ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ ವಿಜ್ಞಾನ ವಿಷಯಗಳ ಬರವಣಿಗೆಯನ್ನು ಪ್ರೋತ್ಸಾಹಿಸುವ ಸಲುವಾಗಿ ಕೃಷಿ, ವಿಜ್ಞಾನ, ತಂತ್ರಜ್ಞಾನ ಮತ್ತು ವೈದ್ಯಕೀಯ ವಿಷಯಗಳ ಮೇಲೆ ಕನ್ನಡದಲ್ಲಿ ಜನವರಿ – 2023 ರಿಂದ ಡಿಸೆಂಬರ್-2025 ರ ಒಳಗೆ ಪ್ರಕಟವಾಗುವ ಪುಸ್ತಕಗಳ ಲೇಖಕರಿಂದ ಶ್ರೇಷ್ಠ ಪುಸ್ತಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜನವರಿ 5, 2026 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ವೆಬ್‌ಸೈಟ್ https://kstcademy.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಕಾಡೆಮಿಯ ಕಚೇರಿ ಪ್ರಕಟಣೆ ತಿಳಿಸಿದೆ.










