ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲ ನಿ. ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಇವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು, ನವೋದಯ ಗ್ರಾಮವಿಕಾಸ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೃಷಿ ಪತ್ತಿನ ಸಹಕಾರ ಸಂಘಗಳು, ಪಟ್ಟಣ ಸಹಕಾರ ಬ್ಯಾಂಕ್‌ಗಳು, ಸೌಹಾರ್ದ ಸಹಕಾರ ಸಂಘಗಳು ಹಾಗೂ ಸಹಕಾರ ಇಲಾಖೆ ಸಹಯೋಗದಲ್ಲಿ ಮಂಗಳೂರಿನಲ್ಲಿ ಭಾನುವಾರ ನಡೆದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ -2025ರಲ್ಲಿ ಗಂಗೊಳ್ಳಿ ಟೌನ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಲಿ. ಸಂಸ್ಥೆಗೆ ಉತ್ತಮ ಸಹಕಾರಿ ಸಂಘ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲ ನಿರ್ದೇಶಕ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್.ರಾಜೇಂದ್ರ ಕುಮಾರ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಅಧ್ಯಕ್ಷ, ಶಾಸಕ ಜಿ.ಟಿ.ದೇವೇಗೌಡ ಪ್ರಶಸ್ತಿಯನ್ನು ಗಂಗೊಳ್ಳಿ ಟೌನ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಜಿ.ವೆಂಕಟೇಶ ಶೆಣೈ ಅವರಿಗೆ ಪ್ರದಾನ ಮಾಡಿದರು.
ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಕಿಶೋರ್ ಕುಮಾರ್, ನಬಾರ್ಡ್ ಸಂಸ್ಥೆಯ ಮುಖ್ಯಸ್ಥ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರು, ಇಲಾಖೆ ಅಧಿಕಾರಿಗಳು, ಗಂಗೊಳ್ಳಿ ಟೌನ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ನಿರ್ದೇಶಕರಾದ ಬಿ.ರಾಘವೇಂದ್ರ ಪೈ, ಕೆ.ಗೋಪಾಲಕೃಷ್ಣ ನಾಯಕ್, ಗೀತಾ ಜಿ.ನಾಯಕ್, ಮುಖ್ಯ ಕಾರ್ಯನಿರ್ವಾಹಕ ಗಣೇಶ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.










