ಕುಂದಾಪುರ: ಮೈಸೂರಿನ ಕರ್ನಾಟಕ ಕಲಾ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೋಪಾಡಿಯ ರೋಷನ್ ಭಾಸ್ಕರ್ ಪೂಜಾರಿಯವರು 2015-16ನೇ ಸಾಲಿನಲ್ಲಿ ಬೆಂಗಳೂರಿನ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕೊಡಮಾಡುವ ಕನ್ನಡ ಮಾಧ್ಯಮ ಪ್ರಶಸ್ತಿಯನ್ನು ಸ್ವೀಕರಿಸಿದರು. ಕಳೆದ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಕುಂದಾಪುರ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಹಿನ್ನಲೆಯಲ್ಲಿ ಪ್ರಶಸ್ತಿಗೆ ಭಾಜನರಾಗಿದ್ದರು. ಈತ ಉದ್ಯಮಿ ಭಾಸ್ಕರ ಗುಲ್ವಾಡಿ ಮತ್ತು ಕೊಲ್ಲೂರು ಶ್ರೀ ಮೂಕಾಂಬಿಕ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯೆ ಕಲ್ಪನಾ ಭಾಸ್ಕರ್ ಅವರ ಪುತ್ರ.










