Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪಂಚವರ್ಣದ ರೈತರೆಡೆಗೆ ನಮ್ಮ ನಡಿಗೆ: ಪಾರಂಪಳ್ಳಿ ಸುರೇಶ್ ಉಪಾಧ್ಯಾಗೆ ಗೌರವ
    ಊರ್ಮನೆ ಸಮಾಚಾರ

    ಪಂಚವರ್ಣದ ರೈತರೆಡೆಗೆ ನಮ್ಮ ನಡಿಗೆ: ಪಾರಂಪಳ್ಳಿ ಸುರೇಶ್ ಉಪಾಧ್ಯಾಗೆ ಗೌರವ

    Updated:17/10/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ತಲಾಂತರಗಳಿಂದ ಬಳುವಳಿಯಾಗಿ ಬಂದ ರೈತ ಕಾಯಕ ಮುಂದೊಂದು ದಿನ ದೊಡ್ಡ ಆಸ್ತಿಯಾಗಿ ಹೊರಹೊಮ್ಮಲ್ಲಿದೆ ಎಂದು ಕೆ.ಎಂ ಎಫ್ ನಿರ್ದೇಶಕ ಕೆ. ಶಿವಮೂರ್ತಿ ಉಪಾಧ್ಯಾ ಹೇಳಿದರು.

    Click Here

    Call us

    Click Here

    ಅವರು ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ , ಪಂಚವರ್ಣ ಮಹಿಳಾ ಮಂಡಲ ಇದರ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಗೆಳೆಯರ ಬಳಗ ಕಾರ್ಕಡ, ಸ್ನೇಹಕೂಟ ಮಣೂರು, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ರೈತಧ್ವನಿ ಸಂಘ ಕೋಟ ಇವರ ಸಹಯೋಗದೊಂದಿಗೆ 49ನೇ ರೈತರೆಡೆಗೆ ನಮ್ಮ ನಡಿಗೆ ಸರಣಿ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಯುವ ಸಮುದಾಯ ಕೃಷಿ ಕಾಯಕದಲ್ಲಿ ಮಂಚೂಣಿಗೆ ನಿಲ್ಲಬೇಕು, ಸರಕಾರ ಕೃಷಿ ಕಾರ್ಯ ಉಳಿಯಲು ವಿವಿಧ ಯೋಜನೆಗಳನ್ನು ರೂಪಿಸಬೇಕು. ಪ್ರಸ್ತುತ ಭತ್ತದ ಬೆಳೆಗೆ ನೈಜ ಬೆಲೆ‌ ನೀಡಬೇಕು ಎಂದು ಸಭೆಯಲ್ಲಿ ಆಗ್ರಹಿಸಿದರಲ್ಲದೆ ಕೃಷಿಕರನ್ನು ಗುರುತಿಸುವ ಪಂಚವರ್ಣದ ಕಾರ್ಯ ಅತ್ಯಂತ ಶ್ರೇಷ್ಠತೆಯನ್ನು ಪಡೆದುಕೊಂಡಿದೆ ಎಂದರು.

    ರೈತಧ್ವನಿ ಸಂಘ ಕೋಟ ಅಧ್ಯಕ್ಷ ಎಂ. ಜಯರಾಮ ಶೆಟ್ಟಿ ಮಾತನಾಡಿ, ಕೃಷಿ ಕಾರ್ಯದಲ್ಲಿ ಸಮಗ್ರ ಕೃಷಿ ಪದ್ದತಿಯನ್ನು ಅನುಸರಿಸಬೇಕು. ಆಗ ಮಾತ್ರ ಲಾಭದಾಯಕ ಕೃಷಿಯಾಗಿಸಲು ಸಾಧ್ಯ ಎಂದರು. 49ನೇ ಸಾಧಕ ರೈತ ಪುರಸ್ಕಾರವನ್ನು ಪ್ರಗತಿಪರ ಕೃಷಿಕ ಪಾರಂಪಳ್ಳಿ ರವೀಂದ್ರ ಐತಾಳ್, ಪಾರಂಪಳ್ಳಿ ಸುರೇಶ್ ಉಪಾಧ್ಯಾ ಅವರಿಗೆ ಪ್ರದಾನಿಸಿದರು.

    ಕಾರ್ಯಕ್ರಮವನ್ನು ಗ್ರಾಮದ ಹಿರಿಯರಾದ ಶ್ರೀಧರ ಉಪಾಧ್ಯಾ ಉದ್ಘಾಟಿಸಿದರು. ರೈತ ಪುರಸ್ಕೃತ ಸುರೇಶ್ ಉಪಾಧ್ಯಾ ದಂಪತಿಗಳು ಗೋ ಪೂಜೆ ನೆರವೆರಿಸಿ, ಗಿಡ ನೆಟ್ಟು ಪರಿಸರ ಜಾಗೃತಿ ಮೆರೆದರು. ಸಭೆಯ ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಕೆ. ಮನೋಹರ್ ಪೂಜಾರಿ ವಹಿಸಿದ್ದರು.

    Click here

    Click here

    Click here

    Click Here

    Call us

    Call us

    ಉಡುಪಿ ಕೃಷಿ ಇಲಾಖೆಯ ಯೋಜನಾ ನಿರ್ದೇಶಕ ಡಾ. ರಾಜೇಶ್ ಕೃಷಿ ಬಗ್ಗೆ ಮಾಹಿತಿ ‌ನೀಡಿದರು. ಮುಖ್ಯ ಅಭ್ಯಾಗತರಾಗಿ ಕೃಷಿಕರಾದ ಪಾರಂಪಳ್ಳಿ ರಘು ಮಧ್ಯಸ್ಥ , ವಿನ್ ಲೈಟ್ ಸ್ಪೋಟ್ಸ್೯ ಕ್ಲಬ್ ಪಾರಂಪಳ್ಳಿ ಗೌರವಾಧ್ಯಕ್ಷ ರಾಜೇಶ್ ಉಪಾಧ್ಯಾ, ಗೆಳೆಯರ ಬಳಗ ಕಾರ್ಕಡ ಅಧ್ಯಕ್ಷ ಕೆ. ತಾರಾನಾಥ ಹೊಳ್ಳ, ಸ್ನೇಹಕೂಟ ಮಣೂರು ಸಂಚಾಲಕಿ ಭಾರತಿ ವಿ. ಮಯ್ಯ,ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಕಾರ್ಯದರ್ಶಿ ಶರಣಯ್ಯ ಹಿರೇಮಠ, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ ಉಪಸ್ಥಿತರಿದ್ದರು.

    ಪಂಚವರ್ಣ ಯುವಕ ಮಂಡಲದ ಸದಸ್ಯ ಕೇಶವ ಆಚಾರ್ ಸ್ವಾಗತಿಸಿದರು. ಪಂಚವರ್ಣ ಮಹಿಳಾ ಮಂಡಲದ ಉಪಾಧ್ಯಕ್ಷೆ ಪುಷ್ಭಾ ಕೆ. ಹಂದಟ್ಟು ಸನ್ಮಾನ ಪತ್ರ ವಾಚಿಸಿ, ಮಹಿಳಾ ಮಂಡಲದ ಸಂಚಾಲಕಿ ಸುಜಾತ ಎಂ. ಬಾಯರಿ ನಿರೂಪಿಸಿ, ವಂದಿಸಿದರು. ಕಾರ್ಯಕ್ರಮವನ್ನು ಸಲಹಾ ಸಮಿತಿಯ ರವೀಂದ್ರ ಕೋಟ ಸಂಯೋಜಿಸಿದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    seventeen − sixteen =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.