Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ತನಗಿಂತ ತನ್ನ ದೇಶ ಮೊದಲೆಂದು ಬದುಕಿದ ಒನಕೆ ಓಬವ್ವ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ: ಸಂಸದ ಕೋಟ
    ಉಡುಪಿ ಜಿಲ್ಲೆ

    ತನಗಿಂತ ತನ್ನ ದೇಶ ಮೊದಲೆಂದು ಬದುಕಿದ ಒನಕೆ ಓಬವ್ವ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ: ಸಂಸದ ಕೋಟ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಮುದ್ದ ಹನುಮ ಎಂಬ ಒಬ್ಬ ಸಾಮಾನ್ಯ ಕಾವಲುಗಾರನ ಹೆಂಡತಿ ಓಬವ್ವ ತನ್ನ ರಾಜ್ಯಕ್ಕೆ ಶತ್ರುಗಳಿಂದ ಗಂಡಾಂತರ ಉಂಟಾಗುವ ಸಂದರ್ಭ ಬಂದಾಗ ತನ್ನ ಪ್ರಾಣವನ್ನೂ ಲೆಕ್ಕಿಸದೆ ಮಾತೃಭೂಮಿಗಾಗಿ ಒನಕೆ ಹಿಡಿದು ಶತ್ರುಗಳನ್ನು ಸದೆಬಡಿದು ರಾಜ್ಯದ ರಕ್ಷಣೆ ಮಾಡುತ್ತಾಳೆ. ಆಕೆಯ ಅಪ್ರತಿಮ ಸಾಹಸಕ್ಕಾಗಿ ಇತಿಹಾಸಕಾರರು ಆಕೆಯನ್ನು ಕಿತ್ತೂರು ರಾಣಿ ಚೆನ್ನಮ್ಮ, ರಾಣಿ ಅಬ್ಬಕ್ಕನಂತಹ ವೀರ ಮಹಿಳೆಯರ ಸಾಲಿನಲ್ಲಿ ನಿಲ್ಲಿಸುತ್ತಾರೆ. ತನಗಿಂತ ತನ್ನ ದೇಶ ಮೊದಲೆಂದು ಬದುಕಿದ ಇಂತಹ ವೀರವನಿತೆ ಓಬವ್ವನ ತ್ಯಾಗ, ದೇಶ ಪ್ರೇಮ, ಸ್ವಾಮಿನಿಷ್ಠೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

    Click Here

    Call us

    Click Here

    ಅವರು ಮಂಗಳವಾರ ನಗರದ ಮಣಿಪಾಲ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾದ ವೀರ ವನಿತೆ ಒನಕೆ ಓಬವ್ವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ಒನಕೆ ಓಬವ್ವ ಆತ್ಮರಕ್ಷಣೆಯ ಪ್ರತೀಕ. ಹೆಣ್ಣುಮಕ್ಕಳು ತಮ್ಮ ಆತ್ಮ ರಕ್ಷಣೆಯ ಜೊತೆಗೆ ತನ್ನ ಪ್ರಾಂತ್ಯ, ರಾಜ್ಯ ಮತ್ತು ದೇಶಕ್ಕೋಸ್ಕರ ತಮ್ಮ ಪ್ರಾಣವನ್ನೂ ಲೆಕ್ಕಿಸದೆ ಹೋರಾಡುತ್ತಾರೆ ಎನ್ನುವುದಕ್ಕೆ ಒನಕೆ ಓಬವ್ವ ಸಾಕ್ಷಿ. ಚಿತ್ರದುರ್ಗದ ಕಲ್ಲಿನ ಕೋಟೆ ಕಂಡಾಗಲೆಲ್ಲಾ ಓಬವ್ವನ ಸ್ಮರಣೆಯಾಗುತ್ತದೆ. ಆಕೆಯ ತ್ಯಾಗ, ಬಲಿದಾನ ಮತ್ತು ಸಮರ್ಪಣೆಯನ್ನು ಸ್ಮರಿಸುವ ಸಲುವಾಗಿ ಸರ್ಕಾರವು ಒನಕೆ ಓಬವ್ವಳ ಜಯಂತಿಯನ್ನು ಆಚರಿಸಿ ವಿದ್ಯಾರ್ಥಿಗಳಲ್ಲಿ ದೇಶ ಪ್ರೇಮದ ಭಾವವನ್ನು ಬಿತ್ತುತ್ತಿರುವುದು ಸಂತೋಷದ ವಿಚಾರ ಎಂದರು.

