ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ತೆಕ್ಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಪಘಾತಕ್ಕೀಡಾಗಿ ಬಿದ್ದಿದ್ದ ಯುವಕನ ಮೇಲೆ ಕ್ರೇನ್ ಹರಿದು ಮೃತಪಟ್ಟ ದಾರುಣ ಘಟನೆ ನಡೆದಿದೆ. ತೆಕ್ಕಟ್ಟೆ ಗ್ರಾಮದ ಅಭಿಷೇಕ್ ಪೂಜಾರಿ ಮೃತ ದುರ್ದೈವಿ.
ತೆಕ್ಕಟ್ಟೆಯಲ್ಲಿ ಯೂಟರ್ನ್ ತೆಗೆದುಕೊಳ್ಳುವ ಸ್ಥಳದಲ್ಲಿ ನಿಂತಿದ್ದ ಖಾಸಗಿ ಬಸ್ ನಿಲ್ಲಿಸಲಾಗಿತ್ತು. ಅದರ ಪಕ್ಕದಲ್ಲೇ ಬೈಕ್ ಸವಾರ ಯುಟರ್ನ್ ತೆಗೆದುಕೊಳ್ಳಲು ಮುಂದಾಗಿದ್ದ. ಆದರೆ ಏಕಾಏಕಿ ಬಸ್ ಚಲಿಸಿದ ಪರಿಣಾಮ ಬೈಕ್ ಸವಾರ ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದಿದ್ದಾನೆ. ಸವಾರ ಬೀಳುತ್ತಿದ್ದಂತೆ ಅದೇ ಮಾರ್ಗವಾಗಿ ಬಂದ ಕ್ರೇನ್ ಆತನ ಮೇಲೆ ಹರಿದಿದೆ. ಗಾಯಾಳು ಯುವಕನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.










