ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮೈಸೂರಿನಲ್ಲಿ ನಡೆದ ವಿಭಾಗವಾರು ಮಟ್ಟದ ಗ್ರಾಮೀಣ ಐಟಿ ಕ್ವಿಜ್ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ಆದಿತ್ಯ ಎಸ್. ಪೂಜಾರಿ ಪ್ರಥಮ ಸ್ಥಾನವನ್ನು ಗಳಿಸಿ ಧಾರವಾಡದಲ್ಲಿ ನಡೆಯಲಿರುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾನೆ.
ವಿದ್ಯಾರ್ಥಿಯ ಈ ಸಾಧನೆಯನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಭೋದಕ ಮತ್ತು ಬೋಧಕೇತರ ಬಳಗದವರು ಅಭಿನಂದಿಸಿದ್ದಾರೆ.