    ಸಮಾಜ ಕಲ್ಯಾಣ ಇಲಾಖೆಯ ಸಚಿವನಾಗಿದ್ದಾಗ ಹೆಣ್ಣು ಮಕ್ಕಳು ತಮ್ಮ ಆತ್ಮರಕ್ಷಣೆ ಮಾಡಿಕೊಳ್ಳುವ ನಿಟ್ಟಿನಲ್ಲಿ ರಾಜ್ಯದ 800 ಶಾಲೆಗಳು ಮತ್ತು 3500 ಹಾಸ್ಟೆಲ್ ಗಳಲ್ಲಿ ಕರಾಟೆ ಕಲಿಸಲು ಮುಂದಾದಾಗ ಅದಕ್ಕೆ ಯಾವ ಹೆಸರಿಡುವುದು ಎನ್ನುವ ಚರ್ಚೆ ನಡೆದಾಗ ಎಲ್ಲರ ಅಭಿಮತವೂ ಒನಕೆ ಓಬವ್ವನ ಹೆಸರಿಡುವುದು ಸೂಕ್ತ ಎಂದಾಗಿತ್ತು. ವಿದ್ಯಾರ್ಥಿನಿಯರ ಆತ್ಮರಕ್ಷಣಾ ಕಲಿಕೆಗೆ ಸರ್ವಾನುಮತದಿಂದ ಒನಕೆ ಓಬವ್ವನ ಹೆಸರನ್ನು ಇಟ್ಟು ಆಕೆಯ ಹೆಸರನ್ನು ಚಿರಸ್ಥಾಯಿಯಾಗಿಸುವ ಪ್ರಯತ್ನ ಮಾಡಿದ್ದೆ. ಜಾತಿ, ಮತ, ನಾನು-ನನ್ನದು ಎನ್ನುವುದಕ್ಕಿಂತ ಭಾರತ ಮೊದಲು ಎನ್ನುವ ಭಾವನೆ ವಿದ್ಯಾರ್ಥಿಗಳಲ್ಲಿ ಮೊಳೆಯಬೇಕು ಅದಕ್ಕೆ ಒನಕೆ ಓಬವ್ವ ಜಯಂತಿ ಸಹಕಾರಿಯಾಗುತ್ತದೆ ಎಂದು ಹೇಳಿದರು.

    ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್ ಮಾತನಾಡಿ, ಕುತಂತ್ರದಿಂದ ಚಿತ್ರದುರ್ಗದ ಕೋಟೆಗೆ ಒಳನುಸುಳಿದ ಹೈದರಾಲಿಯ ಸೈನ್ಯದ ವಿರುದ್ಧ ದಿಟ್ಟತನದಿಂದ ಹೋರಾಡಿದ ವೀರವನಿತೆ ಒನಕೆ ಓಬವ್ವರ ಧೈರ್ಯ, ದೇಶ ಪ್ರೇಮ, ಸದಾ ಸ್ಮರಣೀಯವಾಗಿರುವುದರ ಜೊತೆಗೆ ಸ್ತ್ರೀ ಶಕ್ತಿಯ ಸಂಕೇತವಾಗಿ ಇಂದಿಗೂ ಮಹಿಳೆಯರಿಗೆ ಓಬವ್ವಳ ಹೋರಾಟದ ಮನೋಭಾವ ಸದಾ ಸ್ಫೂರ್ತಿದಾಯಕವಾಗಿದೆ ಎಂದರು.

    Click here

    Click here

    Click here

    Click Here

    Call us

    Call us

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್ ಕಾದ್ರೋಳ್ಳಿ, ಸಮಾಜಕ್ಕೆ ಮಹನೀಯರು, ಮಹಿಳೆಯರು ನೀಡಿದ ಕೊಡುಗೆ, ತ್ಯಾಗ, ಬಲಿದಾನ, ಸಾಧನೆಗಳ ಸಾರ್ಥಕ ಸೇವೆ ಗುರುತಿಸಿ ಜಯಂತಿ ಕಾರ್ಯಕ್ರಮವನ್ನು ಅಯೋಜಿಸಲಾಗುತ್ತಿದೆ ಇಂದಿನ ಯುವ ಪೀಳಿಗೆಯು ಮಹನೀಯರ ಮಹತ್ವವನ್ನು ಅರಿತು ಅವರ ತತ್ವ ಆದರ್ಶಗಳನ್ನು ಪಾಲಿಸುವಂತಾಗಬೇಕು ಎಂದರು. 

    ಕುಂದಾಪುರದ ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಒನಕೆ ಓಬವ್ವರ ಕುರಿತು ವಿಶೇಷ ಉಪನ್ಯಾಸ ನೀಡಿದರು.

    ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಕೋಶದ ಸುಬ್ರಮಣ್ಯ ಶೆಟ್ಟಿ, ಮಣಿಪಾಲ ಹೈಸ್ಕೂಲ್ ಟ್ರಸ್ಟ್ ಹಾಗೂ ಮ ಣಿಪಾಲ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿ, ಕಾಲೇಜಿನ ಉಪಪ್ರಾಂಶುಪಾಲ ನಾಗೇಂದ್ರ ಪೈ ಮತ್ತಿತರರು ಉಪಸ್ಥಿತರಿದ್ದರು.  

    ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿದರು, ವರ್ಷಾ ನಿರೂಪಿಸಿ, ಕಾಲೇಜಿನ ಹಿರಿಯ ಶಿಕ್ಷಕ ಸಚ್ಚಿದಾನಂದ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    21/05/2026

    ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ

    21/05/2026

    ಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್‌ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಮಂಡಳಿ ದಿನಾಚರಣೆ

    20/05/2026
    Leave A Reply Cancel Reply

    eight + fourteen =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.