Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವೈವಿಧ್ಯತೆಯೇ ಭಾರತದ ನಿಜವಾದ ಶಕ್ತಿ: ಸಚಿವ ದಿನೇಶ್ ಗುಂಡು ರಾವ್
    alvas nudisiri

    ವೈವಿಧ್ಯತೆಯೇ ಭಾರತದ ನಿಜವಾದ ಶಕ್ತಿ: ಸಚಿವ ದಿನೇಶ್ ಗುಂಡು ರಾವ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ
    : ಭಾರತದ ನಿಜವಾದ ಶಕ್ತಿ ಅದರ ವೈವಿಧ್ಯತೆಯಲ್ಲಿ ಅಡಗಿದೆ. ದೇಶದ ಪ್ರತಿಯೊಂದು ಭಾಗದ ಸಂಸ್ಕೃತಿ ಮತ್ತು ಪರಂಪರೆಗಳು ಭಾರತದ ಅಸ್ತಿತ್ವವನ್ನು ಶ್ರೀಮಂತಗೊಳಿಸಿವೆ. ಪರಸ್ಪರ ಗೌರವ, ಸಹಬಾಳ್ವೆ ಮತ್ತು ಒಗ್ಗಟ್ಟಿನ ಮನೋಭಾವವೇ ನಿಜವಾದ ಏಕತೆಯ ಮೂಲ ಎಂದು ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡು ರಾವ್ ಹೇಳಿದರು.

    Click Here

    Call us

    Click Here

    ಅವರು ಮಿಜಾರಿನ ಆಳ್ವಾಸ್ ತಾಂತಿಕ ಮಹಾವಿದ್ಯಾಲಯದ ಸಭಾಂಗಣದಲ್ಲಿ ನಾರ್ತ್ ಈಸ್ಟರ್ನ್ ಪೀಪಲ್ಸ್ ಅಸೋಸಿಯೇಷನ್ (ನೇಪಮ್)  ಹಾಗೂ ಆಳ್ವಾಸ್  ಶಿಕ್ಷಣ ಪ್ರತಿಷ್ಠಾನದ  ಸಂಯುಕ್ತ ಆಶ್ರಯದಲ್ಲಿ ನಡೆದ ನೇಪಮ್ ಫ್ರೆಶರ್ಸ್ ಮೀಟ್ 2025 ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಭಾರತದ ಸೌಂದರ್ಯ ಅದರ ವೈವಿಧ್ಯತೆಯಲ್ಲಿ ಅಡಗಿದೆ. ಪರಸ್ಪರದ ಭಿನ್ನತೆಯನ್ನು ಗೌರವಿಸಿ, ಸಾಮಾನ್ಯ ಮೌಲ್ಯಗಳಲ್ಲಿ ಒಂದಾಗುವ ಮನೋಭಾವವೇ ನಮ್ಮ ದೇಶದ ಶಕ್ತಿ. ಈಶಾನ್ಯ ಭಾರತದ ಜನರು ಕರ್ನಾಟಕದ ಜೀವನದ ಅಂಗವಾಗಿ ಬೆರೆತು, ರಾಷ್ಟ್ರದ ಏಕತೆಯನ್ನು ಬಲಪಡಿಸಿದ್ದಾರೆ ಎಂದರು.

    ಕಾರ್ಯಕ್ರಮದಲ್ಲಿ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ಎಮ್ ರೈ, ಈಶಾನ್ಯ ಭಾರತದ ಏಳು ರಾಜ್ಯಗಳು ನಮ್ಮ ದೇಶದ ಗೌರವ ಮತ್ತು ಹೆಮ್ಮೆ. ದೇಶದ ಗಡಿಗಳನ್ನು ಕಾಯುವ ಧೈರ್ಯಶಾಲಿ ಸೈನಿಕರು ಹಾಗೂ ಗುರ್ಖಾ ಪಡೆಗಳಲ್ಲಿ ಸೇವೆ ಸಲ್ಲಿಸುವವರು ಈ ಭಾಗದವರೇ. ಕರ್ನಾಟಕದಲ್ಲಿ ನೆಲೆಸಿರುವ ಈಶಾನ್ಯ ರಾಜ್ಯದವರು ತಮ್ಮದೇ ಮನೆಯಂತೆ ಇಲ್ಲಿ ಬದುಕಲಿ. ನಾವು ಸದಾ ನಿಮ್ಮೊಂದಿಗಿದ್ದೇವೆ ಎಂದರು.

