ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಂದಿನ ಆಧುನಿಕ ಯುಗದಲ್ಲಿ ಮಕ್ಕಳು ಗ್ರಾಮೀಣ ಕ್ರೀಡೆಗಳಿಂದ ದೂರ ಸರಿಯುತ್ತಿದ್ದಾರೆ. ಗ್ರಾಮೀಣ ಕ್ರೀಡೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಅಗತ್ಯತೆ ಇದೆ. ಇತರ ಕ್ರೀಡೆಗಳಿಂದ ಗ್ರಾಮೀಣ ಕ್ರೀಡೆಗಳಿಂದ ದೈಹಿಕವಾಗಿ ಹಾಗೂ ಮಾನಸಿಕವಾಗಿ ಹೆಚ್ಚು ಲಾಭವಿದೆ. ಗ್ರಾಮೀಣ ಕ್ರೀಡೆಗಳನ್ನು ಹೆಚ್ಚೆಚ್ಚು ಪ್ರೋತ್ಸಾಹಿಸಿವುದರ ಜೊತೆಗೆ ಅದರ ಬೆಳವಣಿಗೆಗೂ ನಾವು ಕೈಜೋಡಿಸಬೇಕು ಎಂದು ಗಂಗೊಳ್ಳಿ ಜಿ.ಎಸ್.ವಿ.ಎಸ್. ಅಸೋಸಿಯೇಶನ್ ಅಧ್ಯಕ್ಷ ಡಾ. ಕಾಶೀನಾಥ ಪೈ ಹೇಳಿದರು.
ಅವರು ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್ ಗಂಗೊಳ್ಳಿ ಇದರ ಸುವರ್ಣ ಮಹೋತ್ಸವದ ಅಂಗವಾಗಿ ಜಿ.ಎಸ್.ವಿ.ಎಸ್. ಅಸೋಸಿಯೇಶನ್ ಗಂಗೊಳ್ಳಿ, ಎಸ್. ವಿ. ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿ ಮತ್ತು ಸರಸ್ವತಿ ವಿದ್ಯಾಲಯ ಪ್ರೌಢಶಾಲೆ ಗಂಗೊಳ್ಳಿ ಇವರ ಸಹಭಾಗಿತ್ವದಲ್ಲಿ ಗಂಗೊಳ್ಳಿಯ ಎಸ್.ವಿ. ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಶುಕ್ರವಾರ ಆಯೋಜಿಸಲಾದ ಗ್ರಾಮೀಣ ಕ್ರೀಡೆಗಳ ಹಬ್ಬ ’ಆಡುಂಬೋಲ’ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್‌ನ ಹಿರಿಯ ಸದಸ್ಯ ಜಿ.ಉದಯಶಂಕರ ರಾವ್ ಕ್ರೀಡಾ ಹಬ್ಬಕ್ಕೆ ಚಾಲನೆ ನೀಡಿದರು. ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಜಿ.ವೆಂಕಟೇಶ ಶೆಣೈ ಅವರು ಟ್ರೋಫಿಗಳನ್ನು ಅನಾವರಣ ಮಾಡಿದರು. ಜಿ.ಎಸ್.ವಿ.ಎಸ್. ಅಸೋಸಿಯೇಶನ್ ಸದಸ್ಯ ಕೆ. ರಾಮನಾಥ ನಾಯಕ್, ಎಸ್.ವಿ. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ. ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ ಗೋಪಾಲ ದೇವಾಡಿಗ, ಎಸ್‌ಆರ್‌ಎಸ್‌ಸಿ ಕಾರ್ಯದರ್ಶಿ ಹರೀಶ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.
ಸಹ ಶಿಕ್ಷಕಿ ಸುಜಾತಾ ಕಾರ್ಯಕ್ರಮ ನಿರ್ವಹಿಸಿದರು. ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ್ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕರಾದ ಸೂರಜ್ ಸಾರಂಗ್ ಮತ್ತು ನಿರಂಜನ್ ಖಾರ್ವಿ ಸಹಕರಿಸಿದರು.










