Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಂಡ್ಸೆ ಗ್ರಾಮ ಪಂಚಾಯತ್ ಕಾರ್ಯ ಇಡೀ ರಾಜ್ಯಕ್ಕೆ ಮಾದರಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
    ಊರ್ಮನೆ ಸಮಾಚಾರ

    ವಂಡ್ಸೆ ಗ್ರಾಮ ಪಂಚಾಯತ್ ಕಾರ್ಯ ಇಡೀ ರಾಜ್ಯಕ್ಕೆ ಮಾದರಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಸಾಮಾಜಿಕ ಬದ್ದತೆ ಹೊಂದಿರುವ ವಂಡ್ಸೆ ಗ್ರಾಮದ ನಿರಾಮಯ ಸೊಸೈಟಿಯ ಸೇವೆ ರಾಜ್ಯದ ಇತರ ಪಂಚಾಯತಿಗಳಿಗೂ ಮಾದರಿಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

    Click Here

    Call us

    Click Here

    ಅವರು ಕರ್ನಾಟಕದಲ್ಲಿ ಪ್ರಥಮ ಬಾರಿಗೆ ವಂಡ್ಸೆ ಕ್ಲಸ್ಟರ್ ವ್ಯಾಪ್ತಿಯ ವಂಡ್ಸೆ, ಚಿತ್ತೂರು, ಇಡೂರು-ಕುಂಜ್ಞಾಡಿ, ಆಲೂರು, ಹಕ್ಲಾಡಿ, ಹೆಮ್ಮಾಡಿ ಮತ್ತು ಕೆರಾಡಿ ಗ್ರಾಮ ಪಂಚಾಯತ್ ಗಳಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಜಂಟಿ ಸಹಭಾಗಿತ್ವದಲ್ಲಿ “ನಿರಾಮಯ ಸೊಸೈಟಿ” ಮೂಲಕ ಅನುಷ್ಠಾನಗೊಳ್ಳುತ್ತಿರುವ” ಸಮುದಾಯ ಉಪ ಶಮನ ಆರೈಕೆ ಕೇಂದ್ರ” ವನ್ನು ಉದ್ಘಾಟಿಸಿ ಮಾತನಾಡಿದದರು,

    ಪ್ರತಿಯೊಬ್ಬರು ಸಮಾಜ ಸೇವೆ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು. ಸಮಾಜ ಸೇವಕರು ಸಮಾಜಕ್ಕೆ ರಾಜ್ಯಕ್ಕೆ ದೇಶಕ್ಕೆ ಆದರ್ಶ ಆಗುತ್ತಾರೆ.‌ ಆರೈಕೆ ಕೇಂದ್ರದ ಮೂಲಕ ವಂಡ್ಸೆ ಗ್ರಾಮ ಪಂಚಾಯತಿ ಸಮಾಜ ಸೇವೆ ಮಾಡುತ್ತಿದೆ. ಜೊತೆಗೆ ಘನತಾಜ್ಯ ಘಟಕ ಲಾಭ ವನ್ನು ಮಾಡುತ್ತಿದ್ದು, ಇದರಿಂದ ಕಸದಿಂದ ರಸ ಮಾಡುತ್ತಿದೆ ಎಂದು ಹೇಳಿದರು.

    https://www.youtube.com/live/kNblsaOgK98?si=-6KVR4gnrfo0C_NW .

    ನಿರಾಮಯ ಸೊಸೈಟಿ ಅಧ್ಯಕ್ಷ ಉದಯ್ ಕುಮಾರ್‌ ಶೆಟ್ಟಿ ಅವರು ರಾಜ್ಯ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಆರ್ಹರು, ಮುಂದಿನ ವರ್ಷಕ್ಕೆ ಅವರಿಗೆ ರಾಜ್ಯ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಸಿಗಲಿ ಎಂಬುದೇ ನನ್ನ ಆಶಯ. ಈ ಸೇವೆ ನಿರಂತರವಾಗಿ ನಡೆಯಲಿ, ಅಧಿಕಾರ ಶಾಶ್ವತ ಅಲ್ಲ, ನಾವು ಮಾಡುವ ಕೆಲಸ ಕಾರ್ಯಗಳು ಶಾಶ್ವತ ಎಂದು ಹೇಳಿದರು. ‌

    ವಂಡ್ಸೆ ಗ್ರಾಮ ಪಂಚಾಯತಿ ಕಾರ್ಯವನ್ನು ಬೇರೆ ಗ್ರಾಮ ಪಂಚಾಯತಿಗಳು ಬಂದು ನೋಡಬೇಕು. ನಮ್ಮ ಬೆಳಗಾವಿ ಗ್ರಾಮೀಣ ಕ್ಷೇತ್ರದ ಗ್ರಾಮ ಪಂಚಾಯತಿ ಸದಸ್ಯರನ್ನು ಇಲ್ಲಿಗೆ ಕಳುಹಿಸುವೆ. ಈ ಮಾದರಿ ನಮ್ಮೂರಲ್ಲೂ ಆಗಬೇಕು ಎಂಬುದೆ ನನ್ನ ಆಶಯವಾಗಿದೆ ಎಂದರು.‌

    Click here

    Click here

    Click here

    Click Here

    Call us

    Call us

    ಈ ವೇಳೆ‌ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಜಿಲ್ಲಾಧಿಕಾರಿ ಟಿ.ಕೆ. ಸ್ವರೂಪ, ಜಿಲ್ಲಾ ಪಂಚಾಯತ್ ‌ಸಿಇಒ ಪ್ರತೀಕ್ ಬಾಯಲ್, ನಿರಾಮಯ ಸೊಸೈಟಿ ಅಧ್ಯಕ್ಷ ಉದಯ್ ಕುಮಾರ್ ಶೆಟ್ಟಿ, ವಂಡ್ಸೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಗೀತಾ ಅವಿನಾಶ್ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    4 × 4 =

    Call us

    Click Here

    Call us

    Call us

    Call us
    Highest Viewed Recently
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.