ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ಅವರು ಕನ್ನಡ ರಾಜ್ಯೋತ್ಸವ ಪ್ರಯುಕ್ತ ಆಯೋಜಿಸಿದ ಕನ್ನಡ ಹಬ್ಬ ಕಾರ್ಯಕ್ರಮದಲ್ಲಿ ನಡೆದ ತಾಲೂಕು ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ ಗಳಿಸಿದೆ.
ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳಾದ ಕಿಶನ್ ಪೂಜಾರಿ, ನಾಗಶ್ರೀ ಭಟ್, ಪ್ರಜ್ಞಾ ಹಾಗೂ ದೀಪಾ ಭಾಗವಹಿಸಿದ್ದರು.
ಕಾಲೇಜಿನ ಪ್ರಾಂಶುಪಾಲ ಡಾ. ಕೆ. ಉಮೇಶ್ ಶೆಟ್ಟಿ, ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಮಾರ್ಗದರ್ಶನ ನೀಡಿದರು. ಸಭಾ ಕಾರ್ಯಕ್ರಮದಲ್ಲಿ ಕಲಾ ಕ್ಷೇತ್ರ ಕುಂದಾಪುರ ಟ್ರಸ್ಟ್ನ ಅಧ್ಯಕ್ಷ ಕಿಶೋರ್ ಕುಮಾರ್, ಪ್ರಥಮ ದರ್ಜೆ ಎಲೆಕ್ಟಿಕಲ್ ಗುತ್ತಿಗೆದಾರ ಕೆ. ಆರ್. ನಾಯ್ಕ್ಕ್, ಕ್ವಿಜ್ ಮಾಸ್ಟರ್ ಶಿಕ್ಷಕ ಅಶೋಕ್ ತೆಕ್ಕಟ್ಟೆ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.










