ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಉಡುಪಿ ನಗರಸಭೆಯ 2024-25 ನೇ ಸಾಲಿನ ವಿವಿಧ ಕಾರ್ಯಕ್ರಮದಡಿ ಮೀಸಲಿರಿಸಿದ ಅನುದಾನದ ಉಳಿಕೆ ಮೊತ್ತವಾದ ಎಸ್.ಎಫ್.ಸಿ ಅನುದಾನದ ಶೇ. 5ರ ವಿಕಲಚೇತನ ಕಾರ್ಯಕ್ರಮದಡಿ ಸಣ್ಣ ಉದ್ದಿಮೆ, ಮನೆ ದುರಸ್ಥಿ, ಕೃತಕ ಅಂಗ ಜೋಡಣೆ / ಶಸ್ತ್ರಚಿಕಿತ್ಸೆಗೆ ಧನಸಹಾಯ, ರಾಜ್ಯ, ರಾಷ್ಟೀಯ ಮಟ್ಟದ ಕ್ರೀಡೆ / ಸಾಂಸ್ಕೃತಿಕ ಹಾಗೂ ಇತರೆ ವ್ಯಾಸಾಂಗೇತರ ಚಟುವಟಿಕೆಗಳಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಪ್ರೋತ್ಸಾಹಧನ ಹಾಗೂ ಎಸ್.ಎಸ್.ಎಲ್.ಸಿ ಯಿಂದ ಮಾಸ್ಟರ್ ಡಿಗ್ರಿವರೆಗಿನ ವಿದ್ಯಾರ್ಥಿಗಳಿಗೆ ಸಹಾಯಧನಕ್ಕೆ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅದೇ ರೀತಿ ಎಸ್.ಎಫ್.ಸಿ / ಮುಕ್ತನಿಧಿ ಮತ್ತು ಪುರಸಭಾ ನಿಧಿಯ ಶೇ. 7.25 ರ ಇತರೆ ಹಿಂದುಳಿದ ವರ್ಗಗಳ ಕಲ್ಯಾಣ ಕಾರ್ಯಕ್ರಮ, ಪ.ಜಾತಿ/ಪಂಗಡದ ಕಲ್ಯಾಣ ಕಾರ್ಯಕ್ರಮ ಹಾಗೂ ಟಿ.ಎಸ್.ಪಿ (ಪ.ಪಂಗಡದ ಅನುದಾನ) ಕಾರ್ಯಕ್ರಮದಡಿ ಪಿ.ಯು.ಸಿ ಯಿಂದ ಉತ್ತೀರ್ಣರಾದ ಪದವಿ, ಬಿ.ಎ, ಬಿಎಸ್‌ಸಿ, ಬಿಕಾಂ, ಬಿಬಿಎ, ಬಿಬಿಎಂ, ಬಿಸಿಎ ಇತರೆ ಪದವಿ ಮೊದಲ ವರ್ಷದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮತ್ತು ಎಸ್.ಎಸ್.ಎಲ್.ಸಿ ಯಿಂದ ಉತ್ತೀರ್ಣರಾದ ಪಿ.ಯು.ಸಿ, ಐ.ಟಿ.ಐ ಮತ್ತು ಇತರ ವೃತ್ತಿಪರ ತರಗತಿ ಡಿಪ್ಲೋಮಾ ಮೊದಲ ವರ್ಷದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಸೌಲಭ್ಯ ಲಭ್ಯವಿದೆ.
ಆಸಕ್ತರು ನವೆಂಬರ್ 10 ರ ಒಳಗಾಗಿ ಪೂರಕ ದಾಖಲಾತಿಗಳೊಂದಿಗೆ ಉಡುಪಿ ನಗರಸಭಾ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.










