ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ರೋಟರಿ ಕ್ಲಬ್ ಗಂಗೊಳ್ಳಿ ಇದರ ವತಿಯಿಂದ ಮಹಿಳೆಯರಿಗೆ ಸೈಬರ್ ಕ್ರೈಂ ಮಾಹಿತಿ ಕಾರ್ಯಕ್ರಮ ಗಂಗೊಳ್ಳಿಯ ಶ್ರೀ ವೀರೇಶ ಮಾಂಗಲ್ಯ ಮಂದಿರದಲ್ಲಿ ಇತ್ತೀಚಿಗೆ ನಡೆಯಿತು.
ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಪವನ್ ನಾಯಕ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಸ್ವ ಸಹಾಯ ಸಂಘದ ಸದಸ್ಯರಿಗೆ ಹಾಗೂ ಮಹಿಳೆಯರಿಗೆ ಸೈಬರ್ ಕ್ರೈಂ ಬಗ್ಗೆ ಮಾಹಿತಿ ನೀಡಿದರು.
ರೋಟರಿ ಕ್ಲಬ್ ಗಂಗೊಳ್ಳಿ ಅಧ್ಯಕ್ಷ ಕೃಷ್ಣ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಸೇವಾ ಪ್ರತಿನಿಧಿ ವನಜ, ಪಂಚಗಂಗಾವಳಿ ಒಕ್ಕೂಟದ ಕಾರ್ಯದರ್ಶಿ ಮಾಲಾಶ್ರೀ ಖಾರ್ವಿ, ಜತೆ ಕಾರ್ಯದರ್ಶಿ ಜ್ಯೋತಿ ಪೂಜಾರಿ, ಒಕ್ಕೂಟದ ಪದಾಧಿಕಾರಿಗಳು, ರೋಟರಿ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು.
ಕೃಷ್ಣ ಪೂಜಾರಿ ಸ್ವಾಗತಿಸಿದರು. ಮಾಲಾಶ್ರೀ ವಂದಿಸಿದರು.















