Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಯುವ ಜನತೆ ತಂಬಾಕು ಮುಕ್ತ ಸಮಾಜ ನಿರ್ಮಾಣಕ್ಕೆ ಪಣ ತೊಡಬೇಕು: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಯುವ ಜನತೆ ತಂಬಾಕು ಮುಕ್ತ ಸಮಾಜ ನಿರ್ಮಾಣಕ್ಕೆ ಪಣ ತೊಡಬೇಕು: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಯುವಕರು ದೇಶದ ಭವಿಷ್ಯ. ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿರುವ ದೇಶವನ್ನು ಮುನ್ನಡೆಸುವ ಯುವಜನರು ಮಾದಕ ವಸ್ತುಗಳಿಂದ ದೂರವಿದ್ದು ಉತ್ತಮ ಆರೋಗ್ಯ ಹೊಂದಿ ಭವಿಷ್ಯದಲ್ಲಿ ಸದೃಢ ಭಾರತ ನಿರ್ಮಾಣಕ್ಕೆ ಮುಂದಾಗಬೇಕೆಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ ನೀಡಿದರು.

    Click Here

    Call us

    Click Here

    ಅವರು ಅಂದು ಕುಂಜಿಬೆಟ್ಟುವಿನ ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಹಾಗೂ ಉಪೇಂದ್ರ ಪೈ ಮೆಮೋರಿಯಲ್ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ತಂಬಾಕು ಮುಕ್ತ ಯುವ ಅಭಿಯಾನ 3.0 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ತಂಬಾಕು ಸೇವನೆ ಒಂದು ಸಾಮಾಜಿಕ ಪಿಡುಗು. ಸರಕಾರದ ಮುಂದೆ ತಂಬಾಕು ಸೇವನೆಯನ್ನು ನಿಷೇಧಿಸುವ ಸಮಸ್ಯೆ ಒಂದೆಡೆಯಾದರೆ, ಯುವ ಜನತೆಯನ್ನು ತಂಬಾಕು ಚಟದಿಂದ ದೂರ ಇರಿಸುವ ಕಾರ್ಯವನ್ನು ನಿಭಾಯಿಸುವ ಸಮಸ್ಯೆ ಇನ್ನೊಂದೆಡೆ. ತಂಬಾಕು ಸೇವನೆಯಿಂದ ದೈಹಿಕ ಮತ್ತು ಮಾನಸಿಕವಾಗಿ ತೀವ್ರವಾದ ದುಷ್ಪರಿಣಾಮಗಳಾಗುತ್ತವೆ. ಸಮಾಜದಲ್ಲಿ ಇದೊಂದು ಗಂಭೀರ ಸಮಸ್ಯೆ ಆಗಿದ್ದು ಸರಕಾರವು ನಾನಾ ಕಾರ್ಯಕ್ರಮಗಳನ್ನು ಕಾನೂನಾತ್ಮಕವಾಗಿ ಹಮ್ಮಿಕೊಳ್ಳುತ್ತಿದೆ. ರಾಜ್ಯದ ಮೂವತ್ತು ಜಿಲ್ಲೆಗಳಲ್ಲಿಯೂ ತಲಾ ಒಂದು ಗ್ರಾಮವನ್ನು ತಂಬಾಕು ಮುಕ್ತ ಗ್ರಾಮವಾಗಿಸುವ ನಿಟ್ಟಿನಲ್ಲಿ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ತಂಬಾಕು ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಇದ್ದಾಗ ಯುವಕರು ಆ ದಾರಿಯಲ್ಲಿ ಸಾಗುವುದಿಲ್ಲ ಎಂದರು.

