Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನಗರ, ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆ: ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ನಗರ, ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆ: ಅರ್ಜಿ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ವಿಕಲಚೇತನರಿಗಾಗಿ ಇಲಾಖೆಯ ಸೌಲಭ್ಯಗಳನ್ನು ತಲುಪಿಸಲು ಜಿಲ್ಲೆಯ ನಗರಸಭೆ ವ್ಯಾಪ್ತಿಯಲ್ಲಿ 02, ಪುರಸಭೆ ಮತ್ತು ಪಟ್ಟಣ ಪಂಚಾಯತ್‌ಗಳಲ್ಲಿ ತಲಾ 1 ರಂತೆ “ನಗರ ಪುನರ್ವಸತಿ ಕಾರ್ಯಕರ್ತರ” (ಯು.ಆರ್. ಡಬ್ಲ್ಯೂ) ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತಲಾ 1 ರಂತೆ “ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ” (ವಿ.ಆರ್. ಡಬ್ಲ್ಯೂ) ನೇಮಕಾತಿಗಾಗಿ, ಮಾಸಿಕ 10,000 ರೂ. ಗಳಂತೆ ಗೌರವಧನ ಆಧಾರದಲ್ಲಿ ಸೇವೆ ಸಲ್ಲಿಸಬಯಸುವ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

    Click Here

    Call us

    Click Here

    ವಿ.ಆರ್. ಡಬ್ಲ್ಯೂ ನೇಮಕಾತಿಗಾಗಿ ಬಾಕಿ ಇರುವ ಗ್ರಾ.ಪಂ. ವಿವರ: ಉಡುಪಿ ತಾಲೂಕಿನ  ಕೆಮ್ಮಣ್ಣು, ಕಡೆಕಾರು ಹಾಗೂ ಮಣಿಪುರ, ಬ್ರಹ್ಮಾವರ ತಾಲೂಕಿನ  ಹಾರಾಡಿ, ಕೋಡಿ, ಹೆಗ್ಗುಂಜೆ ಹಾಗೂ ಪಾಂಡೇಶ್ವರ, ಹೆಬ್ರಿ ತಾಲೂಕಿನ ಶಿವಪುರ, ಕಾಪು ತಾಲೂಕಿನ ಬೆಳಪು, ಮಜೂರು ಹಾಗೂ ಹೆಜಮಾಡಿ, ಕುಂದಾಪುರ ತಾಲೂಕಿನ ವಂಡ್ಸೆ ಮತ್ತು ಕೆರಾಡಿ, ಕಾರ್ಕಳ ತಾಲೂಕಿನ ನಿಟ್ಟೆ ಹಾಗೂ ಪಳ್ಳಿ. ಯು.ಆರ್. ಡಬ್ಲ್ಯೂ ನೇಮಕಾತಿಗಾಗಿ ಕುಂದಾಪುರ ಪುರಸಭೆ.

    ಎಸ್.ಎಸ್.ಎಲ್.ಸಿ ಉತ್ತೀರ್ಣ/ಅನುತ್ತೀರ್ಣರಾಗಿರುವ, ಶೇ.40 ಕ್ಕಿಂತ ಮೇಲ್ಪಟ್ಟು ವಿಕಲತೆ ಬಗ್ಗೆ ವೈದ್ಯಕೀಯ ಪ್ರಾಧಿಕಾರದಿಂದ ನೀಡಲ್ಪಟ್ಟಿರುವ ವಿಕಲಚೇತನರ ವಿಶಿಷ್ಟ ಗುರುತುಚೀಟಿ ಮತ್ತು ವೈದ್ಯಕೀಯ ಪ್ರಮಾಣ ಪತ್ರ ಹೊಂದಿರುವ ವಿಕಲಚೇತನರು, ತಮ್ಮ ವಾಸ್ತವ್ಯ ದೃಢೀಕರಣ ಪತ್ರ ಹಾಗೂ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ಇಲ್ಲಿಗೆ ಡಿಸೆಂಬರ್ 10 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

    ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ ದೂ.ಸಂಖ್ಯೆ: 0820-2574810, 2574811 ಅಥವಾ ಆಯಾ ತಾಲೂಕು ಪಂಚಾಯತ್‌ನಲ್ಲಿರುವ ಎಂ.ಆರ್. ಡಬ್ಲ್ಯೂ. (ವಿವಿಧೋದ್ಧೇಶ ಪುನರ್ವಸತಿ ಕಾರ್ಯಕರ್ತರು) ರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘ: ಕಾರ್ಯಕಾರಿ ಸಮಿತಿ ಸದಸ್ಯರಾಗಿ ಉದಯ ಪಡಿಯಾರ್‌, ಅಜಿತ್ ಆರಾಡಿ ಆಯ್ಕೆ

    03/02/2026

    ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    03/02/2026

    ಜಿಲ್ಲೆಯಲ್ಲಿ ಸಿ.ಎನ್.ಜಿ ಗ್ಯಾಸ್ ವಿತರಣಾ ಸಮಸ್ಯೆಗಳನ್ನು ಕೂಡಲೇ ಪರಿಹರಿಸಿ: ಸ್ವರೂಪ ಟಿ.ಕೆ

    31/01/2026
    Leave A Reply Cancel Reply

    20 − 16 =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.