Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಏಕತಾ ನಡಿಗೆ ಕಾರ್ಯಕ್ರಮ ಶಿಸ್ತುಬದ್ಧವಾಗಿ ಆಯೋಜಿಸಿ: ಕೋಟ ಶ್ರೀನಿವಾಸ ಪೂಜಾರಿ ಕರೆ
    ಉಡುಪಿ ಜಿಲ್ಲೆ

    ಏಕತಾ ನಡಿಗೆ ಕಾರ್ಯಕ್ರಮ ಶಿಸ್ತುಬದ್ಧವಾಗಿ ಆಯೋಜಿಸಿ: ಕೋಟ ಶ್ರೀನಿವಾಸ ಪೂಜಾರಿ ಕರೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ
    : ಸರ್ದಾರ್ ವಲ್ಲಬಾಯಿ ಪಟೇಲ್ ರ 150 ನೇ ಜನ್ಮ ದಿನದ ಅಂಗವಾಗಿ ನವೆಂಬರ್ 11 ರಂದು ಏಕತಾ ನಡಿಗೆ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಕಾರ್ಯಕ್ರಮದ ಮೂಲಸ್ವರೂಪಕ್ಕೆ ಧಕ್ಕೆಯಾಗದಂತೆ ಶಿಸ್ತುಬದ್ಧವಾಗಿ ಕಾರ್ಯಕ್ರಮ ಆಯೋಜಿಸುವಂತೆ ಅಧಿಕಾರಿಗಳಿಗೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಕರೆ ನೀಡಿದರು.

    Click Here

    Call us

    Click Here

    ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಏಕತಾ ನಡಿಗೆ ಕಾರ್ಯಕ್ರಮ ಆಯೋಜನೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಏಕತಾ ನಡಿಗೆ ಕಾರ್ಯಕ್ರಮವು ನವೆಂಬರ್ 11 ರಂದು ನಗರದ ಬೋರ್ಡ್ ಹೈಸ್ಕೂಲ್ ನಿಂದ ಅಜ್ಜರಕಾಡು ಭುಜಂಗ ಪಾರ್ಕಿನ ಹುತಾತ್ಮರ ಯುದ್ಧ ಸ್ಮಾರಕದವರೆಗ ನಡೆಯಲಿದ್ದು, ಅಂದು ಬೆಳಗ್ಗೆ 7.30 ಕ್ಕೆ ಬೋರ್ಡ್ ಹೈಸ್ಕೂಲ್ ಆವರಣದಲ್ಲಿ ಏಕತಾ ನಡಿಗೆ ಜಾಥಾಗೆ ಚಾಲನೆ ನೀಡಲಾಗುವುದು. ಜಾಥಾ ಸಮಾರೋಪಗೊಳ್ಳುವ ಭುಜಂಗ ಪಾರ್ಕಿನ ಗಾಂಧಿಕಟ್ಟೆಯಲ್ಲಿ ಸರ್ದಾರ್ ವಲ್ಲಬಾಯಿ ಪಟೇಲ್ ಅವರ ಜೀವನ ಸಾಧನೆ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದರು.

    ಏಕತಾ ನಡಿಗೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು, ಎನ್.ಎಸ್.ಎಸ್., ಎನ್.ಸಿ.ಸಿ ಸ್ವಯಂ ಸೇವಕರುಗಳು, ಜನಪ್ರತಿನಿಧಿಗಳು, ಅಧಿಕಾರಿಗಳು, ಸಾರ್ವಜನಿಕರು, ಸಂಘ-ಸಂಸ್ಥೆಗಳು, ಯುವಕ-ಯುವತಿ ಮಂಡಳಗಳು, ಮಾಜಿ ಸೈನಿಕರು ಸೇರಿದಂತೆ ಮತ್ತಿತರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದರೊಂದಿಗೆ  ಕಾಲ್ನಡಿಗೆ ಜಾಥಾವನ್ನು ಯಶಸ್ವಿಗೊಳಿಸಲು ಸಹಕರಿಬೇಕು ಎಂದರು.

    ಜಾಥಾ ಸಂದರ್ಭದಲ್ಲಿ ವಿವಿಧ ಕಲಾತಂಡಗಳು, ಎನ್.ಸಿ.ಸಿ ಅಥವಾ ಶಾಲಾ ಮಕ್ಕಳಿಂದ ಬ್ಯಾಂಡ್ ಗಳನ್ನು ಆಯೋಜಿಸಿ ಜಾಥಾಕ್ಕೆ ಇನ್ನಷ್ಟು ಮೆರುಗು ನೀಡಬೇಕು. ಜಾಥಾ ಹಾದುಹೋಗುವ ಮಾರ್ಗದುದ್ದಕ್ಕೂ ಸರ್ದಾರ್ ವಲ್ಲಬಾಯಿ ಪಟೇಲ್ ಬಗ್ಗೆ ಘೋಷವಾಕ್ಯಗಳನ್ನು ಕೂಗುತ್ತಾ ಸಾಗುವಂತೆ ನೋಡಿಕೊಳ್ಳಬೇಕು ಎಂದ ಅವರು ಆರೋಗ್ಯ ಇಲಾಖೆಯ ವತಿಯಿಂದ ವೈದ್ಯಕೀಯ ಸಿಬ್ಬಂದಿಗಳನ್ನು ಒಳಗೊಂಡ ಆಂಬುಲೆನ್ಸ್ ವ್ಯವಸ್ಥೆಯನ್ನು ಸ್ಥಳದಲ್ಲಿ ನಿಯೋಜಿಸುವಂತೆ ತಿಳಿಸಿದರು.

    Click here

    Click here

    Click here

    Click Here

    Call us

    Call us

    ಈ ಸಂದರ್ಭದಲ್ಲಿ ಕಾರ್ಯಕ್ರಮದ ರೂಪುರೇಷೆ ಕುರಿತು ಚರ್ಚೆ ನಡೆಸಲಾಯಿತು. ಸಭೆಯಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಧಾಕರ್ ನಾಯಕ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಶನ್ ಕುಮಾರ್ ಶೆಟ್ಟಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ, ಡಿಹೆಚ್‌ಓ ಡಾ. ಬಸವರಾಜ್ ಹುಬ್ಬಳ್ಳಿ, ಕಾರ್ಯಕ್ರಮ ಸಂಯೋಜಕ ಉಲ್ಲಾಸ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026
    Leave A Reply Cancel Reply

    13 + four =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.