ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ವಿದ್ಯಾರ್ಥಿಗಳಿಗೆ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಿಗೆ ಅವಕಾಶ ನೀಡಿದಾಗ ಮಕ್ಕಳು ಬೌದ್ಧಿಕವಾಗಿ ಬೆಳೆಯಲು ಸಾಧ್ಯ. ಹೀಗಾಗಿ ಮಕ್ಕಳಿಗೆ ನೀಡಿದ ಈ ಅವಕಾಶ ಪ್ರಶಂಸನೀಯ ಎಂದು ಗುತ್ತಿಗೆದಾರರಾದ ಯಡಾಡಿ-ಮತ್ಯಾಡಿಯ ಲಯನ್ ಅರುಣ್ ಕುಮಾರ್ ಹೆಗ್ಡೆ ಹೇಳಿದರು.
ಅವರು ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ‘ಉಗಮ-2025’ರ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದು, ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರೇಷ್ಮಾ ಶೆಟ್ಟಿ, ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಕಾರ್ಯದರ್ಶಿ ಆಕಾಶ್ ಬಿ. ಶೆಟ್ಟಿ, ಎಸ್ಕ್ಯೂಎಸಿ ಪ್ರತಿನಿಧಿ ನಿರೀಕ್ಷಾ ಉಪಸ್ಥಿತರಿದ್ದರು.
ಕಾಲೇಜಿನ ಐಕ್ಯೂಎಸಿ ಸಂಯೋಜಕಿ, ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ದೀಪಿಕಾ ಜಿ. ಅತಿಥಿಗಳನ್ನು ಪರಿಯಿಸಿದರು. ಇಂಗ್ಲೀಷ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸ್ವಾತಿ ಜಿ. ರಾವ್ ಸ್ವಾಗತಿಸಿ, ನಿರೂಪಿಸಿದರು. ಆಡಳಿತ ನಿಕಾಯಕರಾದ ರಕ್ಷಿತ್ ರಾವ್ ಗುಜ್ಜಾಡಿ ವಂದಿಸಿದರು. ಪಿಯು ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರು ಅನಿಸಿಕೆ ಹಂಚಿಕೊಂಡರು.
ಒಟ್ಟು 16 ತಂಡಗಳು ಭಾಗವಹಿಸಿದ್ದು, ಸುಣ್ಣಾರಿ ಎಕ್ಸಲೆಂಟ್ ಪಿಯು ಕಾಲೇಜು ಪ್ರಥಮ, ವೆಂಕಟರಮಣ ಪಿಯು ಕಾಲೇಜು ದ್ವಿತೀಯ ಸ್ಥಾನ ಪಡೆಯುವ ಮೂಲಕ ಸಮಗ್ರ ಪುರಸ್ಕಾರ ಮತ್ತು ನಗದು ಬಹುಮಾನ ಪಡೆದರು.















