ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ಆಯೋಜಿಸಿದ್ದ 20ನೇ ರಾಜ್ಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರ್ಥಮೆಟಿಕ್ಸ್ ಸ್ಪರ್ಧೆಯು ಮೂಡುಬಿದಿರೆಯ ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.
ಈ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಸುಮಾರು 2000 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸ್ಪರ್ಧೆಯಲ್ಲಿ ಕುಂದಾಪುರದ ಇಂಪನಾ ಆರ್. ಅವರು Z–X ಲೆವೆಲ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ವಿನ್ನರ್ ಆಗಿ ಹೊರಹೊಮ್ಮಿದ್ದಾರೆ.
ಅವರು ಐಡಿಯಲ್ ಪ್ಲೇ ಅಬಾಕಸ್ ಕುಂದಾಪುರ ಕೇಂದ್ರದ ಮುಖ್ಯಸ್ಥರಾದ ಪ್ರಸನ್ನ ಕೆ.ಬಿ. ಅವರಿಂದ ತರಬೇತಿ ಪಡೆದಿರುತ್ತಾರೆ. ಶಿಕ್ಷಕರಾದ ಮಹಾಲಕ್ಷ್ಮಿ ಮತ್ತು ದೀಪಾ ಅವರು ಮಾರ್ಗದರ್ಶನ ನೀಡಿರುತ್ತಾರೆ.
ಅವರು ಕುಂದಾಪುರದ ನಿವಾಸಿಯಾಗಿದ್ದು, ದೀಪಿಕಾ ಜಿ. ಮತ್ತು ರಾಘವೇಂದ್ರ ಶೇರೆಗಾರ್ ಅವರ ಪುತ್ರಿಯಾಗಿದ್ದಾರೆ. ಪ್ರಸ್ತುತ ಅವರು ಕುಂದಾಪುರದ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ 3ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.










