ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಉಡುಪಿ ಜಿ.ಪಂ., ಕುಂದಾಪುರ ತಾ.ಪಂ., ಆಲೂರು ಗ್ರಾ.ಪಂ. ಹಾಗೂ ಗುಜ್ಜಾಡಿ ಪಶು ಚಿಕಿತ್ಸಾಲಯದ ಸಂಯುಕ್ತ ಆಶ್ರಯದಲ್ಲಿ ಗುಜ್ಜಾಡಿ ಗ್ರಾ.ಪಂ. ವ್ಯಾಪ್ತಿಯ ವಿವಿಧೆಡೆಗಳಲ್ಲಿ ಸಾಕು ನಾಯಿ, ಬೀದಿ ನಾಯಿಗಳು ಹಾಗೂ ಬೆಕ್ಕುಗಳಿಗೆ ಉಚಿತ ರೇಬಿಸ್ ನಿರೋಧಕ ಲಸಿಕಾ ಶಿಬಿರ ಶುಕ್ರವಾರ ನಡೆಯಿತು.
ಗುಜ್ಜಾಡಿ ಗ್ರಾ.ಪಂ. ಅಧ್ಯಕ್ಷ ತಮ್ಮಯ್ಯ ದೇವಾಡಿಗ ಶಿಬಿರವನ್ನು ಉದ್ಘಾಟಿಸಿ, ಶುಭಹಾರೈಸಿದರು. ಗುಜ್ಜಾಡಿಪಶು ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ. ಅರುಣ್ ಕೆ.ಪಿ. ಅವರು, ರೇಬಿಸ್ ರೋಗದಿಂದ ಉಂಟಾಗುವ ದುಷ್ಟರಿಣಾಮಗಳ ಬಗ್ಗೆ ಮಾಹಿತಿ ನೀಡಿದರು.

ಗ್ರಾ.ಪಂ. ಉಪಾಧ್ಯಕ್ಷೆ ಜಲಜಾ ಮೊಗವೀರ, ಗ್ರಾಪಂ. ಸದಸ್ಯರು, ಪಿಡಿಒ ಶೋಭಾ, ಕಾರ್ಯದರ್ಶಿ ಶಕುಂತಲಾ, ಸಿಬಂದಿ, ಪಶು ಸಖಿ, ಗ್ರಾಪಂ ಸಿಬ್ಬಂದಿಗಳು, ಪಶು ಚಿಕಿತ್ಸಾಲಯದ ಸಿಬ್ಬಂದಿಗಳು, ಸಂಜೀವಿನಿ ಸಂಘದ ಅಧ್ಯಕ್ಷರು ಮತ್ತು ಸದಸ್ಯರು, ಮತ್ತಿತರರು ಉಪಸ್ಥಿತರಿದ್ದರು.
ಗುಜ್ಜಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಂಟು ಕಡೆಗಳಲ್ಲಿ ನಡೆದ ಲಸಿಕಾ ಶಿಬಿರದಲ್ಲಿ ಸುಮಾರು 110 ನಾಯಿಗಳಿಗೆ ಲಸಿಕೆ ನೀಡಲಾಯಿತು.