    ಈ ಸಂದರ್ಭದಲ್ಲಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ, ಕರ್ನಾಟಕವು ಶಾಂತಿ ಮತ್ತು ಸಹಬಾಳ್ವೆಯ ನೆಲವಾಗಿದೆ. ಮಂಗಳೂರಿನಲ್ಲಿಯೂ ಎಲ್ಲ ಸಮುದಾಯದವರು ಒಗ್ಗಟ್ಟಿನಿಂದ ಬದುಕುತ್ತಿದ್ದಾರೆ ಎಂದರು.  ನಮ್ಮ ಇತಿಹಾಸದ ಪಠ್ಯಪುಸ್ತಕಗಳಲ್ಲಿ ಶಿವಾಜಿ ಮಹಾರಾಜರು, ಟಿಪ್ಪು ಸುಲ್ತಾನ್ ಮೊದಲಾದವರ ಬಗ್ಗೆ ಓದುತ್ತೇವೆ, ಆದರೆ ಮಣಿಪುರ ಹಾಗೂ ಇತರ ಈಶಾನ್ಯ ರಾಜ್ಯಗಳ ಶ್ರೀಮಂತ ಇತಿಹಾಸವನ್ನು ತಿಳಿಯುವ ಅವಕಾಶ ಇಲ್ಲ. ಪರಸ್ಪರ ಸಂಸ್ಕೃತಿಗಳನ್ನು ಅರಿತುಕೊಳ್ಳಲು ಆಳ್ವಾಸ್ ಸದಾ ಪ್ರೋತ್ಸಾಹಿಸುತ್ತದೆ.  ಅದಕ್ಕಾಗಿ ನಾವು ಪ್ರತಿವರ್ಷ ನಿಂಗೋಲ್ ಚಾಕೋಬಾ ಮತ್ತು ಸಜಿಬು ಚೆರೋಬಾ ಸೇರಿದಂತೆ ಈಶಾನ್ಯ ಭಾರತದ ಉತ್ಸವಗಳನ್ನು  ನಮ್ಮ ಆವರಣದಲ್ಲಿ ಆಯೋಜಿಸುತ್ತೇವೆ ಎಂದರು.

    ಈ ಕಾರ್ಯಕ್ರಮದಲ್ಲಿ ನೇಪಮ್ ವ್ಯಾಪ್ತಿಗೆ ಒಳಪಟ್ಟ 850 ವಿದ್ಯಾರ್ಥಿಗಳು ಆಗಮಿಸಿದ್ದರು. ಆಳ್ವಾಸ್ ಹೋಮಿಯೋಪಥಿ ಕಾಲೇಜಿನ ಪ್ರಾಂಶುಪಾಲ ಡಾ. ರೋಷನ್ ಇದ್ದರು.

    Click here

    Click here

    Click here

    Call us

    Call us

    ನೇಪಮ್ ಅಧ್ಯಕ್ಷ ಯಾನೋಲುಂಗರ್ ಥೋಚ್ಚುಯಿಯೋ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.  ನೇಪಮ್‌ನ ಅತಿಥ್ಯ ಹಾಗೂ ಶ್ರೀನಿವಾಸ ನಿರೂಪಿಸಿ, ನೇಪಮ್ ಸಲಹೆಗಾರ್ತಿ ಡಾ. ಕೈನಿ ಸೆಸಿಲಿಯಾ ವಂದಿಸಿದರು.

    ಕನ್ನಡ ರಾಜ್ಯೋತ್ಸವದ ಅಂಗವಾಗಿ ಆರಂಭದಲ್ಲಿ ದಿನೇಶ್ ಗುಂಡುರಾವ್ ಮತ್ತು ಮಿಥುನ್ ರೈ, ತಾಯಿ ಭುವನೇಶ್ವರಿ ಪಟಕ್ಕೆ ಪುಷ್ಪಾರ್ಚನೆ  ಸಲ್ಲಿಸಿದರು. ಆಳ್ವಾಸ್‌ನ ಈಶಾನ್ಯ ಭಾರತದ ವಿದ್ಯಾರ್ಥಿಗಳು ಕರ್ನಾಟಕದ ನಾಡಗೀತೆ ಹಾಡಿ ಎಲ್ಲರ ಮೆಚ್ಚುಗೆ ಪಡೆದರು. ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ ಆಳ್ವಾಸ್‌ನ ಈಶಾನ್ಯ ಭಾರತದ ವಿದ್ಯಾರ್ಥಿಗಳಿಂದ ನಡೆದ ಡೊಳ್ಳು ಕುಣಿತ, ಕರ್ನಾಟಕದ ಸಾಂಪ್ರದಾಯಿಕ ನೃತ್ಯಕಲೆಗಳ ಬಗ್ಗೆ ಅವರ ಗೌರವ ಮತ್ತು ಪ್ರೀತಿ ಪ್ರದರ್ಶಿಸಿತು.


    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್

    04/02/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ

    04/02/2026

    ಆಳ್ವಾಸ್ ಕಾಲೇಜಿನ ಪ್ರಾಧ್ಯಾಪಕಿ ಪವಿತ್ರ ಎ.ವಿ. ಅವರಿಗೆ ಪಿಎಚ್‌ಡಿ ಪದವಿ ಪ್ರದಾನ

    03/02/2026
    Leave A Reply Cancel Reply

    5 + 20 =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.