ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸಮಾಜದ ಒಳಿತಿಗಾಗಿ ನಿಮ್ಮನ್ನು ತೊಡಗಿಸಿಕೊಳ್ಳಿ ಎಂದು ಸಾಮಾಜಿಕ ಕಾರ್ಯಕರ್ತ ಈಶ್ವರ ಮಲ್ಪೆ ಕರೆ ನೀಡಿದರು.
ಅವರು ಇತ್ತೀಚೆಗೆ ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಿಂದ “ಕೊಮರ್ಸಿಯಾ” ಎಂಬ ವಿದ್ಯಾರ್ಥಿಗಳ ಪ್ರತಿಭೆ ಅನಾವರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸದಾ ಚಟುವಟಿಕೆಯಿಂದ ಇರಬೇಕು. ಅಲ್ಲದೆ ಸದಾ ಸಮಾಜಮುಖಿಯಾಗಿರಿ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ವಹಿಸಿದ್ದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ವಾಣಿಜ್ಯ ವಿಭಾಗದಿಂದ ಮುಖ್ಯಸ್ಥ ಅರುಣ್ ಎ.ಎಸ್, ವಾಣಿಜ್ಯ ಸಂಘದ ಸಂಯೋಜಕರಾದ ಮಮತಾ ಉಪನ್ಯಾಸಕರಾದ ಅಣ್ಣಪ್ಪ ಪೂಜಾರಿ ಉಪಸ್ಥಿತರಿದ್ದರು. ಸ್ಟೆನಿಟಾ ಕಾರ್ಯಕ್ರಮ ನಿರೂಪಿಸಿ, ಶ್ರೀಲಕ್ಷ್ಮೀ ವಂದಿಸಿದರು.










