Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರಾಜ್ಯ ಮಟ್ಟದ ನೆಟ್‌ಬಾಲ್‌ ಪಂದ್ಯಾಟದಲ್ಲಿ ಕೊಲ್ಲೂರು ಪ.ಪೂ ಕಾಲೇಜಿನ ಬಾಲಕರ ತಂಡ ರಾಷ್ಟ್ರಮಟ್ಟಕ್ಕೆ ಆಯ್ಕೆ
    ಊರ್ಮನೆ ಸಮಾಚಾರ

    ರಾಜ್ಯ ಮಟ್ಟದ ನೆಟ್‌ಬಾಲ್‌ ಪಂದ್ಯಾಟದಲ್ಲಿ ಕೊಲ್ಲೂರು ಪ.ಪೂ ಕಾಲೇಜಿನ ಬಾಲಕರ ತಂಡ ರಾಷ್ಟ್ರಮಟ್ಟಕ್ಕೆ ಆಯ್ಕೆ

    Updated:07/11/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೊಲ್ಲೂರು:
    ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜು ಸುಬ್ರಹ್ಮಣ್ಯ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ನೆಟ್‌ಬಾಲ್ ಪಂದ್ಯಾಟದಲ್ಲಿ ಉಡುಪಿ ಜಿಲ್ಲಾ ತಂಡವನ್ನು ಪ್ರತಿನಿಧಿಸಿದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲೆಗೆ ಕೀರ್ತಿ ತಂದಿರುತ್ತಾರೆ.

    Click Here

    Call us

    Click Here

    ತಂಡದ ನಾಯಕ ಗಣೇಶ್ ಆರ್., ಸದ್ಯಸರಾದ ನಿರೂಪ, ರೋಹಿತ್, ಯಶಸ್, ದಿಗಂತ, ಸುಬ್ರಮಣ್ಯ, ಸಚಿನ್, ಕಾರ್ತಿಕ  ಈ ವಿದ್ಯಾರ್ಥಿಗಳನ್ನು  ಸಂಸ್ಥೆಯ ಆಡಳಿತ ಮಂಡಳಿ ವತಿಯಿಂದ ದೇವಸ್ಥಾನದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

    ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಬಾಬು ಶೆಟ್ಟಿ ವಿಜೇತರನ್ನು ಅಭಿನಂದಿಸಿ ಮಾತನಾಡಿ, ನಮ್ಮ ಕಾಲೇಜಿನ ವಿದ್ಯಾರ್ಥಿಗಳು ನೆಟ್ ಬಾಲ್ ನಲ್ಲಿ ಪಾಲ್ಗೊಂಡು ವಿಜಯ ಸಾಧಿಸುವ ಮೂಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದು, ಪಠ್ಯದ ಜೊತೆಗೆ ಕ್ರೀಡೆಯಲ್ಲೂ ಪ್ರಗತಿ ಸಾಧಿಸಿರುವುದು ನಿಜಕ್ಕೂ ಸಂತಸ ತಂದಿದೆ. ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢತೆಯಿಂದ ಇರಬೇಕಾದರೆ ಕ್ರೀಡೆ ಅತ್ಯವಶ್ಯಕವಾಗಿದೆ. ನಮ್ಮ ಕಾಲೇಜಿ‌ನ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದಲ್ಲೂ ಉತ್ತಮ ಪ್ರದರ್ಶನ ನೀಡಿ ರಾಜ್ಯಕ್ಕೆ ಮತ್ತು ಜಿಲ್ಲೆಗೆ ಹಾಗೂ ಕಾಲೇಜಿಗೆ ಕೀರ್ತಿ ತರಬೇಕು ಎಂದು ಶುಭಕೋರಿದರು.

