ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿ. ಉಪ್ಪುಂದ ಇವರುಗಳ ಸಂಯುಕ್ತ ಆಶ್ರಯದಲ್ಲಿ 72ನೇ ಅಖಿಲ ಭಾರತ ಸಹಕಾರಿ ಸಪ್ತಾಹ ಹಾಗೂ ಪ್ರತಿಭಾ ಪುರಸ್ಕಾರ, ಸನ್ಮಾನ, ಗೌರವ ಧನ ವಿತರಣಾ ಸಮಾರಂಭವು ನ.15ರ ಶನಿವಾರ ಪೂರ್ವಾಹ್ನ 10.30ಕ್ಕೆ ನಾಗೂರು ಶ್ರೀ ಕೃಷ್ಣ ಲಲಿತ ಕಲಾಮಂದಿರದಲ್ಲಿ ಜರುಗಲಿದೆ.
ಸಮಾರಂಭದ ಉದ್ಘಾಟನೆಯನ್ನು ಮಾಜಿ ಸಂಸದರಾದ ಕೆ. ಜಯಪ್ರಕಾಶ್ ಹೆಗ್ಡೆ ಅವರು ನೆರವೇರಿಸಲಿದ್ದಾರೆ. ಖಂಬದಕೋಣೆ ರೈ.ಸೇ.ಸ.ಸಂಘದ ಅಧ್ಯಕ್ಷರಾದ ಎಸ್. ಪ್ರಕಾಶ್ವಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಈ ವೇಳೆ ವಿವಿಧ ಅತಿಥಿ ಗಣ್ಯರು ಉಪಸ್ಥಿರರಿರಲಿದ್ದಾರೆ. ಪ್ರತಿಭಾ ಪುರಸ್ಕಾರ, ಸನ್ಮಾನ, ಗೌರವ ಧನ ವಿತರಣೆ, ಸಹಕಾರ ಶಿಕ್ಷಣ ನಿಧಿ ವಿತರಣೆ, ನಿವೃತ್ತರಿಗೆ ಸನ್ಮಾನ ಕಾರ್ಯಕ್ರಮಗಳು ನಡೆಯಲಿದೆ.
“ಆತ್ಮನಿರ್ಭರ ಭಾರತ ಸಾಧನೆಗೆ ವಾಹಕಗಳಾಗಿ ಸಹಕಾರ ಸಂಸ್ಥೆಗಳು” ವಿಷಯವಾಗಿ ತರಬೇತುದಾರ ರಾಜೇಂದ್ರ ಭಟ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಿಇಓ ವಿಷ್ಣು ಪೈ ಎನ್. ಮತ್ತು ಉಪಾಧ್ಯಕ್ಷರಾದ ಮಂಜ ದೇವಾಡಿಗ ಹಾಗೂ ಆಡಳಿತ ಮಂಡಳಿ ತಿಳಿಸಿದೆ.















