ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: 2025-26ನೇ ಸಾಲಿಗೆ ಅಲ್ಪಸಂಖ್ಯಾತ ವರ್ಗಗಳಿಗೆ ಸೇರಿದ (ಮುಸ್ಲಿಂ,ಕ್ರಿಶ್ಚಿಯನ್,ಜೈನ್,ಬೌದ್ದ ಮತ್ತು ಸಿಖ್) ಕಾನೂನು ಪದವೀಧರರಿಗೆ ವಕೀಲಿ ವೃತ್ತಿಯಲ್ಲಿ ತರಬೇತಿ ನೀಡಿ ಶಿಷ್ಯವೇತನ ಮಂಜೂರು ಮಾಡಲು ಅರ್ಹ ಮತ್ತು ಆಸಕ್ತ ಕಾನೂನು ಪದವೀಧರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅವಶ್ಯಕ ದಾಖಲೆಗಳೊಂದಿಗೆ ಅ.31ರ ಒಳಗಾಗಿ ಅರ್ಜಿ ಸಲ್ಲಿಸಬಹುದು.
ನಿಗದಿತ ಅರ್ಜಿ ನಮೂನೆಗಳನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಯಿಂದ ಕೆಲಸದ ಸಮಯದಲ್ಲಿ ಪಡೆದುಕೊಳ್ಳಬಹುದು ಹಾಗೂ ಹೆಚ್ಚಿನ ಮಾಹಿತಿಗಾಗಿ ದೂ.ಸಂ:0820-2574596 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.









