Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಯುವಕರು ಬದಲಾವಣೆಯ ಹರಿಕಾರರಾಗಲಿ: ಬ್ರಿಜೇಶ್ ಚೌಟ
    alvas nudisiri

    ಯುವಕರು ಬದಲಾವಣೆಯ ಹರಿಕಾರರಾಗಲಿ: ಬ್ರಿಜೇಶ್ ಚೌಟ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ:
     ಅಭಿವೃದ್ಧಿಯ ಹಾದಿಯಲ್ಲಿ ಮುಂಚೂಣಿಯಲ್ಲಿರುವ ದೇಶಗಳು ಉದ್ಯಮಶೀಲತೆ ಮತ್ತು ತಾಂತ್ರಿಕ ಶಿಕ್ಷಣಕ್ಕೆ ನೀಡಿದ ಆದ್ಯತೆಯಿಂದವೇ ಈ ಯಶಸ್ಸು ಲಭಿಸಿದೆ ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ನುಡಿದರು.

    Click Here

    Call us

    Click Here

    ಅವರು ಸೋಮವಾರ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ರಾಷ್ಟ್ರೀಯ ಪ್ರಧಾನ ಕಚೇರಿ, ರಾಜ್ಯ ಪ್ರಧಾನ ಕಚೇರಿ, ದಕ್ಷಿಣ ಕನ್ನಡ ಘಟಕ ಹಾಗೂ ಆಳ್ವಾಸ್ ಎಜ್ಯುಕೇಶನ್ ಫೌಂಡೇಶನ್ ಅವರ ಸಂಯುಕ್ತ ಆಶ್ರಯದಲ್ಲಿ ಮೂಡಬಿದಿರೆಯಲ್ಲಿ ಆಯೋಜಿಸಿದ್ದ ರಾಷ್ಟ್ರಮಟ್ಟದ ರೋಬೋಟಿಕ್ಸ್, ಕೃತಕ ಬುದ್ಧಿಮತ್ತೆ, ಉದ್ಯಮಶೀಲತೆ ಮತ್ತು  ಸ್ಟೆಮ್ ಕುರಿತು ಐದು ದಿನಗಳ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

    ಸಮಾಜದ ಅಭಿವೃದ್ಧಿಗೆ ಯುವಕರು ವಿಮರ್ಶೆಗಿಂತ ಕ್ರಿಯೆಗೆ ಆದ್ಯತೆ ನೀಡಬೇಕು. ಸಮಾಜದ ಸಮಸ್ಯೆಗಳಿಗೆ ನವೀನ ಪರಿಹಾರಗಳನ್ನು ಹುಡುಕಿ, ಆವಿಷ್ಕಾರಾತ್ಮಕ ಚಿಂತನೆ ಮೂಲಕ ಬದಲಾವಣೆ ತರಬೇಕು. ಸಮಸ್ಯೆಗಳನ್ನು ಪರಿಹರಿಸುವಲ್ಲಿ ಯುವಕರ ಸಕ್ರಿಯ ಪಾಲ್ಗೊಳ್ಳುವಿಕೆಯೇ ಪ್ರಗತಿಯ ಕೀಲಿಕೈ ಎಂದರು.

    ಜೀವನದಲ್ಲಿ ಯಶಸ್ವಿಯಾದ ಪ್ರತೀ ವ್ಯಕ್ತಿಗಳು, ತಮ್ಮ ಜೀವನದ ಆರಂಭದಲ್ಲಿ ಎನ್‌ಸಿಸಿ, ಎನ್‌ಎಸ್‌ಎಸ್ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ನಂತಹ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದರು. ಈ ಸಂಘಟನೆಗಳು ಸಾಮಾಜಿಕ ಜೀವನದ ನಿಜವಾದ ಅರ್ಥವನ್ನು ತಿಳಿಸಲು ನೆರವಾಗುತ್ತವೆ ಎಂದರು.

