ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ಅಲ್ಪಸಂಖ್ಯಾತ ಮುಸ್ಲಿಂ, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಜನಾಂಗದವರಿಂದ ರೇಷ್ಮೆ ನೂಲು ಬಿಚ್ಚಣಿಕೆ ಉದ್ಯಮ ಪ್ರೋತ್ಸಾಹ ಯೋಜನೆ, ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಸಹಾಯಧನ ಯೋಜನೆ, ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆ, ಶ್ರಮಶಕ್ತಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ವೃತ್ತಿ ಪ್ರೋತ್ಸಾಹ ಯೋಜನೆ, ನೇರ ಸಾಲ ಯೋಜನೆ ಹಾಗೂ ಸಾಂತ್ವನ ಯೋಜನೆಗಳಿಗೆ ಸಾಲ ಸಹಾಯಧನ ಸೌಲಭ್ಯ ಪಡೆಯಲು ವೆಬ್‌ಸೈಟ್ https://kmdconline.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ 21 ರವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮ, ಮೌಲಾನಾ ಆಜಾದ್ ಭವನ, ಒಂದನೇ ಮಹಡಿ, ಪಶು ಚಿಕಿತ್ಸಾಲಯ ಹತ್ತಿರ, ಶಿವಳ್ಳಿ, ಮಣಿಪಾಲ ದೂ.ಸಂಖ್ಯೆ: 0820-2574990, ಸಹಾಯವಾಣಿ ಸಂಖ್ಯೆ: 8277799990 ಅಥವಾ ಉಡುಪಿ ತಾಲೂಕು ದೂ.ಸಂಖ್ಯೆ: 0820-2574596, ಕಾರ್ಕಳ ತಾಲೂಕು ದೂ.ಸಂಖ್ಯೆ: 08258-231101 ಹಾಗೂ ಕುಂದಾಪುರ ತಾಲೂಕು ದೂ.ಸಂಖ್ಯೆ: 08254-230370 ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಪ್ರಕಟಣೆ ತಿಳಿಸಿದೆ.










