Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಡುಪಿ: ಸರ್ದಾರ್ ವಲ್ಲಭಬಾಯಿ ಪಠೇಲರ 150ನೇ ಜನ್ಮ ದಿನೋತ್ಸವದ ಉದ್ಘಾಟನೆ
    ಉಡುಪಿ ಜಿಲ್ಲೆ

    ಉಡುಪಿ: ಸರ್ದಾರ್ ವಲ್ಲಭಬಾಯಿ ಪಠೇಲರ 150ನೇ ಜನ್ಮ ದಿನೋತ್ಸವದ ಉದ್ಘಾಟನೆ

    Updated:12/11/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಸ್ವಾತಂತ್ರ್ಯ ನಂತರ ಹಂಚಿಹೋಗಿದ್ದ ರಾಜ್ಯಗಳನ್ನು ನಿರ್ಭೀತ ವ್ಯಕ್ತಿತ್ವದಿಂದ ಒಗ್ಗೂಡಿಸಿದವರು ಸರ್ದಾರ್ ವಲ್ಲಭಭಾಯಿ ಪಟೇಲರು: ಸಂಸದ ಕೋಟ

    Click Here

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಸ್ವಾತಂತ್ರ್ಯ ನಂತರ ರಾಜಪ್ರಭುತ್ವಗಳಲ್ಲಿ ಹರಿದು ಹಂಚಿಹೋಗಿದ್ದ ರಾಜ್ಯಗಳನ್ನು ತಮ್ಮ ಧೀಮಂತ ಮತ್ತು ನಿರ್ಭೀತ ವ್ಯಕ್ತಿತ್ವದಿಂದ ಒಗ್ಗೂಡಿಸಿ ಭಾರತದ ಉಕ್ಕಿನ ಮನುಷ್ಯ ಎಂದು ಹೆಸರುವಾಸಿಯಾದರು ಸರ್ದಾರ್ ವಲ್ಲಭಭಾಯಿ ಪಟೇಲರು ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

    ಅವರು ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ, ಭಾರತ ಸರಕಾರ, ಜಿಲ್ಲಾಡಳಿತ ಮತ್ತು ಮೈ ಭಾರತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ಜಿಲ್ಲೆ ಮತ್ತು ಎನ್.ಎಸ್.ಎಸ್., ಎನ್.ಸಿಸಿ, ರೇಂಜ್ ರೋವರ್ಸ್ ಸಂಯುಕ್ತ ಆಶ್ರಯದಲ್ಲಿ ಸರ್ದಾರ್ ವಲ್ಲಭಬಾಯಿ ಪಠೇಲರ 150ನೇ ಜನ್ಮ ದಿನೋತ್ಸವದ ಪ್ರಯುಕ್ತ ಉಡುಪಿ ಬೋರ್ಡ್ ಹೈಸ್ಕೂಲ್ ನಿಂದ ಆರಂಭಗೊಂಡ ಉಡುಪಿ ಜಿಲ್ಲಾ ಮಟ್ಟದ ಆತ್ಮನಿರ್ಭರ ಭಾರತ ಹಾಗೂ ಏಕತಾ ನಡಿಗೆಗೆ ಚಾಲನೆ ನೀಡಿ, ಅಜ್ಜರಕಾಡು ಹುತಾತ್ಮರ ಸ್ಮಾರಕದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ, ಸರ್ದಾರ್ ವಲ್ಲಭಬಾಯಿ ಪಟೇಲರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು

    ಕಾಶ್ಮೀರವೂ ಸೇರಿದಂತೆ ದೇಶದ ಪ್ರತಿ ಗಲ್ಲಿಗಳಲ್ಲಿಯೂ ಭಾರತದ ತ್ರಿವರ್ಣ ಧ್ವಜ ಹಾರಾಡಬೇಕೆಂಬುದು ಸರ್ದಾರ್ ವಲ್ಲಭಭಾಯಿ ಪಟೇಲರ ಕನಸಾಗಿತ್ತು. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 370ನೇ ವಿಧಿಯನ್ನು ರದ್ದು ಮಾಡುವ ಮೂಲಕ ದೇಶದ ಅಖಂಡತೆಯನ್ನು ಎತ್ತಿ ಹಿಡಿದಿದ್ದು ಪಟೇಲರು ಕಂಡ ಕನಸನ್ನು ನನಸಾಗಿಸಿದೆ ಎಂದ ಅವರು, ಜಾತಿ, ವರ್ಗ, ಭಾಷೆಯ ಬೇಧ ಮರೆತು ದೇಶದ ಏಕತೆ, ಸಮಗ್ರತೆ ಮತ್ತು ಅಭಿವೃದ್ದಿಗೆ ಮಾರ್ಗದರ್ಶನ ತೋರಿದ ಸರ್ದಾರ್ ವಲ್ಲಭ ಭಾಯಿ ಪಟೇಲರ ನೆನಪಿಗಾಗಿ ಪ್ರತಿವರ್ಷವೂ ಏಕತೆಗಾಗಿ ಓಟ ಕಾರ್ಯಕ್ರಮವನ್ನು ಹಮ್ಮಿಕೊಂಡು ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

