Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜವಾಬ್ದಾರಿಯುತವಾಗಿ ಕೆಲಸ ಮಾಡಿ: ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಸಚಿವೆ ಹೆಬ್ಬಾಳ್ಕರ್ ಸೂಚನೆ
    ಉಡುಪಿ ಜಿಲ್ಲೆ

    ಜವಾಬ್ದಾರಿಯುತವಾಗಿ ಕೆಲಸ ಮಾಡಿ: ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಸಚಿವೆ ಹೆಬ್ಬಾಳ್ಕರ್ ಸೂಚನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಸರ್ಕಾರದ ಯೋಜನೆಗಳು ಜನ ಸಾಮಾನ್ಯರಿಗೆ ತಲುಪಬೇಕೆಂದರೆ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕು. ಆಗಷ್ಟೇ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

    Click Here

    Call us

    Click Here

    ಅವರು ಜಿಲ್ಲಾ ಪಂಚಾಯತ್ ಆವರಣದಲ್ಲಿ ಶುಕ್ರವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದರು. ಸಚಿವರು, ಅಧಿಕಾರಿಗಳು ಬದ್ಧತೆಯಿಂದ ರೈತರ ಸಮಸ್ಯೆಗಳನ್ನು ಬಗೆಹರಿಸಲು ಸೂಚನೆ ನೀಡಿದರು. ಅತಿವೃಷ್ಟಿಯಿಂದ ಹಾನಿಗೊಳಗಾದ ರೈತರಿಗೆ ಪರಿಹಾರ ನೀಡಲು ತಯಾರಿ ಮಾಡಲಾಗುತ್ತದೆ. ಇದಕ್ಕೆ ರಾಜ್ಯ ಸರ್ಕಾರ 8000 ಕೋಟಿ ರೂಪಾಯಿ ಅನುದಾನವನ್ನು ನೀಡುತ್ತಿದೆ‌. ಇದೊಂದು ವಿಶೇಷ ಪ್ರಕರಣ ಎಂದು ಪರಿಗಣಿಸಿ ಪರಿಹಾರ ನೀಡಲು ತೀರ್ಮಾನಿಸಲಾಗಿದೆ ಎಂದರು.

    ವಾರಾಹಿ ನೀರಾವರಿ ಯೋಜನೆಗೆ ರೈತರ ಜಮೀನನ್ನು ಸ್ವಾಧೀನಪಡಿಸಿಕೊಂಡಿದ್ದು, ಈವರೆಗೂ ರೈತರಿಗೆ ಸರ್ಕಾರದಿಂದ ಪರಿಹಾರ ನೀಡಿರುವುದಿಲ್ಲ, ಈ ಕುರಿತು ಸರ್ಕಾರದಿಂದ ಹಣ ಬಿಡುಗಡೆಗೊಳಿಸಲು ಪ್ರಯತ್ನಿಸಲಾಗುವುದು. ಈ ಯೋಜನೆಯಲ್ಲಿ ಕೆಲವು ಜಮೀನುಗಳು ಡೀಮ್ಡ್ ಫಾರೆಸ್ಟ್ ಹಾಗೂ ಮೀಸಲು ಅರಣ್ಯ ಪ್ರದೇಶದಲ್ಲಿ ಹಾದು ಹೋಗುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಅನುಮತಿ  ನೀಡುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದರು.

    ಜಿಲ್ಲೆಯಲ್ಲಿ ಸಾರ್ವಜನಿಕರು ವಾಸದ ಮನೆ ಅಥವಾ ಕಟ್ಟಡ ಕಟ್ಟಲು ಬೇಡಿಕೆ ಇರುವ ಕೆಂಪು ಕಲ್ಲು ಗಣಿಗಾರಿಕೆಗೆ ಪಟ್ಟಾ ಲ್ಯಾಂಡ್ ನಲ್ಲಿ 3A ನಲ್ಲಿ ಅನುಮತಿ ನೀಡಿದರೂ‌ ಸಹ ಅರಣ್ಯ ಇಲಾಖೆಯಿಂದ ಆಕ್ಷೇಪಣೆ ಮಾಡುತ್ತಿದ್ದು, ಈ ಬಗ್ಗೆ ಜಿಲ್ಲಾಧಿಕಾರಿಗಳು ಶೀಘ್ರದಲ್ಲೇ ಅರಣ್ಯ ಇಲಾಖೆ ಅಧಿಕಾರಿಗಳಿಗೆ ನೋಟಿಸ್ ಕೊಟ್ಟು ಕ್ರಮ ವಹಿಸಬೇಕು ಎಂದ ಸಚಿವರು, ಇದಕ್ಕಾಗಿ  ಮೂರು ದಿನಗಳ ಗಡುವು ನೀಡಿದರು.

    ಪ್ರಧಾನ ಮಂತ್ರಿ ಸಿಂಚಾಯಿ ಯೋಜನೆಯಡಿ ಸಣ್ಣ ಪ್ರಮಾಣದ ಚೆಕ್ ಡ್ಯಾಂಗಳನ್ನು ನಿರ್ಮಾಣ  ಕೈಗೆತ್ತಿಕೊಳ್ಳಲಾಗಿದ್ದು, ಈ ಚೆಕ್ ಡ್ಯಾಂಗಳಲ್ಲಿ ನೀರು ನಿಲ್ಲದ ಸ್ಥಿತಿಯಿದೆ. ಈ ಚೆಕ್ ಡ್ಯಾಂಗಳ ನಿರ್ಮಾಣಕ್ಕೆ ನಕ್ಷೆ ಅವೈಜ್ಞಾನಿಕವಾಗಿದ್ದು, ಅನುದಾನದ ಬಳಕೆಯೂ‌ ಪೂರ್ಣ ಪ್ರಮಾಣದಲ್ಲಿ ಆಗಿಲ್ಲ, ಎಂಬ ದೂರುಗಳು ಕೇಳಿ ಬರುತ್ತಿವೆ, ಈ ಬಗ್ಗೆ ಜಿಪಂ‌ ಸಿಇಒ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕೆಂದು ಸೂಚನೆ ನೀಡಿದರು.

