ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೈಂದೂರು ಪೊಲೀಸ್ ಠಾಣೆಯ ವತಿಯಿಂದ ರಾಷ್ಟ್ರೀಯ ಸೈಬರ್ ಅಪರಾಧ ಜಾಗೃತಿ ಅಭಿಯಾನ – 2025 ಮತ್ತು ರಾಷ್ಟ್ರೀಯ ಏಕತಾ ದಿವಸದ ಪ್ರತಿಜ್ಞಾವಿಧಿ ಕಾರ್ಯಕ್ರಮವನ್ನು ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರದಂದು ಆಯೋಜಿಸಲಾಯಿತು.
ಈ ಕಾರ್ಯಕ್ರಮಕ್ಕೆ ಬೈಂದೂರು ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ತಿಮ್ಮೇಶ್ ಬಿ. ಎನ್. ಅವರು ಭೇಟಿ ನೀಡಿ, ಸೈಬರ್ ಅಪರಾಧ, ಸೈಬರ್ ಅಪರಾಧದ ಸ್ವರೂಪ ಹಾಗೂ ಅದರಿಂದ ಆಗುವ ದುಷ್ಪರಿಣಾಮಗಳು ಮತ್ತು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.


ನವೀನ ಬೋರಕರ್ ಪಿಎಸ್‌ಐ (ತನಿಖೆ) ಅವರು ಪ್ರತಿಜ್ಞಾವಿಧಿ ಭೋದಿಸಿದರು ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಏಕತಾ ದಿವಸದ ಪ್ರಯುಕ್ತ ಪ್ರಬಂಧ ಸ್ಪರ್ಧೆ ಏರ್ಪಡಿಸಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು ಮತ್ತು ಎನ್‌ಡಿಪಿಎಸ್ ಕಾಯ್ದೆ ಬಗ್ಗೆ ಉಡುಪಿ ಜಿಲ್ಲಾ ಪೊಲೀಸ್ ಘಟಕದಿಂದ ಹೊರತಂದಿರುವ ಕ್ಯೂಆರ್ (QR) ಕೋಡ್ ಕಾರ್ಯನಿರ್ವಹಿಸುವ ಪ್ರಕ್ರಿಯೆ ಕುರಿತು ಮಾಹಿತಿ ನೀಡಿದ್ದರು.
ಕಾರ್ಯಕ್ರಮದಲ್ಲಿ ಸದ್ರಿ ಕಾಲೇಜಿನ ಪ್ರಾಂಶುಪಾಲರಾದ ನಾಗರಾಜ್ ಶೆಟ್ಟಿ ಅವರು ಹಾಗೂ ಕಾಲೇಜಿನ ಉಪನ್ಯಾಸಕರು ಸಹಿತ ಸುಮಾರು 300 ವಿದ್ಯಾರ್ಥಿಗಳು ಭಾಗವಹಿಸಿರುತ್ತಾರೆ.