    ದೇಶದ ಪ್ರಪ್ರಥಮ ಉಪ ಪ್ರಧಾನಿಯಾಗಿ ಹಾಗೂ ಗೃಹ ಮಂತ್ರಿಯಾಗಿ ಸರ್ದಾರ್ ವಲ್ಲಭಬಾಯಿ ಪಟೇಲರು ದೇಶವನ್ನು ಒಗ್ಗೂಡಿಸಲು ದಿಟ್ಟ ನಿರ್ಧಾರವನ್ನು ತೆಗೆದುಕೊಂಡ ಫಲವಾಗಿ ಇಂದು ಭಾರತವು ಅಖಂಡವಾಗಿದೆ. ಇಂದಿಗೂ ಅದು ಪ್ರಸ್ತುತ ಎಂದರು.

    Click here

    Click here

    Click here

    Click Here

    Call us

    Call us

    ಅಪರ ಜಿಲ್ಲಾಧಿಕಾರಿ ಅಭೀದ್ ಗದ್ಯಾಳ್ ರಾಷ್ಟ್ರೀಯ ಐಕ್ಯತೆ ಹಾಗೂ ಸಮಗ್ರತೆಯ ಪ್ರತಿಜ್ಞಾ ವಿಧಿ ಭೋಧಿಸಿದರು.

    ಕಾರ್ಯಕ್ರಮದಲ್ಲಿ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ರೆಡ್‌ಕ್ರಾಸ್ ಸಂಸ್ಥೆಯ ರಾಜ್ಯಾಧ್ಯಕ್ಷ ಬಸ್ರೂರು ರಾಜೀವ್ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಶೆಟ್ಟಿ ಕುತ್ಯಾರ್, ಬಿಜೆಪಿ ಮಂಗಳೂರು ಪ್ರಭಾರಿ ಉದಯ್ ಕುಮಾರ್ ಶೆಟ್ಟಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಕಾಲೇಜು ವಿದ್ಯಾರ್ಥಿಗಳು, ಎನ್.ಎಸ್.ಎಸ್, ಎನ್.ಸಿ.ಸಿ, ರೇಂರ‍್ಸ್, ರೋವರ್ಸ್ ಘಟಕದ ಸ್ವಯಂಸೇವಕರು ಭಾಗವಹಿಸಿದ್ದರು.

    ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೆಶಕ ಡಾ. ರೋಷನ್ ಕುಮಾರ್ ಶೆಟ್ಟಿ ಸ್ವಾಗತಿಸಿ, ಪ್ರಶಾಂತ್ ಶೆಟ್ಟಿ ಹಾವಂಜೆ ನಿರೂಪಿಸಿ, ವಂದಿಸಿದರು.

    ಕಾರ್ಯಕ್ರಮಕ್ಕೂ ಮುನ್ನ ಸರ್ದಾರ್ ವಲ್ಲಭಬಾಯಿ ಪಟೇಲರ 150 ನೇ ಜನ್ಮ ದಿನೋತ್ಸವದ ಪ್ರಯುಕ್ತ ಆಯೋಜಿಸಲಾದ ಜಿಲ್ಲಾ ಮಟ್ಟದ ಆತ್ಮನಿರ್ಭರ ಭಾರತ ಹಾಗೂ ಏಕತಾ ನಡಿಗೆಗೆ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ  ಉಡುಪಿಯ ಬೋರ್ಡ್ ಹೈಸ್ಕೂಲ್ ಆವರಣದಲ್ಲಿ ಚಾಲನೆ ನೀಡಿದರು. ಮೆರವಣಿಗೆಯು ನಗರದ ಪ್ರಮುಖ ಬೀದಿಗಳಲ್ಲಿ ಸಾಗಿ ಅಜ್ಜರಕಾಡಿನ ಹುತಾತ್ಮ ಸ್ಮರಣೆ ಭವನದಲ್ಲಿ ಸಮಾರೋಪಗೊಂಡಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026
    Leave A Reply Cancel Reply

    20 − fifteen =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.