ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಕಟ್ಟಿಗೆ ತರಲೆಂದು ಹೋದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಹೊಳೆಯಲ್ಲಿ ಪತ್ತೆಯಾಗಿದ್ದಾರೆ. ಬೈಂದೂರಿನ ಯಡ್ತರೆ ನಿವಾಸಿ ನರಸಿಂಹ ಯಾನೆ ಸುರೇಶ್ (45) ಮೃತಪಟ್ಟವರು.
ನ.1ರಂದು ಸಂಜೆ ಕಟ್ಟಿಗೆ ತರಲೆಂದು ಹೊರ ಹೋಗಿದ್ದು ಕತ್ತಲಾದರೂ ಮನೆಗೆ ವಾಪಸಾಗಿರಲಿಲ್ಲ. ಹುಡುಕಾಡುವಾಗ ಯಡ್ತರೆ ಗ್ರಾಮದ ಕಲ್ಲು ಹೊಳೆಯಲ್ಲಿ ತೇಲುತ್ತಿರುವ ರೀತಿಯಲ್ಲಿ ಅವರ ದೇಹ ಪತ್ತೆಯಾಗಿತ್ತು.
ಕೂಡಲೆ ಅವರನ್ನು ಹೊಳೆಯಿಂದ ಮೇಲಕ್ಕೆತ್ತಿ ಬೈಂದೂರು ಸರಕಾರಿ ಆಸ್ಪತ್ರೆಗೆ ಕರೆತರಲಾಗಿತ್ತು. ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