    Click here

    Click here

    Click here

    Click Here

    Call us

    Call us

    ಜಿಲ್ಲೆಯಲ್ಲಿ ಕೈಗೊಂಡಿರುವ ಬಂದರು ಅಭಿವೃದ್ಧಿ ಕಾಮಗಾರಿಗಳನ್ನು ಆದ್ಯತೆಯ ಮೇಲೆ ನಿಗದಿತ ಅವಧಿಯಲ್ಲಿ ಪೂರ್ಣ ಗೊಳಿಸಬೇಕು. ಕೆಲವು ನಿರ್ಮಾಣ ಕಾರ್ಯಗಳಿಗೆ ಸಿಆರ್ ಝಡ್ ನ ಅನುಮತಿಯ ಅಗತ್ಯವಿದೆ, ಅದನ್ನು ಪಡೆಯಲು ಅನುಕೂಲ ಆಗುವಂತೆ ರಾಜ್ಯ ಮಟ್ಟದ CRZ ಕಮಿಟಿ ರಚಿಸಬೇಕಿದ್ದು, ಈಗಾಗಲೇ ಪ್ರಸ್ತಾವನೆ ಕೇಂದ್ರ ಸರ್ಕಾರದ ಮುಂದಿದೆ, ಸಮಿತಿಯನ್ನು ತ್ವರಿತವಾಗಿ ರಚಿಸುವಂತೆ ನೋಡಿಕೊಳ್ಳಬೇಕು ಎಂದರು.‌

    ಜಿಲ್ಲೆಯಲ್ಲಿ ಕಡಲ ಕೊರೆತ ಉಂಟಾಗುತ್ತಿದ್ದು, ಇದನ್ನು ಗಂಭೀರವಾಗಿ ತೆಗೆದುಕೊಂಡು ವೈಜ್ಞಾನಿಕವಾಗಿ ಶಾಶ್ವತ ಪರಿಹಾರ ಕಂಡುಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

    ಸೂಕ್ತವಾಗಿ ಹಾಸ್ಟೆಲ್ ನಿರ್ವಹಣೆಗೆ ಕ್ರಮ:
    ಜಿಲ್ಲೆಗೆ ವಿದ್ಯಾಭ್ಯಾಸಕ್ಕೆ ಹೊರ ಜಿಲ್ಲೆಗಳಿಂದ ಅದರಲ್ಲೂ ಉತ್ತರ ಕರ್ನಾಟಕದಿಂದ ವಿದ್ಯಾರ್ಥಿಗಳು ಬರುತ್ತಿದ್ದಾರೆ, ಶಾಲಾ ದಾಖಲಾತಿ ಒಂದು ತಿಂಗಳಾದರೂ ಹಾಸ್ಟೆಲ್ ಸೌಲಭ್ಯ ಸಿಗದೆ ತೊಂದರೆ ಉಂಟಾಗುತ್ತಿದೆ. ಈ‌ ಬಗ್ಗೆ ಕ್ರಮ ವಹಿಸಿ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಬೇಕು. ತಾಲೂಕು ಕೇಂದ್ರಗಳಲ್ಲಿ ಸೂಕ್ತವಾಗಿ ಹಾಸ್ಟೆಲ್ ನಿರ್ವಹಣೆ ಮಾಡಬೇಕು ಎಂದರು.

    ಸರ್ಕಾರಿ ಆಸ್ಪತ್ರೆಗಳಲ್ಲಿ ಹೆರಿಗೆ ಪ್ರಮಾಣ ಹೆಚ್ಚಿಸಲು ಕ್ರಮ:
    ಸರ್ಕಾರ ಜನ ಸಾಮಾನ್ಯರಿಗೆ ಉತ್ತಮ ಆರೋಗ್ಯ ಸೇವೆಗಳನ್ನು ನೀಡಬೇಕು, ಸರ್ಕಾರ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ಉತ್ತಮ ಸೇವೆಯನ್ನು ನೀಡಬೇಕು, ಹೆರಿಗೆ ತಜ್ಞರ ಕೊರತೆಯಿಂದ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಹೆರಿಗೆ ಪ್ರಮಾಣವು ಕಡಿಮೆ ಆಗುತ್ತಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಹೆರಿಗೆ ಪ್ರಮಾಣ ಹೆಚ್ಚಿಸುವಂತೆ ಸಚಿವರು ಆದೇಶಿಸಿದರು.

    ಈ ವೇಳೆ ಶಾಸಕರಾದ ಸುನೀಲ್ ಕುಮಾರ್, ಯಶ್ ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ,‌ ಗುರುರಾಜ್ ಗಂಟಿಹೊಳೆ, ಕಿರಣ್ ಕುಮಾರ್ ಕೊಡ್ಗಿ, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್. ಭೋಜೇಗೌಡ, ಮಂಜುನಾಥ್ ಭಂಡಾರಿ, ಡಾ.ಧನಂಜಯ್ ಸರ್ಜಿ, ಜಿಲ್ಲಾ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾಧಿಕಾರಿ ‌ಸ್ವರೂಪ ಟಿ.ಕೆ., ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026
    Leave A Reply Cancel Reply

    17 + seven =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.