Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಳ್ವಾಸ್‌ನಲ್ಲಿ ‘ಪ್ರಾಣ’ ಸಮಗ್ರ ಸ್ವಾಸ್ಥ್ಯಧಾಮ ಉದ್ಘಾಟನೆ
    alvas nudisiri

    ಆಳ್ವಾಸ್‌ನಲ್ಲಿ ‘ಪ್ರಾಣ’ ಸಮಗ್ರ ಸ್ವಾಸ್ಥ್ಯಧಾಮ ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡಬಿದಿರೆ
    : ಪ್ರತಿ ಜ್ಞಾನೇಂದ್ರೀಯವನ್ನೂ ಪ್ರಕೃತಿಯೇ ಅದ್ಭುತವಾಗಿ ಸೃಷ್ಟಿಸಿದೆ. ಇವುಗಳ ಸಮತೋಲನ ಮತ್ತು ಸಾಮರಸ್ಯ ಮಾನವನ ಮನಸ್ಸು, ದೇಹ ಹಾಗೂ ಆತ್ಮದ ಶಾಂತಿಗೆ ಆಧಾರವಾಗಿವೆ. ಆದರೆ ಇಂದಿನ ಜೀವನ ಶೈಲಿಯಲ್ಲಿ ನಾವು ಇಂದ್ರಿಯ ಉಪಕಾರವನ್ನು ಮರೆತು, ಅವುಗಳಿಗೆ ಹಿತವಲ್ಲದ ವಿಷಯಗಳಲ್ಲಿ ತೊಡಗಿಕೊಂಡಿದ್ದೇವೆ. ಕಣ್ಣು ಸೌಂದರ್ಯವನ್ನು, ಕಿವಿ ಸುಶ್ರಾವ್ಯತೆಯನ್ನು, ನಾಸಿಕ ಸುವಾಸನೆಯನ್ನು, ನಾಲಿಗೆ ರುಚಿಯನ್ನು ಹಾಗೂ ತ್ವಚೆ ಕೋಮಲತೆಯನ್ನು ಬಯಸುತ್ತದೆ. ಈ ಪಂಚೇಂದ್ರಿಯಗಳ ಪ್ರಜ್ಞಾಪೂರ್ವಕ ಸಂತೃಪ್ತಿಯ ಮೂಲಕ ಸಮಗ್ರ ಆರೋಗ್ಯವನ್ನು ಪಡೆಯಬಹುದು ಎಂದು ಆಸರೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷೆ ಡಾ. ಆಶಾ ಜ್ಯೋತಿ ರೈ ಹೇಳಿದರು.

    Click Here

    Call us

    Click Here

    ಅವರು ಮಿಜಾರಿನ ಆಳ್ವಾಸ್ ಆನಂದಮಯ ಆರೋಗ್ಯಧಾಮದಲ್ಲಿ ನೂತನವಾಗಿ ನಿರ್ಮಾಣಗೊಂಡ ಸಮಗ್ರ ಸ್ವಾಸ್ಥ್ಯಧಾಮ ‘ಪ್ರಾಣ’ ಪ್ರಕೃತಿ ಚಿಕಿತ್ಸಾ ಸ್ಪಾ ವನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು. ಪಂಚಭೂತಗಳ ಸಮನ್ವಯ ಹಾಗೂ ಇಂದ್ರಿಯಗಳ ಸಾತ್ವಿಕ ಶಾಂತಿ ದೈಹಿಕ ವಿಶ್ರಾಂತಿಯ ಜೊತೆಗೆ ಮಾನಸಿಕ ಸ್ಥಿತಪ್ರಜ್ಞೆಗೂ ದಾರಿ ಮಾಡುತ್ತದೆ. ಈ ಕೇಂದ್ರದ ಮೂಲಕ ಸಮೃದ್ಧ ಸಮುದಾಯದ ಆರೋಗ್ಯದ ಬೆಳವಣಿಗೆ ಸಾಧ್ಯವಾಗಲಿ ಎಂದು ಅವರು ಆಶಿಸಿದರು.

