ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ರೋಟರಿ ಕ್ಲಬ್ ಬೈಂದೂರು, ರೋಟರ್ಯಕ್ಟ್ ಕ್ಲಬ್ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು, ಕರ್ನಾಟಕ ಲೋಕಾಯುಕ್ತ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಜಾಗೃತಿ ಅರಿವು ಕಾರ್ಯಕ್ರಮವು ಗುರುವಾರ ನೆರವೇರಿಸಿಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿರುವ ಎಸ್. ರಾಜು ಪೂಜಾರಿ ಅವರು ನೆರವೇರಿಸಿ ಮಾತನಾಡಿ, ಮುಂದಿನ ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿ ದೆಸೆಯಲ್ಲಿ ಭ್ರಷ್ಟಾಚಾರ ವಿರೋಧಿ ಮನೋಭಾವನೆಯನ್ನು ಮಕ್ಕಳಲ್ಲಿ ಬೆಳೆಸಬೇಕಾಗಿದೆ ಆ ನಿಟ್ಟಿನಲ್ಲಿ ಇಂಥಹ ಕಾರ್ಯಕ್ರಮ ಅರ್ಥಪೂರ್ಣ ಎಂದರು.

ಸಂಪನ್ಮೂಲ ವ್ಯಕ್ತಿಯಾಗಿ ಉಡುಪಿ ಇನ್ಸ್ಪೆಕ್ಟರ್ ಲೋಕಾಯಕ್ತರಾದ ರಾಜೇಂದ್ರ ನಾಯಕ್ ಅವರು ಭ್ರಷ್ಟಾಚಾರ ನಿರ್ಮೂಲನೆಯ ಜಾಗೃತಿ ಕಾರ್ಯಕ್ರಮದ ಬಗ್ಗೆ ಸುದೀರ್ಘವಾದ ಮಾಹಿತಿ ನೀಡಿ ಸಂವಾದ ಕಾರ್ಯಕ್ರಮ ನಡೆಸಿಕೊಟ್ಟರು.
ಸಭಾ ಅಧ್ಯಕ್ಷತೆಯನ್ನು ರೋಟರಿ ಅಸಿಸ್ಟೆಂಟ್ ಗವರ್ನರ್ ಐ. ನಾರಾಯಣ ಅವರು ವಹಿಸಿದ್ದರು .
ಮುಖ್ಯ ಅತಿಥಿಗಳಾಗಿ ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ನಾಗರಾಜ ಶೆಟ್ಟಿ, ಬೈಂದೂರು ರೋಟರ್ಯಕ್ಟ್ ಕ್ಲಬ್ ಅದ್ಯಕ್ಷೆ ನಿತ್ಯಶ್ರೀ, ವಕೀಲರಾದ ಮಂಗೇಶ್ ಶಾನಭಾಗ್, ರೊಟರ್ಯಾಕ್ಟ್ ಸಂಯೋಜಕರಾದ ಮಣಿಕಂಠ ಉಪಸ್ಥಿತರಿದ್ದರು.
ರೋಟರಿ ಕ್ಲಬ್ ಬೈಂದೂರು ಕಾರ್ಯದರ್ಶಿ ಪ್ರದೀಪ್ ಶೆಟ್ಟಿ ಕಾರಿಕಟ್ಟೆ ಬೈಂದೂರು ಸ್ವಾಗತಿಸಿ, ರೋಟರ್ಯಕ್ಟ್ ಕ್ಲಬ್‌ನ ಉಪದ್ಯಕ್ಷೆಯಾದ ಶ್ವೇತಾ ಕಾರ್ಯಕ್ರಮವನ್ನು ನಿರ್ವಹಿಸಿದರು.















