Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಚಿವದ್ವಯರಿಗೆ ಬೈಂದೂರು ಪಟ್ಟಣ ಪಂಚಾಯತ್ ಸಮಸ್ಯೆಗಳ ಮನವರಿಕೆ ಮಾಡಿದ ಬೈಂದೂರು ಶಾಸಕ ಗಂಟಿಹೊಳೆ
    ಊರ್ಮನೆ ಸಮಾಚಾರ

    ಸಚಿವದ್ವಯರಿಗೆ ಬೈಂದೂರು ಪಟ್ಟಣ ಪಂಚಾಯತ್ ಸಮಸ್ಯೆಗಳ ಮನವರಿಕೆ ಮಾಡಿದ ಬೈಂದೂರು ಶಾಸಕ ಗಂಟಿಹೊಳೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ಅವರುಗಳೊಂದಿಗೆ ಸರಣಿ ಸಭೆ ಗಳನ್ನು ನಡೆಸಿ ಬೈಂದೂರು ಪಟ್ಟಣ ಪಂಚಾಯತ್ ಗೆ ಸಂಬಂಧಿಸಿದಂತೆ ಗ್ರಾಮೀಣ ರೈತರಿಗೆ ಪಟ್ಟಣ ಪಂಚಾಯತ್ ನ ನಿಯಮಗಳಿಂದ ಆಗುತ್ತಿರುವ ಸಂಕಷ್ಟಗಳ ಕುರಿತು ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಅವರನ್ನು ಹಾಗೂ ಮಾನ್ಯ ಪೌರಾಡಳಿತ ಸಚಿವರಾದ ರಹೀಮ್ ಖಾನ್ ಅವರನ್ನು ಮತ್ತು ಪೌರಾಡಳಿತ ಇಲಾಖೆಯ ಕಾರ್ಯದರ್ಶಿಗಳಾದ ದೀಪ ಎಂ. ಚೋಳನ್ ಅವರನ್ನು ಭೇಟಿ ಮಾಡಿದರು.

    Click Here

    Call us

    Click Here

    ಬೈಂದೂರು ವಿಧಾನಸಭಾ ಕ್ಷೇತ್ರದ ಪ್ರಮುಖರೊಂದಿಗೆ ಬೆಂಗಳೂರಿಗೆ ತೆರಳಿದ ಶಾಸಕರು ಸಚಿವರಿಗೆ ಮನವರಿಕೆ ಮಾಡಿದರು. ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗುವ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಪ್ರಸ್ತುತ ಇರುವ ಬೈಂದೂರು ಪಟ್ಟಣ ಪಂಚಾಯತ್‌ನ ಗ್ರಾಮೀಣ ಭಾಗವನ್ನು ಕೈ ಬಿಟ್ಟು ಹೊಸದಾಗಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯನ್ನು ಮರುವಿಂಗಡಣೆ ಮಾಡಿ, ಬಫರ್ ಜೋನ್ ಮಿತಿಯನ್ನು ಕೈಬಿಟ್ಟು, ಆ ಪ್ರದೇಶದಲ್ಲಿ ಗ್ರಾಮ ಪಂಚಾಯತ್ ಗಳಿಗೆ ಅನ್ವಯಿಸುವ ನಿಯಮಗಳನ್ನು ಅಳವಡಿಸುವ ಮೂಲಕ ಅಕ್ರಮ ಸಕ್ರಮ, 94 ಸಿ ಮತ್ತು ಕುಮ್ಕಿ ಹಾಗೂ ವಸತಿ ಯೋಜನೆ ಸೇರಿದಂತೆ ಇತರೆ ಎಲ್ಲಾ  ಸರಕಾರಿ ಯೋಜನೆಗಳ  ಹಕ್ಕು ಗಳನ್ನು ರೈತರಿಗೆ ನೀಡುವ ಮುಖೇನ ಗ್ರಾಮೀಣ ಬಡ ಜನರ ಹಿತ ಕಾಪಾಡಲು ಕ್ರಮ ವಹಿಸುವ ಬಗ್ಗೆ ಪತ್ರದ ಮುಖೇನ  ಮನವಿ ಮಾಡಿದರು.

    ಪಟ್ಟಣ ಪಟ್ಟಣ ಪಂಚಾಯತ್ ನಿಂದ ಪ್ರಸ್ತುತ ಜನರಿಗೆ ಆಗುತ್ತಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಮೂಲ ಸೌಕರ್ಯ ಕೊರತೆಗಳ ಬಗ್ಗೆ ಮೌಖಿಕವಾಗಿ ಮಾನ್ಯ ಸಚಿವರುಗಳು ಹಾಗೂ ಪೌರಾಡಳಿತ ಇಲಾಖೆಯ ಕಾರ್ಯದರ್ಶಿಗಳ ಗಮನಕ್ಕೆ ತರುವ ಮೂಲಕ ವಿಸ್ತೃತವಾಗಿ ಚರ್ಚಿಸುವ ಮೂಲಕ, ಈ ಕುರಿತು ಆದ್ಯತೆ ಮೇರೆಗೆ ಕ್ರಮ ವಹಿಸುವಂತೆ ಕೋರಿದರು.

    ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಮಾನ್ಯ ಸಚಿವದ್ವಯರು ಹಾಗೂ ಕಾರ್ಯದರ್ಶಿಗಳು ಅತಿ ಶೀಘ್ರದಲ್ಲಿ ಈ ಬಗ್ಗೆ ಆದ್ಯತೆ ಮೇರೆಗೆ ನಿಯಮಾನುಸಾರ ಕ್ರಮವಹಿಸಿ ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವ ಭರವಸೆಯನ್ನು ನೀಡಿದ್ದಾರೆ.

    ಈ ವೇಳೆ ಜಿಲ್ಲಾ ಪಂಚಾಯತ್‌ ಮಾಜಿ ಸದಸ್ಯ ಸುರೇಶ್‌ ಬಟ್ವಾಡಿ, ಮುಖಂಡರುಗಳಾದ ಗೋಪಾಲಕೃಷ್ಣ ಕಲ್ಮಕ್ಕಿ, ಗೋಪಾಲ ವಸ್ರೆ ಮೊದಲಾದವರು ಜೊತೆಗಿದ್ದರು.

    Click here

    Click here

    Click here

    Call us

    Call us

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ

    04/02/2026

    ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    04/02/2026

    ಸಾಲಿಗ್ರಾಮದಲ್ಲಿ ಬೃಹತ್ ಹಿಂದೂ ಸಂಗಮ, ಶೋಭಾಯಾತ್ರೆ

    04/02/2026
    Leave A Reply Cancel Reply

    10 − six =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.