ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗಾಗಿ ಕ್ರಿಶ್ಚಿಯನ್ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಸಹಾಯಧನ, ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆ, ಶ್ರಮಶಕ್ತಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ವೃತ್ತಿ ಪ್ರೋತ್ಸಾಹ ಯೋಜನೆ, ನೇರಸಾಲ, ಶ್ರಮಶಕ್ತಿ (ವಿಶೇಷ ಮಹಿಳಾ) ಯೋಜನೆ, ಗಂಗಾಕಲ್ಯಾಣ,ಅರಿವು ಸಾಲ ಯೋಜನೆ ಹಾಗೂ ಸಮುದಾಯ ಆಧಾರಿತ ಕೌಶಲ್ಯ ತರಬೇತಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದ್ದು, ಈ ಯೋಜನೆಗಳಡಿ ಸಾಲ ಸಹಾಯಧನ ಸೌಲಭ್ಯ ಪಡೆಯಲು ಕ್ರಿಶ್ಚಿಯನ್ ಜನಾಂಗದವರಿಂದ ವೆಬ್‌ಸೈಟ್ https://kccdclonline.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಕ್ರೆöÊಸ್ತ ಸಮುದಾಯ ಅಭಿವೃದ್ಧಿ ನಿಗಮ (ನಿ), ಮೌಲಾನಾ ಆಝಾದ್ ಭವನ, ಶಿವಳ್ಳಿ ಗ್ರಾಮ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574990, ಸಹಾಯವಾಣಿ ಸಂಖ್ಯೆ: 6360753075 ಅಥವಾ ಉಡುಪಿ ತಾಲೂಕು ದೂ.ಸಂಖ್ಯೆ: 0820-2574596, ಕಾರ್ಕಳ ತಾಲೂಕು ದೂ.ಸಂಖ್ಯೆ: 08258-231101 ಮತ್ತು ಕುಂದಾಪುರ ತಾಲೂಕು ದೂ.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಪ್ರಕಟಣೆ ತಿಳಿಸಿದೆ.










