Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬಿಜೆಪಿ ಯುವ ಮೋರ್ಚಾದ ರಾಜಕೀಯ ದಿವಾಳಿತನದ ಹೇಳಿಕೆ: ಕೆ. ವಿಕಾಸ್ ಹೆಗ್ಡೆ
    ಊರ್ಮನೆ ಸಮಾಚಾರ

    ಬಿಜೆಪಿ ಯುವ ಮೋರ್ಚಾದ ರಾಜಕೀಯ ದಿವಾಳಿತನದ ಹೇಳಿಕೆ: ಕೆ. ವಿಕಾಸ್ ಹೆಗ್ಡೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ
    : ಕಾಂಗ್ರೆಸ್ ಪಕ್ಷದ ವೋಟ್ ಚೋರಿ ಅಭಿಯಾನದ ವಿರುದ್ಧ ದಕ್ಷಿಣ ಕನ್ನಡ ಬಿಜೆಪಿ ಯುವ ಮೋರ್ಚಾ ದೂರು ನೀಡಿರುವುದು ಅವರ ರಾಜಕೀಯ ದಿವಾಳಿತನವನ್ನು ತೋರಿಸುತ್ತದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಲೇವಡಿ ಮಾಡಿದ್ದಾರೆ.

    Click Here

    Call us

    Click Here

    ಕಾಂಗ್ರೆಸ್ ಪಕ್ಷ ವೋಟ್ ಚೋರಿ ವಿರುದ್ಧ ದೇಶ ವ್ಯಾಪ್ತಿ ನಡೆಸುತ್ತಿರುವ ಸಹಿ ಸಂಗ್ರಹ ಅಭಿಯಾನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಸಹ್ಯಾದ್ರಿ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಸಹಿ ಹಾಕಿರುವ ಬಗ್ಗೆ ದಕ್ಷಿಣ ಕನ್ನಡ ಬಿಜೆಪಿ ಯುವ ಮೋರ್ಚಾ ದೂರು ನೀಡಿರುವುದು ಮತ್ತು ಇದರಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷರೂ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ ಅವರ ಮೇಲೆ ಆರೋಪ ಮಾಡಿರುವುದು ಬಿಜೆಪಿ ಯುವ ಮೋರ್ಚಾದವರ ರಾಜಕೀಯ ದಿವಾಳಿತನವಾಗಿದೆ.

    ಸಹ್ಯಾದ್ರಿ ತಾಂತ್ರಿಕ ಮಹಾ ವಿದ್ಯಾಲಯ ದೇಶದ ಭವಿಷ್ಯವಾಗಿರುವ ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆ ಮಾಡುವ ಒಂದು ಸಂಸ್ಥೆ. ಇಲ್ಲಿ ವಿದ್ಯಾರ್ಜನೆ ಮಾಡುವ ವಿದ್ಯಾರ್ಥಿಗಳು ಪ್ರಬುದ್ಧತೆ ಹೊಂದಿರುವ, ರಾಜಕೀಯ ಪ್ರಜ್ಞೆ ಇರುವ, ಹದಿನೆಂಟು ವರ್ಷ ತುಂಬಿ ಸಂವಿಧಾನ ಬದ್ಧವಾಗಿ ಮತದಾನದ ಹಕ್ಕನ್ನು ಹೊಂದಿರುವವರಾಗಿದ್ದಾರೆ. ಇವರಿಗೆ ಸಹಿ ಹಾಕುವ ಮೊದಲು ಯಾವುದು ಸರಿ, ಯಾವುದು ತಪ್ಪು ಎಂದು ಆಲೋಚನೆ ಮಾಡುವ ಶಕ್ತಿಯನ್ನು ಹೊಂದಿದವರಾಗಿದ್ದಾರೆ.

    ಬಿಜೆಪಿ ಯುವ ಮೋರ್ಚಾದವರು ದೇಶದ ಇತಿಹಾಸ ತಿಳಿದು ಮಾತನಾಡುವುದು ಉತ್ತಮ ಸ್ವಾತಂತ್ರ್ಯ ಸಂಗ್ರಾಮದಿಂದ ಹಿಡಿದು ದೇಶದ ಹೆಚ್ಚಿನ ಹೋರಾಟ, ಚಳುವಳಿಗಳಲ್ಲಿ ಪ್ರಮುಖ ಪಾತ್ರವಹಿಸಿದ ಸಂಘಟನೆಗಳಲ್ಲಿ ವಿದ್ಯಾರ್ಥಿ ಸಂಘಟನೆಗಳು ಮುಂಚೂಣಿಯಲ್ಲಿ ಬರುತ್ತವೆ. ಇವತ್ತು ಚುನಾವಣಾ ಆಯೋಗ ಒಂದು ಸ್ವಾಯತ್ತ ಸಂಸ್ಥೆಯಾದರೂ ಕೂಡ ಅದು ಕರ್ತವ್ಯ ನಿರ್ವಹಿಸುತ್ತಿರುವುದು ಅಂಬೇಡ್ಕರ್ ಕೊಟ್ಟ ಸಂವಿಧಾನದ ಅಡಿಯಲ್ಲಿ ಹಾಗೂ ಇದರ ತಪ್ಪುಗಳನ್ನು ಟೀಕಿಸುವ ಅಧಿಕಾರ ಪ್ರತಿಯೊಬ್ಬ ಭಾರತೀಯ ನಾಗರಿಕನಿಗೆ ಇದೆ.

