. ಕುಟುಂಬಿಕರ ರೋಧನ ಮುಗಿಲುಮುಟ್ಟಿದೆ.

    ಮೃತ ಬಾಲಜ ಮೃತದೇಹವನ್ನು ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಬೈಂದೂರು ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ವಂದಿಗಳು ಪತ್ತೆ ಕಾರ್ಯಕ್ಕೆ ಸಹಕರಿಸಿದ್ದಾರೆ. ಬೈಂದೂರು ಠಾಣೆಯಲ್ಲಿ ಪ್ರಕರಣ ಇನ್ನಷ್ಟೇ ದಾಖಲಾಗಬೇಕಿದೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಂಗಳೂರು: ಟಿಪ್ಪರ್ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರನ ಸಾವು

    07/01/2026

    ಪಾಂಡೇಶ್ವರ: ಸ್ನಾನ ಗೃಹ ಇಣುಕಿದ ಆಗಂತುಕ. ಮಹಿಳೆ ಕೂಗಿಕೊಂಡ ಹಿನ್ನೆಲೆ ಎಸ್ಕೇಪ್

    06/01/2026

    ಕೆಎಸ್‌ಆರ್‌ಟಿಸಿ ಬಸ್ಸಿಗೆ ಟಿಪ್ಪರ್‌ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಗಂಭೀರ, 12ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

    05/01/2026
    Leave A Reply Cancel Reply

    five + 18 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಚಿನ್ನ ಖರೀದಿ ನೆಪದಲ್ಲಿ ಜ್ಯುವೆಲರಿಯಿಂದ ಚಿನ್ನದ ಸರ ಕಳ್ಳತನ- ಆರೋಪಿ ಬಂಧನ
    • ಕುಂದಾಪುರ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ರಾಜು ದೇವಾಡಿಗ ನಿಧನ
    • ಗಂಗೊಳ್ಳಿ ಶ್ರೀ ವೀರೇಶ್ವರ ದೇವಸ್ಥಾನದಲ್ಲಿ ಹಿಂದೂ ಸಂಗಮ ಕಾರ್ಯಕ್ರಮ
    • ಕುಂದಾಪುರ: ಟ್ಯಾಟೂ ಕಲಾವಿದನ ಎದೆಗೆ ಗುಂಡು
    • ಜಿಎಸ್‌ಟಿ, ಆದಾಯ ತೆರಿಗೆ ಇಲಾಖೆಯ ದಾಖಲೆಯಂತೆ 52 ಸಾವಿರ ಫಲಾನುಭವಿಗಳಿಗೆ ಸಮಸ್ಯೆ: ಲಕ್ಷ್ಮೀ ಹೆಬ್ಬಾಳಕರ್‌

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.