ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ರಾಜ್ಯ ಮಟ್ಟದ ವಿವಿಧ ಕ್ರೀಡಾಕೂಟಗಳಲ್ಲಿ ಭಾಗವಹಿಸಿದ ತಾಲೂಕಿನ ಹೆಮ್ಮಾಡಿಯ ಜನತಾ ಪಿಯು ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಾದ ಯೋಗೀಶ್ (ನೆಟ್ ಬಾಲ್ ) ಆದಿತ್ಯ (ವಾಲಿಬಾಲ್ ), ಸಾಹಿಮ್ (ಕಬಡ್ಡಿ ), ಪ್ರಣೀತ (ಕುಸ್ತಿ )ಭಾಗವಹಿಸಿ ಉತ್ತಮ ಸಾಧನೆಗೈದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ










