Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮವನ್ನು ವೈಭವಯುತವಾಗಿ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮವನ್ನು ವೈಭವಯುತವಾಗಿ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ

    Updated:15/10/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಜಿಲ್ಲಾ ಮಟ್ಟದಲ್ಲಿ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮವನ್ನು ವಿಜೃಂಭಣೆ ಹಾಗೂ ವೈಭವಯುತವಾಗಿ ಆಚರಿಸಲು ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು.

    Click Here

    Call us

    Click Here

    ಅವರು ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಕನ್ನಡ ರಾಜ್ಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ನವೆಂಬರ್ 1 ರಂದು ಉಡುಪಿ ನಗರದ ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನಡೆಸಿ, ಸಂದೇಶ ನೀಡಲಿದ್ದಾರೆ. ಸಮಾರಂಭದಲ್ಲಿ ಪೊಲೀಸ್, ಅಬಕಾರಿ, ಅರಣ್ಯ, ಗೃಹ ರಕ್ಷಕ, ಎನ್.ಎಸ್.ಎಸ್, ಎನ್.ಸಿ.ಸಿ. ಸ್ಕೌಟ್ ಮತ್ತು ಗೈಡ್ಸ್, ಸೇವಾದಳ ಹಾಗೂ ವಿವಿದ ಶಾಲಾ ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯಲಿದ್ದು, ನಂತರದಲ್ಲಿ ಶಾಲಾ ವಿದ್ಯಾಥಿಗಳಿಂದ ಗುಂಪು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದ ಅವರು, ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆಗೈದ ಆಯ್ಕೆಯಾದ ಗಣ್ಯರಿಗೆ ಸನ್ಮಾನ ನಡೆಯಲಿದೆ ಎಂದರು.

    ಕಾರ್ಯಕ್ರಮಕ್ಕೂ ಮುನ್ನ ಬೆಳಗ್ಗೆ 8 ಗಂಟೆಗೆ ನಗರದ ಬೋರ್ಡ್ ಹೈಸ್ಕೂಲ್‌ನಲ್ಲಿ ಕನ್ನಡ ತಾಯಿ ಭುವನೇಶ್ವರಿಗೆ ಪೂಜೆ ಸಲ್ಲಿಸಿ, ನಂತರ ಅಜ್ಜರಕಾಡು ಕ್ರೀಡಾಂಗಣದವರೆಗೆ ಕನ್ನಡ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರದ ಮೆರವಣಿಗೆ ನಡೆಯಲಿದ್ದು, ಕರ್ನಾಟಕ ಇತಿಹಾಸ, ಪರಂಪರೆ, ಸಂಸ್ಕೃತಿ ಮತ್ತು ಸಂಪ್ರದಾಯಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ  ವಿವಿಧ ಸಾಂಸ್ಕೃತಿಕ ಕಲಾತಂಡಗಳು ಹಾಗೂ ವಿವಿಧ ಇಲಾಖೆಯ ಯೋಜನೆಗಳನ್ನು ಸಾರುವ ಸ್ಥಬ್ಧಚಿತ್ರಗಳು ಮೆರವಣಿಗೆಯಲ್ಲಿ ಸಾಗಲಿವೆ ಎಂದರು.

    ಕಾರ್ಯಕ್ರಮಕ್ಕೆ ಜನಪ್ರನಿಧಿಗಳು, ಗಣ್ಯರು, ಮುಖಂಡರು ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರಿಗೆ ಶಿಷ್ಠಾಚಾರದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ, ಆಹ್ವಾನಿಸಬೇಕು. ಕಾರ್ಯಕ್ರಮದಲ್ಲಿ ಸರಕಾರಿ ಅಧಿಕಾರಿಗಳು, ಸಿಬ್ಬಂದಿಗಳು, ಸಂಘ-ಸಂಸ್ಥೆಗಳು ಕಡ್ಡಾಯವಾಗಿ ಭಾಗವಹಿಸಬೇಕು ಎಂದ ಅವರು,  ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.

    Click here

    Click here

    Click here

    Click Here

    Call us

    Call us

    ಕಾರ್ಯಕ್ರಮನ್ನು ಯಶಸ್ಸಿಯಾಗಿ ನಡೆಸಲು ವಿವಿಧ ಉಪ ಸಮಿತಿಗಳನ್ನು ರಚಿಸಲಾಗಿದ್ದು, ಸಮಿತಿಗೆ ನೀಡಿರುವ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದ ಅವರು ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವುದರೊಂದಿಗೆ ಭಾಗವಹಿಸುವ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದರು.

    ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್, ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ನಗರಸಭೆ ಪೌರಾಯುಕ್ತ ಮಹಾಂತೇಶ್ ಹಂಗರಗಿ, ಹಾಗೂ ಜಿಲ್ಲಾಮಟ್ಟದ ವಿವಿಧ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026
    Leave A Reply Cancel Reply

    3 × four =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.