ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತ್ತು ಅಬಕಾರಿ ಸೇವಾ ಇಲಾಖೆಯ ವತಿಯಿಂದ ಮಾದಕ ವ್ಯಸನದ ಕುರಿತು ಜಾಗೃತಿ ಕಾರ್ಯಕ್ರಮವು ಶುಕ್ರವಾರ ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಕುಂದಾಪುರ ಅಬಕಾರಿ ಉಪ ಅಧೀಕ್ಷಕರಾಗಿದ್ದ ಪ್ರಭುಗೌಡ ಪಾಟೀಲ್ ಅವರು ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ತಿಳಿಸಿ ಅದರಿಂದ ದೂರ ಇರಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ವಹಿಸಿದ್ದರು.
ಈ ಸಂದರ್ಭದಲ್ಲಿ ಅಬಕಾರಿ ನಿರೀಕ್ಷಕರಾದ ರವಿ ನಾರಾಯಣ, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಎನ್ಎಸ್ಎಸ್ ನ ಸಂಯೋಜನಾಧಿಕಾರಿ ಅರುಣ್ ಎ.ಎಸ್. ಉಪಸ್ಥಿತರಿದ್ದರು. ವಾಣಿಜ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ಪುಷ್ಪಲತಾ ಸ್ವಾಗತಿಸಿ, ರಾಜ್ಯಶಾಸ್ತ್ರ ವಿಭಾಗದಉಪನ್ಯಾಸಕಿ ಅಕ್ಷತಾ ನಿರೂಪಿಸಿ, ವಾಣಿಜ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ಸುಮಾ ವಂದಿಸಿದರು.










