ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಕೋಟೇಶ್ವರ ಗೋಪಾಡಿಯ ಶ್ರೀರಾಮ ಗ್ರಾನೈಟ್ ಬಳಿಯ ರಸ್ತೆಯಲ್ಲಿ ಸೈಕಲ್‌ಗೆ ಸ್ಕೂಟರ್ ಢಿಕ್ಕಿಯಾಗಿ ಸೈಕಲ್ ಸವಾರ ಬಾಬು ಹಾಗೂ ಸ್ಕೂಟರ್ ಸವಾರ ಕಾರ್ತಿಕ್ ಗಾಯಗೊಂಡ ಘಟನೆ ಇತ್ತೀಚಿಗೆ ಸಂಭವಿಸಿದೆ.
ಗಾಯಾಳುಗಳನ್ನು ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ, ಬಳಿಕ ಸೈಕಲ್ ಸವಾರ ಬಾಬು ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಕುಂದಾಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