    ಈ ವೇಳೆ ದೇವಳದ ಕಾರ್ಯನಿರ್ವಾಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ಉಪ ಕಾರ್ಯನಿರ್ವಹಣಾಧಿಕಾರಿ ಐ.ಎಚ್. ತುಂಬಿಗೆ, ವ್ಯವಸ್ಥಾಪನ ಸಮಿತಿಯ ಸದಸ್ಯ ಮಾಲಿಂಗ ನಾಯ್ಕ್, ಗ್ರಾಮ ಪಂಚಾಯತ್ ಅಧ್ಯಕ್ಷರು, ಪಂಚಾಯತ್ ಸದಸ್ಯರುಗಳು ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಗೋಪಾಲಕೃಷ್ಣ ಜಿ.ಬಿ., ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಸುಕೇಶ್ ಶೆಟ್ಟಿ ಹೊಸಮಠ, ತಂಡದ ವ್ಯವಸ್ಥಾಪಕರಾದ ನಾಗರಾಜ್ ಅಡಿಗ ನೀಲಾವರ ಮತ್ತು ತಂಡದ ತರಬೇತುದಾರರಾದ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಸಚಿನ್ ಕುಮಾರ್ ಶೆಟ್ಟಿ ಹುಂಚಿನಿ ಮತ್ತು ಸಂಸ್ಥೆಯ ಪ್ರಾಕ್ತನ ವಿದ್ಯಾರ್ಥಿ ರಾಜ್ಯಮಟ್ಟದ ನೆಟ್ ಬಾಲ್ ತೀರ್ಪುಗಾರ ಅವಿನಾಶ್  ಆಚಾರ್ಯ, ಕೀರ್ತನ ಸಿಗಂದೂರು, ಮಣಿಕಂಠ ಸಿಗಂದೂರು, ಗಣೇಶ ನಿಟ್ಟೂರು ನೀಡಿದರು.

    ಸಂಸ್ಥೆಯ ಉಪನ್ಯಾಸಕರು, ಉಪನ್ಯಾಸಕೇತರ ವೃಂದದವರು, ಸಂಸ್ಥೆಯ ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು, ಊರವರು, ದೇವಳದ ಸಿಬ್ಬಂದಿಯವರು ಉಪಸ್ಥಿತರಿದ್ದು ಸಂತಸ ವ್ಯಕ್ತಪಡಿಸಿದರು.

    Click here

    Click here

    Click here

    Call us

    Call us

    ತದನಂತರ ತೆರೆದ ವಾಹನ ಮೂಲಕ ವಿಜೇತ ವಿದ್ಯಾರ್ಥಿಗಳನ್ನು ದೇವಸ್ಥಾನದಿಂದ ಮುಖ್ಯ ರಸ್ತೆ ಮೂಲಕ ಕಾಲೇಜಿನ ತನಕ ವಿಜೃಂಭಣೆಯಿಂದ ಮೆರವಣಿಗೆ ನಡೆಸಲಾಯಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಚಿನ್ನ ಖರೀದಿ ನೆಪದಲ್ಲಿ ಜ್ಯುವೆಲರಿಯಿಂದ ಚಿನ್ನದ ಸರ ಕಳ್ಳತನ- ಆರೋಪಿ ಬಂಧನ

    03/02/2026

    ಕುಂದಾಪುರ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ರಾಜು ದೇವಾಡಿಗ ನಿಧನ

    03/02/2026

    ಗಂಗೊಳ್ಳಿ ಶ್ರೀ ವೀರೇಶ್ವರ ದೇವಸ್ಥಾನದಲ್ಲಿ ಹಿಂದೂ ಸಂಗಮ ಕಾರ್ಯಕ್ರಮ

    03/02/2026
    Leave A Reply Cancel Reply

    two × 2 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಚಿನ್ನ ಖರೀದಿ ನೆಪದಲ್ಲಿ ಜ್ಯುವೆಲರಿಯಿಂದ ಚಿನ್ನದ ಸರ ಕಳ್ಳತನ- ಆರೋಪಿ ಬಂಧನ
    • ಕುಂದಾಪುರ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ರಾಜು ದೇವಾಡಿಗ ನಿಧನ
    • ಗಂಗೊಳ್ಳಿ ಶ್ರೀ ವೀರೇಶ್ವರ ದೇವಸ್ಥಾನದಲ್ಲಿ ಹಿಂದೂ ಸಂಗಮ ಕಾರ್ಯಕ್ರಮ
    • ಕುಂದಾಪುರ: ಟ್ಯಾಟೂ ಕಲಾವಿದನ ಎದೆಗೆ ಗುಂಡು
    • ಜಿಎಸ್‌ಟಿ, ಆದಾಯ ತೆರಿಗೆ ಇಲಾಖೆಯ ದಾಖಲೆಯಂತೆ 52 ಸಾವಿರ ಫಲಾನುಭವಿಗಳಿಗೆ ಸಮಸ್ಯೆ: ಲಕ್ಷ್ಮೀ ಹೆಬ್ಬಾಳಕರ್‌

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.