ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದ ಎಂ.ಬಿ.ಎ ಮತ್ತು ಎಂ.ಸಿ.ಎ ವಿಭಾಗದ ವತಿಯಿಂದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಎಚ್ಆರ್ ಅಡ್ಮಿನಿಸ್ಟ್ರೇಷನ್ ಲೀಡರ್ ಎಂ.ಜಿ.ಎಂ ಹೆಚ್ ಆರ್ ಬ್ರೈಟ್ ಪೇಕ್ಷಿ ಇಂಟರ್ನ್ಯಾಷನಲ್ ಪ್ರೈವೇಟ್ ಲಿಮಿಟೆಡ್ ದೇವರಾಜು ರಾಮು ಅವರು ಆಗಮಿಸಿ ಮಾತನಾಡಿ, ಒಬ್ಬ ಉತ್ತಮ ಎಚ್.ಆರ್ ನಲ್ಲಿ ಇರಬೇಕಾದ ಗುಣಲಕ್ಷಣಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ತಿಳಿಸಿದರು.
ಎಂ.ಬಿ.ಎ ಮತ್ತು ಎಂ.ಸಿ.ಎ ವಿಭಾಗದ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಎಂ.ಬಿ.ಎ ವಿಭಾಗದ ಮುಖ್ಯಸ್ಥೆ ಡಾ. ಸುಚಿತ್ರ ಪೂಜಾರಿ ಸ್ವಾಗತಿಸಿದರು. ಎಂ.ಸಿ.ಎ ವಿಭಾಗದ ಮುಖ್ಯಸ್ಥೆ ಡಾಕ್ಟರ್ ನಂದಿನಿ ಪ್ರಸ್ತಾವಿದರು. ಸಿಂಚನ ಕಾರ್ಯಕ್ರಮ ನಿರೂಪಿಸಿದರು.










