ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಬ್ರಹ್ಮಾವರ ತಾಲೂಕು ಘಟಕದ ಸಾಹಿತ್ಯ ಪ್ರೇರಣೆ ಕಾರ್ಯಕ್ರಮವು ಇತ್ತೀಚಿಗೆ ಲಕ್ಷ್ಮಿ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟ ಪಡುಕರೆ ಅಲ್ಲಿ ನಡೆಯಿತು.
ಅಧ್ಯಕ್ಷತೆಯನ್ನು ಕಾಲೇಜಿನ ಪ್ರೊಫೆಸರ್ ರಮೇಶ್ ಆಚಾರ್ ವಹಿಸಿ ವಿದ್ಯಾರ್ಥಿಗಳಿಗೆ ಸಾಹಿತ್ಯದ ಮಹತ್ವವನ್ನ ವಿವರಿಸಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಪರೀಕ್ಷೆಗೆ ಸ್ಪರ್ಧೆಗೆ ಸಿದ್ಧಪಡಿಸುವುದಲ್ಲ ಮಾಹಿತಿ ಹೊತ್ತ ಹೃದಯವಂತರನ್ನು ಸೃಷ್ಟಿಸುವ ಕಾರ್ಯಕ್ರಮ ಇದು ಎಂದು ಸಾಹಿತಿಗಳ ಬರವಣಿಗೆಯ ಬಗ್ಗೆ ವಿವರಿಸಿದರು.
ಕಸಾಪ ಗೌರವ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಇವರು ಕಥೆಗಳ ಮೂಲಕ ಸಾಹಿತ್ಯ ಆಸಕ್ತಿಯನ್ನು ಬೆಳೆಸಿದರು. ಸುಪ್ರೀತಾ ಪುರಾಣಿಕ್ ಇವರು ಯಕ್ಷಗಾನ ಮತ್ತು ಜಾನಪದ ಗೀತೆಯ ಮಹತ್ವವನ್ನು ತಿಳಿಸಿದರು.
ಕಸಾಪ ತಾಲೂಕು ಅಧ್ತಯಕ್ಷ ಗುಂಡ್ಮಿ ರಾಮಚಂದ್ರ ಐತಾಳ್ ಇವರು ಭಾವಾಭಿನಯ ಪ್ರದರ್ಶಿಸಿ ಅಭಿನಯದ ಬಗ್ಗೆ ಆಸಕ್ತಿ ಮೂಡಿಸಿದರು. ಅಚ್ಚುತ ಪೂಜಾರಿ ಯವರು ಕನ್ನಡ ಗೀತೆಯನ್ನು ಹಾಡಿ ರಂಜಿಸಿದರು. ಕಾಲೇಜಿನ ಸಹಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಉಪಸ್ಥಿತರಿದ್ದು ಶುಭ ಹಾರೈಸಿದರು.
ಉಪನ್ಯಾಸಕ ಡಾ. ಶಂಕರ್ ನಾಯ್ಕ್ ಅವರು ಏಕತಾ ದಿನದ ಮಹತ್ವವನ್ನು ವಿವರಿಸಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಪ್ರಾಧ್ಯಾಪಕ ರಾಮಚಂದ್ರ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.















