ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕುಂದಾಪುರದ ರಾಮ ಮಂದಿರದಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ನಡೆಸಿದ ತಾಲೂಕು ಮಟ್ಟದ ಭಗವದ್ಗೀತೆ ಮನ: ಸ್ವಾಸ್ಥ್ಯದ ಕೈಪಿಡಿ ಎಂಬ ವಿಷಯದ ಕುರಿತು ನಡೆಸಿದ ಭಾಷಣ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಮನ್ವಿತಾ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.