    ಇವತ್ತು ಕಾಂಗ್ರೆಸ್ ಪಕ್ಷ ವೋಟ್ ಚೋರಿ ವಿರುದ್ಧ ನಡೆಸುತ್ತಿರುವ ಸಹಿ ಸಂಗ್ರಹ ಅಭಿಯಾನದಲ್ಲಿ ಸಹ್ಯಾದ್ರಿ ತಾಂತ್ರಿಕ ಮಹಾ ವಿದ್ಯಾಲಯದ ವಿದ್ಯಾರ್ಥಿಗಳು ಪಾಲ್ಗೊಂಡರೆ, ಸಹಿ ಮಾಡಿದರೆ ಅದು ತಪ್ಪಲ್ಲಾ ಎನ್ನುವ ಸಾಮಾನ್ಯ ಜ್ಞಾನವನ್ನು ಬಿಜೆಪಿ ಯುವ ಮೋರ್ಚಾ ಹೊಂದುವುದು ಉತ್ತಮ. ಇನ್ನು ಮಂಜುನಾಥ್ ಭಂಡಾರಿಯಂತಹ ಪ್ರಬುದ್ಧ ರಾಜಕಾರಣಿ ವಿರುದ್ಧ ಬಿಜೆಪಿ ಯುವ ಮೋರ್ಚಾ ಟೀಕೆ ಮಾಡುತ್ತಿರುವುದು ಬಿಜೆಪಿ ಯುವ ಮೋರ್ಚಾದವರ ರಾಜಕೀಯ ದಿವಾಳಿತನವನ್ನು ಏತ್ತಿ ತೋರಿಸುತ್ತಿದೆ.

    Click here

    Click here

    Click here

    Call us

    Call us

    ಸಹ್ಯಾದ್ರಿ ತಾಂತ್ರಿಕ ಮಹಾ ವಿದ್ಯಾಲಯ ಜಾತಿ, ಧರ್ಮ, ಮತ, ಪಕ್ಷ, ಭಾಷೆ ಎಲ್ಲವನ್ನೂ ಮೀರಿ ಸರ್ವರಿಗೂ ವಿದ್ಯಾಧಾನ ಮಾಡುವ ದಕ್ಷಿಣ ಕನ್ನಡ ಮಾತ್ರವಲ್ಲಾ ನಮ್ಮ ರಾಜ್ಯದ ಒಂದು ಹೆಮ್ಮೆಯ ಸಂಸ್ಥೆ ಇಂತಾ ಸಂಸ್ಥೆಯ ವಿರುದ್ಧ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವುದನ್ನು ಬಿಜೆಪಿ ಯುವ ಮೋರ್ಚಾ ಇನ್ನಾದರೂ ನಿಲ್ಲಿಸಲಿ ಎಂದು ಅವರು ಪತ್ರಿಕಾ ಹೇಳಿಕೆ ಮೂಲಕ ಆಗ್ರಹ ಮಾಡಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅ.11ರಿಂದ ಹಳಗೇರಿ ಶ್ರೀ ಕೊಕ್ಕೇಶ್ವರ ಹಾಗೂ ಶ್ರೀ ವನದುರ್ಗಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವ

    07/10/2026

    ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

    07/10/2026

    ಸುಜ್ಞಾನ ನ್ಯಾಷನಲ್ ಪಿಯು ಕಾಲೇಜು ‘ಆಡ್-ವೆಂಚರ್‌ʼ ಜಾಹೀರಾತು ಸ್ಪರ್ಧೆ ಯಶಸ್ವಿ

    07/10/2026
    Leave A Reply Cancel Reply

    1 × two =

    Call us

    Click Here

    Call us

    Call us

    Call us
    Highest Viewed Recently
    • ನನ್ನಿಂದ ವಿಶ್ವಕರ್ಮ ಸಮುದಾಯದ ನಿಂದನೆಯಾಗಿಲ್ಲ. ಹಾಗಾಗಿ ವಿಷಾದವೂ ಇಲ್ಲ, ಕ್ಷಮೆಯೂ ಇಲ್ಲ: ಎ.ಎಸ್.ಎನ್. ಹೆಬ್ಬಾರ್ ಸ್ಪಷ್ಟೀಕರಣ
    • ಅ.11ರಿಂದ ಹಳಗೇರಿ ಶ್ರೀ ಕೊಕ್ಕೇಶ್ವರ ಹಾಗೂ ಶ್ರೀ ವನದುರ್ಗಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವ
    • ಉಡುಪಿ: ಶುಲ್ಕ ಮರುಪಾವತಿ ಯೋಜನೆಗೆ ಅರ್ಜಿ ಆಹ್ವಾನ
    • ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ
    • ಸುಜ್ಞಾನ ನ್ಯಾಷನಲ್ ಪಿಯು ಕಾಲೇಜು ‘ಆಡ್-ವೆಂಚರ್‌ʼ ಜಾಹೀರಾತು ಸ್ಪರ್ಧೆ ಯಶಸ್ವಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.