    ತಂಬಾಕು ಜಾಹೀರಾತುಗಳ ಪ್ರದರ್ಶನಕ್ಕೆ ಕಡಿವಾಣ ಹಾಕಲಾಗಿದೆ. ಶಾಲಾ ಕಾಲೇಜುಗಳ ನೂರು ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮಾರಾಟ ನಿಷೇಧಿಸಲಾಗಿದೆ. ತಂಬಾಕು ನಿಯಂತ್ರಣ ಕೇವಲ ಸರಕಾರದಿಂದ ಸಾಧ್ಯವಿಲ್ಲ. ಈ ಪಿಡುಗನ್ನು ಆರಂಭದಲ್ಲೇ ಹತ್ತಿಕ್ಕಲು ಸರಕಾರ ಎಲ್ಲ ರೀತಿಯಲ್ಲೂ ಪ್ರಯತ್ನಿಸುತ್ತಿದೆ. ಅನಧಿಕೃತವಾಗಿ ತಂಬಾಕು ಮಾರುವ ಅಂಗಡಿಗಳ ಮೇಲೆ ನಿರಂತರವಾಗಿ ದಾಳಿ ಮಾಡಲಾಗುತ್ತಿದೆ. ಸರಕಾರದೊಂದಿಗೆ ಯುವಕರು ಈ ಕಾರ್ಯದಲ್ಲಿ ಕೈ ಜೋಡಿಸಬೇಕು. ತಮ್ಮ ಸ್ನೇಹಿತರು, ಕುಟುಂಬದವರು, ನೆರಮನೆಯವರು ತಂಬಾಕು ಚಟಕ್ಕೆ ಬಲಿಯಾಗದಂತೆ ಅವರ ಮನವೊಲಿಸಿ ಸ್ವಸ್ಥ ಸಮಾಜ ನಿರ್ಮಾಣ ಮಾಡಬೇಕು ಎಂದರು.

    ಜಿಲ್ಲಾ ಸರ್ವೇಕ್ಷಣ ಅಧಿಕಾರಿ ಡಾ ನಾಗರತ್ನ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೆ.ಎಂ.ಸಿ ಪ್ರಾಧ್ಯಾಪಕ ಡಾ. ಮುರಳೀಧರ್ ಕುಲಕರ್ಣಿ ತಂಬಾಕು ಮುಕ್ತ ಯುವ ಅಭಿಯಾನ ಕುರಿತು ವಿಶೇಷ ಉಪನ್ಯಾಸ ನೀಡಿದರು.

    Click here

    Click here

    Click here

    Call us

    Call us

    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಸವರಾಜ ಹುಬ್ಬಳ್ಳಿ, ಜಿಲ್ಲೆ ಸಲಹೆಗಾರ್ತಿ ಮಂಜುಳಾ ಶೆಟ್ಟಿ, ಕಾಲೇಜಿನ ಅಧ್ಯಾಪಕರು, ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲೆ ಆಶಾ ಸ್ವಾಗತಿಸಿ, ಉಪನ್ಯಾಸಕ ರಾಜೇಶ್ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    04/07/2026

    ಮುಂಗಾರು ಹಂಗಾಮಿನಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ

    04/07/2026

    ವಚನ ಸಾಹಿತ್ಯ ಉಳಿವಿಗೆ ಅವಿರತ ಶ್ರಮ ವಹಿಸಿದ ಫ.ಗು ಹಳಕಟ್ಟಿ: ಎಂ.ಎ ಗಫೂರ್

    03/07/2026
    Leave A Reply Cancel Reply

    4 × 4 =

    Call us

    Click Here

    Call us

    Call us

    Call us
    Highest Viewed Recently
    • ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    • ಕೋಟ ಶ್ರೀ ಅಮೃತೇಶ್ವರಿ ದೇವಸ್ಥಾನದಲ್ಲಿ ನಾಥಪಂಥದ ಪೀರ್‌ ಯೋಗಿ ಜಗದೀಶ್‌ನಾಥ್ ಜೀ ಭೇಟಿ
    • ಆಳ್ವಾಸ್‌ನಿಂದ ರಾಜ್ಯ ಮಟ್ಟದ ಮಹಿಳಾ ಮಧ್ಯವರ್ಜನ ಶಿಬಿರ
    • ನಿವೃತ್ತ ಮುಖ್ಯೋಪಾಧ್ಯಾಯಿನಿ ನಿರ್ಮಲಾ ಕೆ.ಎಸ್. ಅವರಿಗೆ ಅಭಿನಂದನೆ
    • ಕುಂದಾಪುರ: ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನಲ್ಲಿ ಕ್ಯಾಂಪಸ್ ಪ್ಲೇಸ್ಮೆಂಟ್

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.