ಕುಂದಾಪುರ : ದಾನಗಳಲ್ಲಿ ಅತೀ ಶ್ರೇಷ್ಠದಾನ ರಕ್ತದಾನ. ಒಬ್ಬನ ಜೀವ ಉಳಿಸುವಲ್ಲಿ ಸಹಾಯವಾಗುವ ಈ ದಾನ ದೇವರಿಗೂ ಪ್ರಿಯ. ಕುಂದಾಪುರ ಲಯನ್ಸ್ ಕ್ಲಬ್ ಅಧ್ಯಕ್ಷ ಕೆ. ಅಶೋಕ್ ಬೆಟ್ಟಿನ್ ಹೇಳಿದರು.
ಕೆ.ಎಸ್.ಎಸ್. ಸರಕಾರಿ ಪ್ರೌಢಶಾಲೆ ಹಕ್ಲಾಡಿ ಇದರ ಸುವರ್ಣ ಸಂಭ್ರಮದ ಅಂಗವಾಗಿ ಲಯನ್ಸ್ ಕ್ಲಬ್, ಲಯನೆಸ್ ಕ್ಲಬ್ ಕುಂದಾಪುರ, ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ಕುಂದಾಪುರ, ಕೆ.ಎಸ್.ಎಸ್. ಸರಕಾರಿ ಪ್ರೌಢಶಾಲೆ ಹಕ್ಲಾಡಿ ಇದರ ಸಂಯುಕ್ತ ಆಶ್ರಯದಲ್ಲಿ ಹಕ್ಲಾಡಿ ಕೆ.ಎಸ್.ಎಸ್. ಸರಕಾರಿ ಪ್ರೌಢಶಾಲೆಯಲ್ಲಿ ನಡೆದ ಬೃಹತ್ ರಕ್ತದಾನ ಶಿಬಿg ಉದ್ಘಾಟಿಸಿ ಅವರು ಮಾತನಾಡಿದರು.
ಸಂತೋಷಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ಚೇಯರ್‌ಮನ್ ಎಸ್. ಜಯಕರ್ ಶೆಟ್ಟಿ, ಮುತ್ತಯ್ಯ ಶೆಟ್ಟಿ, ರವಿರಾಮ್ ಶೆಟ್ಟಿ, ವೈದ್ಯಾಧಿಕಾರಿ ಡಾ. ಸುಭೋದ್ ಮಲ್ಲಿ, ನಾಗರಾಜ್ ಶೇಟ್, ರಾಜೀವ ಮಾಸ್ತರ್, ಸ್ಥಳದಾನಿ ಗಣಪಯ್ಯ ಶೆಟ್ಟಿ, ಹಕ್ಲಾಡಿ ಗ್ರಾ.ಪಂ. ಉಪಾಧ್ಯಕ್ಷ ಸುಭಾಶ್ ಶೆಟ್ಟಿ ಹೊಳ್ಮಗೆ, ಶಾಲೆಯ ಮುಖ್ಯೋಪಾಧ್ಯಾಂi ಡಾ. ಕಿಶೋರ್‌ಕುಮಾರ್ ಶೆಟ್ಟಿ, ಲಯನ್ ಕಾರ್ಯದರ್ಶಿ ಕಿರಣ್‌ಕುಮಾರ್ ಉಪಸ್ಥಿತರಿದ್ದರು.