ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಐಕ್ಯೂಎಸಿ ಮಾನವ ಹಕ್ಕು ಘಟಕ ಮತ್ತು ಮಾನವಿಕ ಸಂಘ ಹಾಗೂ ಮೊಳಹಳ್ಳಿ ದಿನೇಶ ಹೆಗ್ಡೆ ಟ್ರಸ್ಟ್ ಇದರ ಸಂಯುಕ್ತ ಆಶ್ರಯದಲ್ಲಿ ಮಾನಸಿಕ ಆರೋಗ್ಯ ಅರಿವು ಕಾರ್ಯಕ್ರಮವು ಕಾಲೇಜಿನ ಶ್ರೀ ಬಿ. ವೀರರಾಜೇಂದ್ರ ಹೆಗ್ಡೆ ಸಭಾಂಗಣದಲ್ಲಿ ಸೋಮವಾರದಂದು ಜರುಗಿತು.
ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಬ್ರಹ್ಮಾವರದ ಮಹೇಶ ಹಾಸ್ಪಿಟಲ್, ಇಲ್ಲಿನ ಮನ:ಶಾಸ್ತ್ರಜ್ಞರಾದ ಗಿರೀಶ ಎಂ.ಎನ್. ಕಾರ್ಯಕ್ರಮ ಉದ್ದೇಶಿಸಿ ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಒತ್ತಡ ಖಿನ್ನತೆ, ದುಶ್ಚಟಗಳಿಗೆ ಒಳಗಾಗುತ್ತಿದ್ದು ಮತ್ತು ಆತ್ಮಹತ್ಯೆಗೆ ಶರಣಾಗುತ್ತಿರುವುದು ತುಂಬಾ ಕಳವಳಕಾರಿ ವಿಷಯವಾಗಿದ್ದರಿಂದ ಜೀವನದಲ್ಲಿ ಎದುರಾಗುವ ಸಮಸ್ಯೆಗಳಿಗೆ ಮಾನಸಿಕ ಆರೋಗ್ಯ ಕಾಯ್ದುಕೊಳ್ಳುವುದು ಅತ್ಯಂತ ಮಹತ್ವವಾದುದು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಐಕ್ಯೂಎಸಿ ಘಟಕದ ಸಂಯೋಜಕರಾದ ಸಂದೀಪ ಕೆ., ಮಾನವಿಕ ಸಂಘದ ಸಂಯೋಜಕ ನಾಗರಾಜ ಶೆಟ್ಟಿ ಉಪಸ್ಥಿತರಿದ್ದರು.
ಕಾರ್ಯಕ್ರಮದ ಸಂಯೋಜಕರಾದ ಡಾ. ವಿಶ್ವನಾಥ ಆಚಾರ್ಯ ಪ್ರಾಸ್ತಾವಿಕ ಮಾತಿನೊಂದಿಗೆ ಸ್ವಾಗತಿಸಿದರು. ಅಂತಿಮ ವರ್ಷದ ವಿದ್ಯಾರ್ಥಿ ಕೀರ್ತನ್ ಕಾರ್ಯಕ್ರಮ ನಿರೂಪಿಸಿದರು.
*****