    ಪ್ರಾಕೃತಿಕವಾಗಿ ಹಾಗೂ ಸಾಂಸ್ಕೃತಿಕವಾಗಿ ಸಮೃದ್ಧವಾಗಿರುವ ಮಂಗಳೂರನ್ನು ನವೀನತೆ ಮತ್ತು ಸಂಶೋಧನೆಯೊಂದಿಗಿನ ಉದ್ಯಮಾಶೀಲಾ ಕೇಂದ್ರವನ್ನಾಗಿಸಲು ‘ಬೊಲ್ಪು ಪ್ಲ್ಯಾನ್’ ಸೇರಿ ಅನೇಕ ಯೋಜನೆಗಳು ಕೈಗೆತ್ತಿಕೊಳ್ಳಲಾಗಿದೆ ಎಂದರು.

    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ಕಾರ್ಯಾಗಾರದಲ್ಲಿ ಪಡೆದ ತರಬೇತಿ ಹಾಗೂ ಅನುಭವವನ್ನು, ಕೌಶಲ್ಯ ವೃದ್ಧಿಗೆ ಬಳಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
    ಹಿಂದೆ ಈ ಭಾಗದವರು ಉದ್ಯೋಗ ಅಥವಾ ಉದ್ಯಮಕ್ಕಾಗಿ ಹೊರನಾಡಿಗೆ ತೆರಳುತ್ತಿದ್ದರು. ಆದರೆ ಈಗ ಸಂಸದರ ಪ್ರೇರಣೆಯಿಂದ ಸ್ಥಳೀಯ ಯುವಕರು ಮತ್ತು ಉದ್ಯಮಿಗಳು ತಮ್ಮ ಊರಿನಲ್ಲಿಯೇ ಉದ್ಯಮ ಆರಂಭಿಸಲು ಉತ್ಸುಕರಾಗಿದ್ದಾರೆ. ಮಂಗಳೂರನ್ನು ಜಾಗತಿಕ ಮಟ್ಟದ ‘ಸಿಲಿಕಾನ್ ವ್ಯಾಲಿ’ಯಾಗಿ ರೂಪಿಸುವಲ್ಲಿನ ಸಂಸದರ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದರು.

    ಕಾರ್ಯ ಗಾರದ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

    Click here

    Click here

    Click here

    Call us

    Call us

    ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ನ ನವದೆಹಲಿ ಮಾಜಿ ನಿರ್ದೇಶಕ ಕೃಷ್ಣಸ್ವಾಮಿ, ಕ್ಯಾಂಪ್ ಲೀಡರ್ ಅವಲೇಂದ್ರ ಶರ್ಮಾ, ಸ್ವಸ್ತಿಕ್ ಬಿಸಿನೆಸ್ ಸ್ಕೂಲ್‌ನ ನಿರ್ದೇಶಕ ಡಾ. ರಾಘವೇಂದ್ರ ಹೊಳ್ಳ, ಉದ್ಯಮಿ ಈಶ್ವರ್ ಶೆಟ್ಟಿ, ಎಂಬಿಎ ವಿಭಾಗದ ಮುಖ್ಯಸ್ಥೆ ಪ್ರಿಯಾ ಸಿಕ್ವೇರಾ, ಹಾಗೂ ಎಐ ಮತ್ತು ಎಂಎಲ್ ವಿಭಾಗದ ಮುಖ್ಯಸ್ಥ ಡಾ ಹರೀಶ್ ಕುಂದರ್ ಇದ್ದರು. ತ್ರಿಷಾ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು. 

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್

    04/02/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ

    04/02/2026

    ಆಳ್ವಾಸ್ ಕಾಲೇಜಿನ ಪ್ರಾಧ್ಯಾಪಕಿ ಪವಿತ್ರ ಎ.ವಿ. ಅವರಿಗೆ ಪಿಎಚ್‌ಡಿ ಪದವಿ ಪ್ರದಾನ

    03/02/2026
    Leave A Reply Cancel Reply

    3 + 6 =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.