ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ, ಇವರ ಆಶ್ರಯದಲ್ಲಿ ನಡೆದ 2025 26ನೇ ಸಾಲಿನ ಕಲಾ ಪ್ರತಿಬೋತ್ಸವದ ಜಿಲ್ಲಾ ಮಟ್ಟದ ಬಾಲ ಪ್ರತಿಭೆಯ ಕರ್ನಾಟಕ ಶಾಸ್ತ್ರೀಯ ವಾದ್ಯ ಸಂಗೀತ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಸಂಜಿತ್ ಎಂ. ದೇವಾಡಿಗ ಅವರು ದ್ವಿತೀಯ ಸ್ಥಾನವನ್ನು ಗಳಿಸಿ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಅವರು ಗಂಗೊಳ್ಳಿಯ ಸಾಕ್ಸೋಫೋನ್ ಕಲಾವಿದ ಮಾಧವ ಜಿ. ದೇವಾಡಿಗ ಮತ್ತು ಉಪನ್ಯಾಸಕಿ ಸಾವಿತ್ರಿ ಎಸ್. ದಂಪತಿ ಪುತ್ರ. ವಿದ್ಯಾರ್ಥಿಯ ಸಾಧನೆಯನ್ನು ಶಾಲಾ ಎಸ್‌ಡಿಎಂಸಿ ಬಳಗ ಮುಖ್ಯೋಪಾಧ್ಯಾಯರು ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದದವರು ಅಭಿನಂದಿಸಿದ್ದಾರೆ.