    ಖ್ಯಾತ ಗಾಯಕಿ ಅಖಿಲಾ ಪಜಿಮಣ್ಣು ಮಾತನಾಡಿ, ನಮ್ಮ ಬದುಕು ಪ್ರಕೃತಿಯೊಂದಿಗೆ ಸಾಗಬೇಕು. ಪ್ರಕೃತಿಯೊಡನೆ ಹೆಜ್ಜೆ ಹಾಕಿದಾಗಲೇ ನೆಮ್ಮದಿಯ ಜೀವನ ಸಾಧ್ಯ.  ಹೆಚ್.ಎಸ್. ವೆಂಕಟೇಶ್‌ಮೂರ್ತಿಯವರ ಪ್ರಸಿದ್ಧ ಗೀತೆಯಾದ “ಎಲ್ಲಾ ನಿನ್ನ ಲೀಲೆ ತಾಯೇ, ಎಲ್ಲಾ ನಿನ್ನ ಮಾಯೆ ತಾಯೇ” ಹಾಡಿನ ಸಾಲುಗಳನ್ನು ಆಲಪಿಸಿ, ಪ್ರಕೃತಿಯ ಪ್ರಾಮುಖ್ಯತೆ ಮತ್ತು ಸೌಂದರ್ಯವನ್ನು  ಸ್ಮರಿಸಿದರು. ಮನುಷ್ಯ ಎಷ್ಟೇ ಪ್ರಕೃತಿಯನ್ನು ಹಾನಿಗೊಳಿಸಿದರೂ, ಆ ತಾಯಿಯ ಮಮತೆ ಎಂದಿಗೂ ಕಡಿಮೆಯಾಗದು ಎಂದು ಹೇಳಿದರು.

    ಆಳ್ವಾ ಫಾರ್ಮಾಸಿಯ ಆಡಳಿತಾಧಿಕಾರಿ ಹಾಗೂ ಪ್ರಾಣ ಸ್ಪಾನ ನಿರ್ದೇಶಕಿ ಡಾ. ಗ್ರೀಷ್ಮಾ ವಿವೇಕ್ ಆಳ್ವ ಮಾತನಾಡಿ, ಈ ಕೇಂದ್ರದಲ್ಲಿ ಮುಖ ತೇಜಸ್ಸು ವೃದ್ಧಿ ಚಿಕಿತ್ಸೆ, ಕೇಶಕಾಂತಿ ಕ್ರಿಯಾ, ಪಾದಕಾಂತಿ ಕ್ರಿಯಾ ಮುಂತಾದ ಸೌಂದರ್ಯ ಚಿಕಿತ್ಸೆಗಳ ಜೊತೆಗೆ ಸಂಪ್ರದಾಯಿಕ ಚೈನೀಸ್ ತಂತ್ರಗಳು ಮತ್ತು ನವೀನ ಕೊರಿಯನ್ ವಿಧಾನಗಳನ್ನು ಅಳವಡಿಸಲಾಗಿದೆ. ನೂರು ಶೇಕಡಾ ಪ್ರಾಕೃತಿಕ ಉತ್ಪನ್ನಗಳ ಬಳಕೆಯಿಂದ ಇಂದ್ರಿಯಗಳಿಗೆ ಸಂತೋಷ ನೀಡುವ ಮತ್ತು ನೈಜ ಕಾಂತಿಯನ್ನು ವೃದ್ಧಿಸುವ ಅವಕಾಶ ಇಲ್ಲಿದೆ ಎಂದರು.

    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಧ್ಯಕ್ಷತೆ ವಹಿಸಿ ಮಾತನಾಡಿ, “ಆಯುರ್ವೇದ ಮತ್ತು ನ್ಯಾಚುರೋಪಥಿ ವೈದ್ಯಪದ್ದತಿಯನ್ನು ವಿಶ್ವಕ್ಕೆ ನೀಡಿದ ದೇಶ ಭಾರತ. ಔಷಧವಿಲ್ಲದೆ ರೋಗವನ್ನು ಗುಣಪಡಿಸುವ ಪ್ರಕೃತಿ ಚಿಕಿತ್ಸೆ ಪದ್ಧತಿ ಈಗ ವಿಶ್ವಮಟ್ಟದಲ್ಲಿ ಮಾನ್ಯತೆ ಪಡೆದಿದೆ. ಯೋಗ, ಧ್ಯಾನ ಮತ್ತು ಆರೈಕೆಯ ಸಂಯೋಜನೆಯ ಮೂಲಕ ನೈಜ ಆರೋಗ್ಯ ಸಂರಕ್ಷಣೆ ಸಾಧ್ಯ ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ಜಯಶ್ರೀ ಅಮರನಾಥ್ ಶೆಟ್ಟಿ, ಉದ್ಯಮಿ ಕೆ.ಶ್ರೀಪತಿ ಭಟ್, ಕುಲದೀಪ್ ಎಂ, ವಿವೇಕ ಆಳ್ವ, ಡಾ. ಹನಾ ಹಾಗೂ ಇನ್ನಿತರರು ಇದ್ದರು. ಡಾ ಸುಧಾರಾಣಿ ಕಾರ್ಯಕ್ರಮ ನಿರೂಪಿಸಿದರು.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್

    04/02/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ

    04/02/2026

    ಆಳ್ವಾಸ್ ಕಾಲೇಜಿನ ಪ್ರಾಧ್ಯಾಪಕಿ ಪವಿತ್ರ ಎ.ವಿ. ಅವರಿಗೆ ಪಿಎಚ್‌ಡಿ ಪದವಿ ಪ್ರದಾನ

    03/02/2026
    Leave A Reply Cancel Reply

    13 + fourteen =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.