Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಸದ್ಭಾವನಾ – 2025 ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ
    ಊರ್ಮನೆ ಸಮಾಚಾರ

    ಕೋಟ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಸದ್ಭಾವನಾ – 2025 ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಪಂಚವರ್ಣ ಸಂಘಟನೆ ನಡೆಸುವ ಪ್ರತಿ ಸಮಾಜಮುಖಿ ಕಾರ್ಯವು ಗ್ರಾಮದ ಪ್ರತಿಯೊಂದು ಸಂಘಟನೆಗೂ ಮಾದರಿಯಾಗಬೇಕು ಈ ಮೂಲಕ ಗ್ರಾಮ ಸುಭಿಕ್ಷೆಯಾಗಲಿದೆ ಎಂದು ಬ್ರಹ್ಮಾವರ ತಾಲೂಕು ದಂಡಾಧಿಕಾರಿ ಶ್ರೀಕಾಂತ್ ಎಸ್ ಹೆಗ್ಡೆ ಹೇಳಿದರು.

    Click Here

    Call us

    Click Here

    ಅವರು ಮಣೂರು ಪಡುಕರೆ ಆನಂದ್ ಸಿ. ಕುಂದರ್ ಮನೆಯಂಗಳದಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಪ್ರತಿವರ್ಷ ನಡೆಸಲ್ಪಡುವ ನವೆಂಬರ್ 16ರಂದು ಕೋಟದ ಗಾಂಧಿ ಮೈದಾನದಲ್ಲಿ ನಡೆಯಲಿರುವ ಕನ್ನಡ ರಾಜ್ಯೋತ್ಸವ ಸಂಭ್ರಮದ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಸದ್ಭಾವನಾ – 2025 ಕಾರ್ಯಕ್ರಮದ ಪೋಸ್ಟರ್ ಬಿಡುಗಡೆಗೊಳಿಸಿ, ರಾಜ್ಯೋತ್ಸವ ಕಾರ್ಯಕ್ರಮಗಳು ಕನ್ನಡ ನಾಡುನುಡಿಯ ಧ್ವನಿಯಾಗಲಿ ಎಂದು ಹಾರೈಸಿದರು.

    ಬಿಡುಗಡೆ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಪಂಚವರ್ಣ ಗೌರವ ಸಲಹೆಗಾರರಾದ ಆನಂದ್ ಸಿ. ಕುಂದರ್ ಮಾತನಾಡಿ, ಸ್ವಚ್ಛತಾ ಅಭಿಯಾನ ಪರಿಸರಸ್ನೇಹಿ ಕಾರ್ಯಕ್ರಮಗಳಿಂದ ಮನೆಮಾತಾದ ಪಂಚವರ್ಣ ಸಂಘಟನೆ ಸಮಾಜದ ಮುಖ್ಯವಾಹಿನಿಯಲ್ಲಿರುವ ಸಾಧಕರನ್ನು ಪ್ರಶಸ್ತಿ ನೀಡುತ್ತಾ ಬಂದಿರುವುದು ಶ್ಲಾಘನೀಯ ಕಾರ್ಯ. ಅದರಲ್ಲೂ ವಿಜಯಲಕ್ಷ್ಮಿ ಶಿಬರೂರು ಎಂಬ ಸಾಧಕಿಗೆ ಪ್ರಶಸ್ತಿ ನೀಡುತ್ತಿರುವುದು ಸಂಘಟನೆಯ ಗೌರವ ಹೆಚ್ಚಿಸಲಿದೆ ಎಂದರು.

    ಸಭೆಯಲ್ಲಿ ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಡಾ. ಕೆ.ಕೃಷ್ಣ ಕಾಂಚನ್, ಜನತಾ ಸಮೂಹ ಸಂಸ್ಥೆಗಳ ನಿರ್ದೇಶಕ ಪ್ರಶಾಂತ್  ಎ.ಕುಂದರ್, ಗೀತಾನಂದ ಟ್ರಸ್ಟ್ ನ ಗೀತಾ ಎ. ಕುಂದರ್, ಪಂಚವರ್ಣ ಯವಕ ಮಂಡಲದ ಗೌರವಾಧ್ಯಕ್ಷ ಸತೀಶ್ ಹೆಚ್. ಕುಂದರ್, ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಗೌರವ ಸಲಹೆಗಾರ ಭಾಸ್ಕರ್ ಶೆಟ್ಟಿ ಮಣೂರು, ಕಾರ್ಯಾಧ್ಯಕ್ಷ ಶಶಿಧರ ತಿಂಗಳಾಯ, ಸಂಘಟನಾಕಾರ್ಯದರ್ಶಿ ಗಿರೀಶ್ ಆಚಾರ್, ಉಪಾಧ್ಯಕ್ಷರಾದ ಸಂತೋಷ್ ಪೂಜಾರಿ, ದಿನೇಶ್ ಆಚಾರ್, ಮಹಿಳಾಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಉಪಾಧ್ಯಕ್ಷೆ ಪುಷ್ಭಾ ಕೆ. ಹಂದಟ್ಟು ಇದ್ದರು.

    ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಸ್ವಾಗತಿಸಿದರು. ಸಂಚಾಲಕಿ ಸುಜಾತ ಎಂ. ಬಾಯರಿ ಪ್ರಾಸ್ತಾವನೆ ಸಲ್ಲಿಸಿ ನಿರೂಪಿಸಿದರು. ಕಾರ್ಯದರ್ಶಿ ವಸಂತಿ ಹಂದಟ್ಟು ವಂದಿಸಿದರು. ಸಲಹಾ ಸಮಿತಿಯ ರವೀಂದ್ರ ಕೋಟ ಕಾರ್ಯಕ್ರಮ ಸಂಯೋಜಿಸಿದರು.

    Click here

    Click here

    Click here

    Click Here

    Call us

    Call us

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    4 × one =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.