ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಉಡುಪಿಯ ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್-ಕಾಲೇಜು ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಪುರುಷರ ವಿಭಾಗದಲ್ಲಿ ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ತಂಡ ಪ್ರಥಮ ಸ್ಥಾನವನ್ನು ಗಳಿಸಿ ಗುಲಾಬಿ ಶಿವರಾಮ ನೊಂಡ ಪರ್ಯಾಯ ಪಾರಿತೋಷಕವನ್ನು ಪಡೆಯಿತು.
ಸ್ಪರ್ಧೆಯಲ್ಲಿ ಭಾಗವಹಿಸಿದ ವಿಜೇತ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರಾದ ಬಿ.ಎಮ್. ಸುಕುಮಾರ ಶೆಟ್ಟಿ, ಕಾರ್ಯದರ್ಶಿ ಸೀತಾರಾಮ ನಕ್ಕತಾಯ, ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ, ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ, ಎಚ್.ಎಮ್.ಎಮ್. ಮತ್ತು ವಿ.ಕೆ.ಆರ್. ಆಚಾರ್ಯ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲೆ ಡಾ. ಚಿಂತನಾ ರಾಜೇಶ್, ಕಶ್ವಿ ಚೆಸ್ ಸ್ಕೂಲ್‌ನ ಆಡಳಿತ ನಿರ್ದೇಶಕ ನರೇಶ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರಕ್ಷಿತ್ ರಾವ್, ದೈಹಿಕ ಶಿಕ್ಷಣ ನಿರ್ದೇಶಕ ರಂಜಿತ ಟಿ.ಎನ್. ಶುಭ ಹಾರೈಸಿದರು.










